ಬೈಂದೂರಿನಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ಉಡುಪಿ: ಜಿಲ್ಲಾ ಲೋಕಾಯುಕ್ತ ಪೊಲೀಸ್ ವಿಭಾಗದ ವತಿಯಿಂದ ಮಂಗಳವಾರ ಬೈಂದೂರು ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಅಹವಾಲು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪೊಲೀಸ್ ಉಪಾಧೀಕ್ಷಕ ಕೆ. ಸಿ. ಪ್ರಕಾಶ್, ಪೊಲೀಸ್ ನಿರೀಕ್ಷಕ ರಫೀಕ್ ಎಂ., ಬೈಂದೂರು ತಾಲೂಕು ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ, ಭೂ ಮಾಪಕಿ ಶೈಲಜಾ, ಶಿರೂರು ಗ್ರಾಮ ಪಂಚಾಯತ್ ಪಿ.ಡಿ.ಓ ರಾಜೇಂದ್ರ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಾರ್ವಜನಿಕರಿಂದ ಒಟ್ಟು 3 ಅರ್ಜಿಗಳು ಸ್ವೀಕೃತವಾಗಿದ್ದು, ಅವುಗಳಲ್ಲಿ 1 ಅರ್ಜಿಯನ್ನು ಸ್ಥಳದಲ್ಲಿ ಇತ್ಯರ್ಥಪಡಿಸಿ, 2 ಅರ್ಜಿಗಳಲ್ಲಿ ಪ್ರಪತ್ರ […]

ಪ್ರತಿಯೊಬ್ಬರು ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳುವುದು ಮುಖ್ಯ: ನ್ಯಾ. ಶರ್ಮಿಳಾ ಎಸ್

ಉಡುಪಿ: ಸಮಾಜದ ಪ್ರತಿಯೊಬ್ಬ ಪ್ರಜೆಯೂ ಗ್ರಾಹಕರ ಹಕ್ಕುಗಳನ್ನು ತಿಳಿದುಕೊಳ್ಳುವುದು ಮುಖ್ಯ. ಪ್ರಪಂಚದಾದ್ಯಂತ ಇರುವ ವಸ್ತುಗಳು, ಸರಕುಗಳು ಮತ್ತು ಸೇವೆಗಳ ಮೌಲ್ಯ, ಸಮಗ್ರತೆ, ವೆಚ್ಚ ಹಾಗೂ ಅವುಗಳ ಗುಣಮಟ್ಟದ ಬಗ್ಗೆ ತಿಳಿದುಕೊಳ್ಳುವ ಉದ್ದೇಶದಿಂದ ಈ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶರ್ಮಿಳಾ ಎಸ್ ಹೇಳಿದರು. ಅವರು ನಗರದ ಕುಂಜಿಬೆಟ್ಟು ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ […]

5, 8ನೇ ತರಗತಿ ಬೋರ್ಡ್‌ ಪರೀಕ್ಷೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌

ಬೆಂಗಳೂರು: 5 ಮತ್ತು 8ನೇ ತರಗತಿ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ಕೊಟ್ಟಿದೆ. 10 ದಿನಗಳ ಬಳಿಕ ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ.ಬೋರ್ಡ್‌ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್‌ ಏಕಸದಸ್ಯ ಪೀಠ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದ್ದು, ಬೋರ್ಡ್‌ ಪರೀಕ್ಷೆ ನಡೆಸಲು ಆದೇಶ ಹೊರಡಿಸಿದೆ.ಮಾ.27 ನೇ ತಾರೀಖಿನಿಂದ ಪರೀಕ್ಷೆ ಪ್ರಾರಂಭಿಸಬೇಕು. ಆದರೆ ಯಾವುದೇ ವಿದ್ಯಾರ್ಥಿಗಳನ್ನು ಫೇಲ್ ಮಾಡುವಂತಿಲ್ಲ ಎಂದು ಸೂಚಿಸಿದೆ.

