ಇಂದು ವಿ.ಹಿಂ.ಪ. ಮತ್ತು ಬಜರಂಗದಳ ಘಟಕದ ವತಿಯಿಂದ ಪೆರ್ಡೂರು ಜಾತ್ರಾ ಮಹೋತ್ಸವದ ಆರಾಟೋತ್ಸವದ ಪ್ರಯುಕ್ತ ಧಾರ್ಮಿಕ ಮತ್ತು ಮನೋರಂಜನಾ ಕಾರ್ಯಕ್ರಮ

ಪೆರ್ಡೂರು: ವಿಶ್ವ ಹಿಂದು ಪರಿಷದ್ ಮತ್ತು ಬಜರಂಗದಳ ಪೆರ್ಡೂರು ಘಟಕ ಇವರ ವತಿಯಿಂದ ಮಹತೋಭಾರ ಶ್ರೀ ಅನಂತಪದ್ಮನಾಭ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಆರಾಟೋತ್ಸವದಂದು ಮಾ.18 ಸಂಜೆ 7 ಗಂಟೆಗೆ ಆರಾಟಕಟ್ಟೆ ಬಳಿ ಧಾರ್ಮಿಕ ಮತ್ತು ಮನೋರಂಜನಾ ಕಾರ್ಯಕ್ರಮಗಳು ನಡೆಯಲಿದೆ. ಸುವರ್ಣ ಕರ್ನಾಟಕ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ಹಿನ್ನೆಲೆ ಗಾಯಕ ಮೂಲ್ಕಿ ರವೀಂದ್ರ ಪ್ರಭು ಮತ್ತು ಬಳಗದವರಿಂದ ‘ರಾಗ್ ರಂಗ್’ ಭಕ್ತಿ, ಭಾವ, ಜಾನಪದ ಗೀತೆಗಳು ಸುಗಮ ಸಂಗೀತ ಕಾರ್ಯಕ್ರಮ ತದನಂತರ ‘ಬೃಹತ್ […]

ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಚಾರ ಫಲಕ ಅಳವಡಿಸಲು ಅನುಮತಿ ಪಡೆಯಬೇಕು: ಜಿಲ್ಲಾದಿಕಾರಿ ಕೂರ್ಮಾರಾವ್ ಎಂ

ಉಡುಪಿ: ಜಿಲ್ಲೆಯ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಯಾವುದೇ ರೀತಿಯ ಸಭೆ ಸಮಾರಂಭಗಳು ಸೇರಿದಂತೆ ಮತ್ತಿತರ ಕಾರ್ಯಕ್ರಮಗಳಲ್ಲಿ ಪ್ರಚಾರ ಫಲಕಗಳನ್ನು ಅಳವಡಿಸುವ ಮುನ್ನ ಸ್ಥಳೀಯ ಸಂಸ್ಥೆಗಳು ಅಥವಾ ಗ್ರಾಮ ಪಂಚಾಯತ್ ನಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ತಪ್ಪಿದಲ್ಲಿ ಅಂತಹವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯವಾಗಿ ಯಾವುದೇ ಪ್ರಚಾರ ಫಲಕಗಳು ಭಿತ್ತಿಪತ್ರಗಳು […]

ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಸಮಿತಿಯ ಇ -ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಉಡುಪಿ: ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸ್ವೀಪ್ ಚುನಾವಣಾ ಇ -ಪತ್ರಿಕೆಯನ್ನು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಜಿಲ್ಲಾ ಸ್ವೀಪ್ ಸಮಿತಿಯು ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವಿಕೆ ಕುರಿತು ವಿವಿಧ ಕಾರ್ಯಕ್ರಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಚುನಾವಣಾ ಸಂಬಂದಿತ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಮಾಡುತ್ತಾ ಬಂದಿದ್ದು, ಇದರ ಒಂದು ಭಾಗವಾಗಿ ಇ – ಪತ್ರಿಕೆಯನ್ನು ಪ್ರಾರಂಭಿಸುವ ಮೂಲಕ ಜನರಿಗ ನೇರವಾಗಿ ಪ್ರಚಾರಪಡಿಸುವ ಕೆಲಸ […]

ಕಾರ್ಕಳದಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ

ಉಡುಪಿ: ಜಿಲ್ಲಾ ಲೋಕಾಯುಕ್ತ ಪೊಲೀಸ್ ವಿಭಾಗದ ವತಿಯಿಂದ ಗುರುವಾರ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕ ಅಹವಾಲು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಸಿ.ಎ ಸೈಮನ್, ಉಡುಪಿ ವಿಭಾಗದ ಪೊಲೀಸ್ ನಿರೀಕ್ಷಕ ರಫೀಕ್ ಎಂ., ಕಾರ್ಕಳ ತಹಶೀಲ್ದಾರ್ ಬಿ.ಅನಂತ ಶಂಕರ್, ಎ.ಡಿ.ಎಲ್.ಆರ್ ಶ್ರೀಕಲಾ, ಶಿರಸ್ತೆದಾರೆ ಲಕ್ಷ್ಮೀ, ಪುರಸಭೆ ಮುಖ್ಯಾಧಿಕಾರಿ ರೂಪ, ಮೆಸ್ಕಾಂ ಸಹಾಯಕ ಅಭಿಯಂತರ ಸಚಿನ್ ಆಚಾರ್ಯ, ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಗುರುದತ್ ಎಂ.ಎನ್, ತಾಲೂಕು ಕಚೇರಿಯ ಎಫ್.ಡಿ.ಎ ತಾರೇಶ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು […]

ಅಯೋಧ್ಯೆಯ ಶ್ರೀ ರಾಮ ಮೂರ್ತಿಗೆ ಆಯ್ಕೆಯಾದ ಕಾರ್ಕಳದ ಕೃಷ್ಣಶಿಲೆ

ರಾಮ ನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ ಎನ್ನುವಂತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭ್ಯವ ಪ್ರಭು ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀ ರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ. ಶಿಲ್ಪಿಗಳ ತವರೂರು ಎಂದೇ ಖ್ಯಾತವಾಗಿರುವ ಕಾರ್ಕಳದ ಈದು ಗ್ರಾಮದ ತುಂಗ ಪೂಜಾರಿಯವರ ಭೂಮಿಯಲ್ಲಿದ್ದ ಶಿಲೆ ಆಯ್ಕೆಯಾಗಿದ್ದು, ಪೂರ್ತಿ ವಿಶ್ವವೇ ಈ ಶಿಲೆಯಿಂದ ರೂಪುಗೊಳ್ಳಲಿರುವ ಭಗವಾನ್ ಶ್ರೀ ರಾಮನ ದರ್ಶನ ಪಡೆಯಲಿದೆ ಎಂಬುದು ನಮ್ಮನ್ನು ಪುಳಕಿತರನ್ನಾಗಿ ಹಾಗೂ ಪುನೀತರನ್ನಾಗಿಸುವಂತಹದಾಗಿದೆ. ಈ ಸೇವೆ ಮಾಡುವ […]