ತೆಂಕನಿಡಿಯೂರಿನಲ್ಲಿ 2.03 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿ ಉದ್ಘಾಟನೆ
ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆಗಳ ಅಭಿವೃದ್ಧಿಗೆ ಶಾಸಕರಾದ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ ಅನುದಾನ ಮಂಜೂರಾಗಿದ್ದು, ಈ ಅನುದಾನದಲ್ಲಿ ಅಭಿವೃದ್ಧಿಗೊಂಡ ರಸ್ತೆಗಳನ್ನು ಇಂದು ಶಾಸಕ ಕೆ. ರಘುಪತಿ ಭಟ್ ಅವರು ಉದ್ಘಾಟಿಸಿದರು. ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಷ್ಮಿ ನಗರ ವಾರ್ಡ್ ಶ್ರೀನಗರ ಅಡ್ಡ ರಸ್ತೆಗಳ ಅಭಿವೃದ್ಧಿ ರೂ. 75 ಲಕ್ಷ, ತೆಂಕನಿಡಿಯೂರು ಕಾಲೇಜು ಹಿಂಬದಿ ಅಡ್ಡ ರಸ್ತೆ ಅಭಿವೃದ್ಧಿ ರೂ. 35 ಲಕ್ಷ, ಈಶ್ವರನಗರ ಬೈಕಾಡ್ತಿ ಪಂಜುರ್ಲಿ ರಸ್ತೆ ಅಭಿವೃದ್ಧಿ […]
Ragini Dwivedi: ಯುಗಾದಿ ಹಬ್ಬದ ಹೊಸ ರಂಗಿನಲ್ಲಿ ತುಪ್ಪದ ಬೆಡಗಿ!
ಉಡುಪಿ: ಬಿಜೆಪಿ ಮುಖಂಡೆ ಶೋಭಾ ಬೇಕಲ್ ಕಾಂಗ್ರೆಸ್ ಸೇರ್ಪಡೆ
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಮಾ.18 ರ ಶನಿವಾರದಂದು ಪರ್ಕಳದಲ್ಲಿ ನಡೆದ ಉಡುಪಿ ವಿಧಾನಸಭಾ ಕ್ಷೇತ್ರದ ಕರಾವಳಿ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಸಗ್ರಿ ವಾರ್ಡಿನ ಬಿಜೆಪಿ ಪಕ್ಷದ ಸದಸ್ಯರಾದ ಶೋಭಾ ಬೇಕಲ್ ಅವರು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರು, ಮಾಜಿ ಸಂಸದರಾದ ಬಿ ಎಲ್ ಶಂಕರ್, ವಿಧಾನಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ […]
ರಾಜ್ಯ ಮಟ್ಟದ ಆರ್ಮ್ ರಸ್ಟ್ಲಿಂಗ್ ಸ್ಪರ್ಧೆ: ಬೈಲೂರಿನ ಸುಜಿತ್ ನಾಯಕ್ ಗೆ ಚಿನ್ನದ ಪದಕ
ಕಾರ್ಕಳ: ಹಾಸನದಲ್ಲಿ ಇತ್ತೀಚೆಗೆ ನಡೆದ ಆರ್ಮ್ ರಸ್ಟ್ಲಿಂಗ್(ಪಂಜ ಕುಸ್ತಿ) ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕಿನ ನೀರೆ ಬೈಲೂರಿನ ಯುವಕ ಸುಜಿತ್ ನಾಯಕ್ ಚಿನ್ನದ ಪದಕ ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಸುಜಿತ್ ನಾಯಕ್ ಮುಂದಿನ ತಿಂಗಳಲ್ಲಿ ಜಮ್ಮು ಕಾಶ್ಮೀರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಪಂಜ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಸುಜಿತ್ ನಾಯಕ್ (25 ವರ್ಷ) ಅವರು ಸುಧಾಕರ್ ನಾಯಕ್ ಮತ್ತು ಜ್ಯೋತಿ ನಾಯಕ್ ಅವರ ಮಗನಾಗಿದ್ದು, ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ನೀರೆಬೈಲೂರು ಶಾಲೆಯಲ್ಲಿ ಪಡೆದಿರುತ್ತಾರೆ. ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ […]
ಭಾರತ ಸೇರಿದಂತೆ ಹಲವು ದೇಶಗಳಲ್ಲಿ ತಡರಾತ್ರಿ ಪ್ರಬಲ ಭೂಕಂಪನ
ನವದೆಹಲಿ: ದೆಹಲಿ- ಎನ್ಸಿಆರ್ ಪ್ರದೇಶ ಸೇರಿದಂತೆ ಉತ್ತರ ಭಾರತದಲ್ಲಿ ಪ್ರಬಲ ಭೂಕಂಪದ ಅನುಭವವಾಗಿದೆ. ಭೂ ಕಂಪನದಿಂದ ಭಯಗೊಂಡ ಜನ ಮನೆಯಿಂದ ಹೊರ ಬಂದಿದ್ದಾರೆ. ಭಾರತ, ಕಜಕಿಸ್ತಾನ್, ಪಾಕಿಸ್ತಾನ, ತಜಕಿಸ್ತಾನ್, ಉಜ್ಬೇಕಿಸ್ತಾನ್, ಚೀನಾ, ಅಫ್ಘಾನಿಸ್ತಾನ ಮತ್ತು ಕಿರ್ಗಿಸ್ತಾನ್ ಸೇರಿದಂತೆ ದೇಶಗಳಲ್ಲಿ ರಿಕ್ಟರ್ ಮಾಪಕದಲ್ಲಿ 7.7 ರಷ್ಟು ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಕಲಾಫ್ಗಾನ್ ನಿಂದ 90 ಕಿ.ಮೀ ದೂರದಲ್ಲಿದೆ ಎಂದು ನಂಬಲಾಗಿದೆ. ರಾತ್ರಿ 10.20ರ ಸುಮಾರಿಗೆ ಭೂಕಂಪ ಸಂಭವಿಸಿದ್ದರಿಂದ ಭಯಭೀತರಾದ ಜನರು ಕಟ್ಟಡಗಳಿಂದ ಹೊರಗೆ ಧಾವಿಸಿದರು ಮತ್ತು […]