ಮಾ.22 ರಿಂದ 24: ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಧ್ವಜ ಪ್ರತಿಷ್ಠೆ ಮತ್ತು ಧೂಳಿ ಮಂಡಲ ಸೇವೆ: ಡಾ. ಕಟ್ಟೆ ರವಿರಾಜ ವಿ. ಆಚಾರ್ಯ
ಉಡುಪಿ: ಸುಮಾರು 1500 ವರ್ಷಗಳ ಇತಿಹಾಸವಿರುವ ಇತ್ತೀಚಿಗೆ ವೈಭವದ ಬ್ರಹ್ಮಕಲಶೋತ್ಸವ ಸಂಪನ್ನಗೊಂಡ ಸುಮಾರು 9 ಕೋಟಿ ವೆಚ್ಚದಲ್ಲಿ ಸಮಗ್ರ ಜೀರ್ಣೋದ್ಧಾರ ಗೊಳ್ಳುತ್ತಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಮಾರ್ಚ್ 22 ರಿಂದ 24ರ ತನಕ ನೂತನ ಧ್ವಜ ಸ್ತಂಭ ಪ್ರತಿಷ್ಠೆ ಮತ್ತು ಧೂಳಿ ಮಂಡಲ ಸೇವೆ ಜರಗಲಿರುವುದು ಎಂದು ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ ಡಾ. ಕಟ್ಟೆ ರವಿರಾಜ ವಿ ಆಚಾರ್ಯ ತಿಳಿಸಿದ್ದಾರೆ. ಮಾರ್ಚ್ 21 ಹಸಿರು ಹೊರಕಾಣಿಕೆ ಮಾರ್ಚ್ 21ರ ಮಂಗಳವಾರ […]
ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ನಾಗರಾಜ್ ರಾಯಪ್ಪನಮಠ, ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಆಯ್ಕೆ
ಕುಂದಾಪುರ: ಕರ್ನಾಟಕ ಕಾರ್ಯನಿರತ ಸಂಘ ಉಡುಪಿ ಜಿಲ್ಲಾ ಸಂಘದ ಅಧೀನ ಸಂಸ್ಥೆಯಾದ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ) ಇದರ ನೂತನ ತಾಲೂಕು ಅಧ್ಯಕ್ಷರಾಗಿ ನಾಗರಾಜ್ ರಾಯಪ್ಪನಮಠ ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಆಯ್ಕೆಯಾಗಿದ್ದಾರೆ. ಮಾ.14ರಂದು ನಗರದ ಅಂಬೇಡ್ಕರ್ ಭವನದಲ್ಲಿ ಜರುಗಿದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಚುನಾವಣೆಯಲ್ಲಿ ನಾಗರಾಜ ರಾಯಪ್ಪನಮಠ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಗಣೇಶ್ ಬೀಜಾಡಿ ಅವಿರೋಧವಾಗಿ ಆಯ್ಕೆಯಾದರು. ಉಳಿದಂತೆ ಉಪಾಧ್ಯಕ್ಷರಾಗಿ ಚಂದ್ರಮ ತಲ್ಲೂರು, ರಾಘವೇಂದ್ರ ಪೈ, ಜೊತೆ […]
ಚುನಾವಣೆ ಸಂದರ್ಭ ಅಬಕಾರಿ ಅಕ್ರಮ ತಡೆಗಟ್ಟಲು ವಿಶೇಷ ತಂಡ ರಚನೆ
ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಚುನಾವಣೆ ನಡೆಯಲಿರುವ ಹಿನ್ನೆಲೆ, ಮತದಾರರನ್ನು ಸೆಳೆಯಲು ನಕಲಿ/ ಕಳಪೆ ಮಟ್ಟದ ಮದ್ಯ ಹಾಗೂ ಕಳ್ಳಭಟ್ಟಿ ಸಾರಾಯಿಗಳನ್ನು ತಯಾರಿಸಿ, ಸಾಗಾಣಿಕೆ ಹಾಗೂ ಶೇಖರಣೆ ಮಾಡಿ, ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ವಿತರಿಸುವ ಸಾಧ್ಯತೆ ಇದ್ದು, ಇದನ್ನು ಸೇವನೆ ಮಾಡಿದವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದ್ದು ಹಾಗೂ ಕೆಲವು ಸಮಾಜ ಘಾತುಕರು ಅಕ್ರಮವಾಗಿ ಆದಾಯ ಗಳಿಸಲು ತೆರಿಗೆ ಪಾವತಿಸಿರುವ ಮದ್ಯವನ್ನು ಖರೀದಿಸಿ, ದಾಸ್ತಾನು ಇಟ್ಟು, ಅದನ್ನು […]
