ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಹಿತ್ಯ ಸಾಂಗತ್ಯ ಸರಣಿ ಕಾರ್ಯಕ್ರಮ
ಕಾರ್ಕಳ: ಸಾಹಿತ್ಯಕ್ಕೆ ಭಾವನೆಗಳನ್ನು ಉದ್ದೀಪಿಸುವ ಶಕ್ತಿಯಿದೆ. ಶ್ರೀ ಮುನಿರಾಜ ರೆಂಜಾಳ ಸಾಹಿತ್ಯ ಸರ್ವವ್ಯಾಪಿಯಾದುದು. ಸಾಹಿತ್ಯದ ರಸಭಾವಗಳನ್ನು ಅರಿತರೆ ಬದುಕಿನ ದಾರಿ ದೀಪವಾಗಬಲ್ಲದು. ಜೀವನದಲ್ಲಿ ನಾವು ಸಾಹಿತ್ಯ ಮತ್ತು ನೈತಿಕ ಮೌಲ್ಯಗಳಿಗೆ ತೆರೆದುಕೊಂಡಾಗ ಹೊಸ ದೃಷ್ಟಿ ಗೋಚರಿಸುತ್ತದೆ. ಮನಸ್ಸಿನ ತೃಪ್ತಿಗಾಗಿ ನಾವೆಲ್ಲ ಪುಸ್ತಕ ಪ್ರೀತಿಯನ್ನು, ಓದುವಿಕೆಯನ್ನು ಅಳವಡಿಸಿಕೊಳ್ಳಬೇಕಾಗಿದೆ. ಎಂದು ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳರು ನುಡಿದರು. ಅವರು ಹಿರ್ಗಾನದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಹಿತ್ಯ ಸಾಂಗತ್ಯ ಸರಣಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ […]
ಮಾ. 25 ರಿಂದ 28ರ ವರೆಗೆ ಕರಂಬಳ್ಳಿ ವೆಂಕಟರಮಣ ದೇವಸ್ಥಾನದಲ್ಲಿ ರಾಶಿ ಪೂಜಾ ಮಹೋತ್ಸವ: ಚಪ್ಪರ ಮಹೂರ್ತ
ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮಾರ್ಚ್ 25 ರಿಂದ 28 ರ ವರೆಗೆ 4 ದಿನಗಳ ಕಾಲ “ರಾಶಿ ಪೂಜಾ ಮಹೋತ್ಸವ” ನಡೆಯಲಿದ್ದು, ಆ ಪ್ರಯುಕ್ತ ಇಂದು ಕರಂಬಳ್ಳಿ ವೆಂಕಟರಮಣ ದೇವಸ್ಥಾನದಲ್ಲಿ ನಡೆದ ಚಪ್ಪರ ಮಹೂರ್ತ ಕಾರ್ಯಕ್ರಮದಲ್ಲಿ ಶಾಸಕರು, ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಗಿರಿಧರ್ ಆಚಾರ್ಯ ಕರಂಬಳ್ಳಿ, ಪ್ರಭಾಕರ್ ಪೂಜಾರಿ, ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮಂಡಳಿ […]
ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಯೋಜನೆಯಿಂದ ಬಿಜೆಪಿ ಹತಾಶಗೊಂಡಿದೆ: ರಮೇಶ್ ಕಾಂಚನ್ ಟೀಕೆ
ಕಾಂಗ್ರೆಸ್ ಪಕ್ಷವು ನೀಡಿರುವ ಗ್ಯಾರಂಟಿ ಕಾರ್ಡ್ ಪ್ರಯೋಜನಕ್ಕೆ ಬಾರದ ವಿಸಿಟಿಂಗ್ ಕಾರ್ಡ್ ಇದ್ದಂತೆ ಎಂದು ಹೇಳಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಹೇಳಿಕೆ ಅವರ ಹತಾಶ ಭಾವನೆಯನ್ನು ತೋರಿಸುತ್ತದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ. ರಾಜ್ಯಾದ್ಯಂತ ಬಿಜೆಪಿ ಸರಕಾರ 40% ಕಮೀಷನ್ ಸರಕಾರ ಎಂಬ ಅಪಖ್ಯಾತಿಗೆ ಪಾತ್ರವಾಗಿ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ಖುದ್ದು ಪ್ರಧಾನಮಂತ್ರಿಗಳಿಗೆ ಪತ್ರ ಬರೆದು ದೂರಿದ್ದರು. ಈ ಆರೋಪ ಕೇಳಿ ಬಂದ ನಂತರ ಎಂಟು ಬಾರಿ ಪ್ರಧಾನ […]
ಪರ್ಕಳ: ಸಂತೆ ಮಾರುಕಟ್ಟೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
ಉಡುಪಿ ನಗರಸಭಾ ವ್ಯಾಪ್ತಿಯ ಪರ್ಕಳ ವಾರ್ಡಿನ ಪರ್ಕಳ ಸಂತೆ ಮಾರುಕಟ್ಟೆ ಕಟ್ಟಡ ನಿರ್ಮಾಣಕ್ಕೆ ನಗರಸಭೆಯ ಉದ್ಯಮ ನಿಧಿಯಿಂದ. 3.05 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಇಂದು ಶಾಸಕ ಕೆ. ರಘುಪತಿ ಭಟ್ ಅವರು ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮೀ ಮಂಜುನಾಥ ಕೊಳ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಶ ಕೊಡವೂರು, ನಗರ ಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಯಶ್ವಂತ್ ಪ್ರಭು ಹಾಗೂ ನಗರ […]
ನಿಟ್ಟೆ: ಚಿನ್ನಾಭರಣ ಕಳವು ಆರೋಪಿಯ ಬಂಧನ
ಕಾರ್ಕಳ: ತಾಲೂಕಿನ ನಿಟ್ಟೆ ಗ್ರಾಮದ ಕೈಲಾಜೆ ಪಾದೆಮನೆ ರಾಘವೇಂದ್ರ ಭಟ್ ರವರ ಮನೆಯ ಐದೂವರೆ ಲಕ್ಷ ಬೆಲೆಬಾಳುವ ಚಿನ್ನದ ಆಭರಣಗಳು ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳನೋರ್ವನನ್ನು ಕಾರ್ಕಳ ಪೋಲೀಸರು ಬಂದಿಸಿದ್ದಾರೆ. ತನಿಖೆ ಕೈಗೊಂಡ ಕಾರ್ಕಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಮತ್ತು ಸಿಬ್ಬಂದಿಗಳ ತಂಡವು ಆರೋಪಿ ಹುಬ್ಬಳ್ಳಿ ಮಾರುತಿ ನಗರದ 56ವರ್ಷದ ಚಂದ್ರಗೌಡ ಪಾಟೀಲ್ ಎಂಬಾತನನ್ನು ಬಂಧಿಸಿ, ಆತನಿಂದ ಕಳ್ಳತನ ಮಾಡಿದ್ದ 5.50 ಲಕ್ಷ ಮೌಲ್ಯದ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.