ಟಿಸಿಎಸ್ ಸಿಇಒ ರಾಜೇಶ್ ಗೋಪಿನಾಥನ್ ರಾಜೀನಾಮೆ
ಮುಂಬೈ: ಟಿಸಿಎಸ್ ಸಂಸ್ಥೆಯ ಸಿಇಒ ರಾಜೇಶ್ ಗೋಪಿನಾಥನ್ ರಾಜೀನಾಮೆ ನೀಡಿದ್ದಾರೆ. 2017ರಿಂದ ರಾಜೇಶ್ ಗೋಪಿನಾಥ್ ನ್ ಅವರು ಟಿಸಿಎಸ್ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ನೂತನ ಸಿಇಒ ಆಗಿ ಕೃತಿ ವಾಸನ್ ಅವರನ್ನು ನೇಮಕ ಮಾಡಲಾಗಿದೆ.2023 ಸೆಪ್ಟೆಂಬರ್ 15ರಂದು ರಾಜೇಶ್ ಗೋಪಿನಾಥನ್ ತಮ್ಮ ಕರ್ತವ್ಯದಿಂದ ಬಿಡುಗಡೆಯಾಗಲಿದ್ದಾರೆ ಎಂದು ಟಿಸಿಎಸ್ ಹೇಳಿದೆ.
ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಕಚೇರಿಯಲ್ಲಿ 4 ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ: ಜಿಲ್ಲಾ ಕೌಟುಂಬಿಕ ನ್ಯಾಯಾಲಯ ಕಚೇರಿಯಲ್ಲಿ ಸ್ವಚ್ಛತೆ ಹಾಗೂ ಕಚೇರಿ ಕೆಲಸ ಸಹಾಯಕ್ಕಾಗಿ ಗುಮಾಸ್ತರ -4 ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಟೆಂಡರ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 6 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ನ್ಯಾಯಾಲಯದ ಕಚೇರಿ ಪ್ರಕಟಣೆ ತಿಳಿಸಿದೆ.
ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಿಸ್ತರಣಾ ನವೀಕೃತ ಕಟ್ಟಡ ‘ಸಮೃದ್ಧಿ ಸಹಕಾರಿ ಸೌಧದ’ ಉದ್ಘಾಟನೆ
ಕಾರ್ಕಳ: ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘ ಗ್ರಾಮೀಣ ಭಾಗದ ಜನರ ಪಾಲಿನ ಆಶಾಕಿರಣವಾಗಿದ್ದು, ಆಶಕ್ತರ ಬಾಳಿನಲ್ಲಿ ಭರವಸೆಯ ಬೆಳಕು ಚೆಲ್ಲಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಅವರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ನಾನಾಪಾಟೇಕರ್ ಸಭಾಭವನದಲ್ಲಿ ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಿಸ್ತರಣಾ ನವೀಕೃತ ಕಟ್ಟಡ ಸಮೃದ್ಧಿ ಸಹಕಾರಿ ಸೌಧದ ಉದ್ಘಾಟನ ಸಭಾ ಕಾರ್ಯಕ್ರಮದ […]
ಇಂದು ಬೈಲೂರು ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ, ಮಹಾ ಅನ್ನಸಂತರ್ಪಣೆ ಮತ್ತು ನೇಮೋತ್ಸವ
ಉಡುಪಿ: ಬೈಲೂರು ಶ್ರೀ ಮಹಿಷಮರ್ದಿನಿ ದೇಗುಲಕ್ಕೆ ಸಂಬಂಧಪಟ್ಟ ಶ್ರೀ ಧೂಮಾವತಿ ದೈವಸ್ಥಾನವನ್ನು ಸುಮಾರು 1.60 ಕೋ.ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಲಾಗಿದೆ. ಇನ್ನೂ 1 ಕೋ.ರೂ. ಕಾಮಗಾರಿಯನ್ನು ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು. ದೈವದ ಎಲ್ಲ ಮೂರ್ತಿಗಳು, ಆಯುಧಗಳನ್ನು ಬೆಳ್ಳಿಯಿಂದಲೇ ಮಾಡಲಾಗಿದೆ. ಮಾ.18ರ ವರೆಗೆ ಮೂಲ ಮಹಿಷಂತಾಯ, ಧೂಮಾವತಿ, ಬಂಟ, ಪಂಜುರ್ಲಿ ದೈವಗಳ ನೂತನ ಶಿಲಾಮಯ ಆಲಯದಲ್ಲಿ ಪುನಃಪ್ರತಿಷ್ಠೆ ಬ್ರಹ್ಮಕಲಶೋತ್ಸವ, ಅನ್ನ ಸಂತರ್ಪಣೆ, ನೇಮೋತ್ಸವ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜೀರ್ಣೋದ್ಧಾರ […]
ಮಾಳ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ
ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳು ಮಾರ್ಚ್ 18 ರಂದು ಬೆಳಗ್ಗೆ 11 ಗಂಟೆಗೆ ಕಾರ್ಕಳ ತಾಲೂಕು ಮಾಳ ಗ್ರಾಮದ ಮಲ್ಲಾರು ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದು, ಸದ್ರಿ ಗ್ರಾಮಕ್ಕೆ ಒಳಪಡುವ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮದ ಗ್ರಾಮ ಕರಣಿಕರ ಕಚೇರಿಗೆ ನೀಡುವಂತೆ ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಇದರ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.