ಮಾ.19: ಮಿನಿ ಉದ್ಯೋಗ ಮೇಳ
ಉಡುಪಿ: ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿ ಇದರ ಆಶ್ರಯದಲ್ಲಿ ರಾಷ್ಟ್ರೀಯ ಪದವಿಪೂರ್ವ ವಿಧ್ಯಾರ್ಥಿಗಳ ಪೋಷಕರ ಮತ್ತು ಶಿಕ್ಷಕರ ಸಂಘ ಮತ್ತು ಕೊಡವೂರು ವಾರ್ಡ್ ಅಭಿವೃದ್ಧಿ ಸಮಿತಿ ಇವರ ಜಂಟಿ ಸಹೋಗದೊಂದಿಗೆ ಮಿನಿ ಉದ್ಯೋಗ ಮೇಳವು ಮಾರ್ಚ್ 19 ರಂದು ಆದಿತ್ಯವಾರ ಬೆಳಿಗ್ಗೆ 9.00 ಗಂಟೆಗೆ ಸ್ಥಳ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ (ಉಡುಪಿ ನಗರಸಭೆಯ ಹಿಂದೆ) ನಡೆಯಲಿದೆ. ಈ ಮಿನಿ ಉದ್ಯೋಗ ಮೇಳದಲ್ಲಿ ಸುಮಾರು ಹತ್ತು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸುತ್ತಾರೆ. […]
ಹೆಣ್ಣು ಮಕ್ಕಳು ಪ್ರತಿಶತಃ ನೂರರಷ್ಟು ಎಲ್ಲಾ ಕ್ಷೇತ್ರಗಳಲ್ಲಿ ಸಮಾನತೆ ಹೊಂದಬೇಕು: ಅಪರ ಜಿಲ್ಲಾಧಿಕಾರಿ ವೀಣಾ ಬಿ ಎನ್
ಉಡುಪಿ: ಮಹಿಳೆಯರು ಈಗಾಗಲೇ ಶೇ.70 ರಷ್ಟು ವಿವಿಧ ಕ್ಷೇತ್ರಗಳಲ್ಲಿ ಸಮಾನತೆಯನ್ನು ಪಡೆದುಕೊಂಡಿದ್ದಾರೆ. ಬಾಕಿ ಉಳಿದ ಕ್ಷೇತ್ರಗಳಲ್ಲಿಯೂ ತಮ್ಮ ಕಾರ್ಯವ್ಯಾಪ್ತಿಯನ್ನು ಚಾಣಾಕ್ಷ ತನದಿಂದ ಸಮಾನತೆಯನ್ನು ಹೊಂದಲು ಮುಂದಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹೇಳಿದರು. ಅವರು ನಗರದ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ […]
ಮಾಳದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ: ನಿಸರ್ಗದತ್ತ ಪ್ರಕೃತಿ ಸೌಂದರ್ಯ ಹೊಂದಿರುವ ಮಾಳ ಗ್ರಾಮದಲ್ಲಿ, ಪರಿಸರಕ್ಕೆ ಪೂರಕವಾದ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಜಿಲ್ಲಾಡಳಿತ ಸಿದ್ಧವಿದ್ದು, ಇದಕ್ಕಾಗಿ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಜೊತೆ ಚರ್ಚೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಕಾರ್ಕಳ ತಾಲೂಕಿನ ಮಾಳ ಗ್ರಾಮದ ಮಲ್ಲಾರು ಶ್ರೀಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಾಳ ಗ್ರಾಮದಲ್ಲಿ ಇದುವರೆಗೆ ಸರ್ಕಾರದ […]