ಬೈಲೂರು ಶ್ರೀ ಧೂಮಾವತಿ ದೈವಸ್ಥಾನ: ಹಸಿರುವಾಣಿ ಹೊರೆಕಾಣಿಕೆ

ಉಡುಪಿ: ಬೈಲೂರು ಶ್ರೀ ಮಹಿಷಮರ್ದಿನಿ ದೇವಸ್ಥಾನ ಸಂಬಂದಿಸಿದ ನಂಟನ್ನು ಹೊಂದಿಕೊಂಡು 5 ಗ್ರಾಮಗಳಾದ ಬೈಲೂರು, ಮಾರ್ಪಳ್ಳಿ, ಚಿಟ್ಪಾಡಿ, ಕೊರಂಗಪಡಿ, ಕೆಮೊತ್ತುರು ಮಾಗಣೆಗೆ ಒಳಪಟ್ಟ ಮೂಲ ಮಹಿಷಂತಾಯ, ಧೂಮಾವತಿ, ಬಂಟ, ಪಂಜುರ್ಲಿ ದೈವಗಳ ಶಿಲಾಮಯ ಆಲಯದಲ್ಲಿ ಪ್ರತಿಷ್ಠಾಪನಾ ಅಂಗವಾಗಿ ಶ್ರೀ ಬೈಲೂರು ದೇವಳದಲ್ಲಿ ಪ್ರಾಥನೆ ಗೈದು ಅಲ್ಲಿಂದ ಹೊರಟು ಮುಖ್ಯ ರಸ್ತಯಲ್ಲಿ ಸಾಗಿ ಬಂದು ಮಿಷನ್ ಕಾಂಪೌಂಡ್, ಅಮ್ಮಣಿ ಹಾಲ್, ಚಿಟ್ಪಾಡಿ ಸರ್ಕಲ್, ಹನುಮಾನ್ ಗ್ಯಾರೇಜ್ ಸಮೀಪದ ದೈವಸ್ಥಾನಕ್ಕೆ ಬಂದು ತಲುಪಿತು. ವಿವಿಧ ವೇಷ ಭೂಷಣ, ತಟ್ಟೀರಾಯ, ಗೊಂಬೆಗಳು, […]

ನಂಚಾರು ಗೋಶಾಲೆಯಲ್ಲಿ ಗೋಗ್ರಾಸ ಸಮರ್ಪಣೆ

ಬ್ರಹ್ಮಾವರ: ಅನಾಥ, ರಕ್ಷಣೆಯಿಲ್ಲದ, ವಯಸ್ಸಾದ ಗೋವುಗಳ ರಕ್ಷಣೆ ನೋಡಿ ಹೃದಯ ತುಂಬಿ ಬಂದಿದೆ. ಆಶ್ರಮದಲ್ಲಿ 150ಕ್ಕೂ ಮಿಕ್ಕಿ ಹಸುಗಳು ನೆಮ್ಮದಿಯಾಗಿರುವುದನ್ನು ಕಂಡು ಸಂತುಷ್ಟನಾಗಿದ್ದೇನೆ. ಅನಾಥ ಗೋವುಗಳ ರಕ್ಷಣೆ, ಅವುಗಳಿಗೆ ಸಹಕಾರ ನೀಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ. ಎಂದು ಶೃಂಗೇರಿ ಶಾರದಾ ಪೀಠ ಕಿರಿಯ ಯತಿ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿ ಹೇಳಿದರು.ಬ್ರಹ್ಮಾವರ ತಾಲೂಕು ನೆಂಚಾರು ಕಾಮಧೇನು ಗೋಶಾಲಾ ಮಹಾ ಸಂಘ ಟ್ರಸ್ಟ್ ನಡೆಸಿಕೊಂಡು ಬರುತ್ತಿರುವ ಆಶ್ರಮಕ್ಕೆ ಭಾನುವಾರ ಭೇಟಿ, ಗೋ ಆಶ್ರಮ ಸಂದರ್ಶನ, ಗೋಗ್ರಾಸ ಸಮರ್ಪಣೆ ಬಳಿಕ ನಡೆದ […]