ಮಕ್ಕಳಲ್ಲಿ ಧಾರ್ಮಿಕ ಭಕ್ತಿ, ಶ್ರದ್ಧೆ ಬೆಳೆಸಿ ಸನ್ಮಾರ್ಗದಲ್ಲಿ ಮುನ್ನಡೆಸಿ: ವಿಧುಶೇಖರ ಭಾರತೀ ಸ್ವಾಮೀಜಿ
ಬ್ರಹ್ಮಾವರ: ಮಕ್ಕಳಲ್ಲಿ ಧಾರ್ಮಿಕ ಭಕ್ತಿ, ಶ್ರದ್ಧೆ ಬೆಳೆಸಿ, ಸನ್ಮಾರ್ಗದಲ್ಲಿ ಮುನ್ನಡೆಸಿ ಎಂದು ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಹೇಳಿದರು. ಅವರು ಸೋಮವಾರ ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನಕ್ಕೆ ಮಕ್ಕಿತೋಟ ಮನೆಯ ಗೌರಿ ವಿಟ್ಠಲ್ ಶೆಟ್ಟಿ ಮತ್ತು ಕುಟುಂಬಸ್ಥರು ನೀಡಿದ ನೂತನ ಬ್ರಹ್ಮರಥವನ್ನು ಲೋಕಾರ್ಪಣೆಗೊಳಿಸಿ ವಿಶೇಷ ರಥೋತ್ಸವದಲ್ಲಿ ಭಾಗವಹಿಸಿ ಅನುಗ್ರಹ ಸಂದೇಶ ನೀಡಿದರು. ಶೃಂಗೇರಿ ಪೀಠದ ಆಡಳಿತಾಧಿಕಾರಿ ಡಾ| ಗೌರೀಶಂಕರ್, ಪ್ರಾಂತೀಯ ಅಧಿಕಾರಿಗಳಾದ ವಾಗೀಶ ಶಾಸ್ತ್ರಿ, ಲೋಕೇಶ ಅಡಿಗ, ನೀಲಾವರ ದೇವಳದ ವ್ಯವಸ್ಥಾಪನಾ […]
ಮುಂಡ್ಕೂರು: ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಸಚ್ಚೇರಿಪೇಟೆ, ಕಾರ್ಯದರ್ಶಿಯಾಗಿ ವಿಶ್ವನಾಥ ಪೂಜಾರಿ
ಬೆಳ್ಮಣ್: ಬಿಲ್ಲವ ಯುವ ವೇದಿಕೆ ಮುಂಡ್ಕೂರು-ಮುಲ್ಲಡ್ಕ- ಇನ್ನಾ ಇದರ 2023- 25ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಂಡ್ಕೂರು ಸಭಾಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಸಚ್ಚೇರಿಪೇಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಇವರು ಪ್ರಸ್ತುತ ಕಾರ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ, ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್(ರಿ.,) ಸಚ್ಚೇರಿಪೇಟೆ ಇದರ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಾರ್ಯದರ್ಶಿಯಾಗಿ ವಿಶ್ವನಾಥ ಪೂಜಾರಿ ದಡ್ಡು, ಕೋಶಾಧಿಕಾರಿಯಾಗಿ ಸುಕೇಶ್ ಪೂಜಾರಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಸುರೇಶ್ ಪೂಜಾರಿ, ಸಂಚಾಲಕರಾಗಿ ಉದಯ ಪೂಜಾರಿ, ಉಪಾಧ್ಯಕ್ಷರಾಗಿ ಲತೀಶ್ […]