ಆಧಾರ್- ಪ್ಯಾನ್ ಜೋಡಣೆಗೆ ಮಾರ್ಚ್ 31 ಕೊನೆಯ ದಿನ: ಜೋಡಣೆ ಮಾಡದಿದ್ದಲ್ಲಿ ಈ ಪ್ರಕ್ರಿಯೆ ಅನುಸರಿಸಿ…

ಬೆಂಗಳೂರು: ಆಧಾರ್-ಪ್ಯಾನ್ ಕಾರ್ಡ್ ಜೋಡಣೆ ಮಾಡುವುದಕ್ಕೆ 1000 ರೂಪಾಯಿ ದಂಡ ಸಹಿತ ಮಾ.31 ರಂದು ಕೊನೆಯ ದಿನವಾಗಿದೆ. ನಿರ್ದಿಷ್ಟ ಸೇವೆಗಳನ್ನು ಪಡೆಯುವುದಕ್ಕೆ ಆಧಾರ್-ಪ್ಯಾನ್ ಜೋಡಣೆ ಕಡ್ಡಾಯವಾಗಿದ್ದು,  ಐಟಿಆರ್ ಎಸ್ ನ್ನು ಸಲ್ಲಿಸುವುದಕ್ಕೆ ಆಧಾರ್-ಪ್ಯಾನ್ ಜೋಡಣೆ ಕಡ್ಡಾಯವಲ್ಲ. ಆದರೆ ಐಟಿ ಇಲಾಖೆ ಆಧಾರ್ ಪ್ಯಾನ್ ಕಾರ್ಡ್ ಜೋಡಣೆಯಾಗದೇ ಇದ್ದಲ್ಲಿ ರಿಟರ್ನ್ಸ್ ಪ್ರಕ್ರಿಯೆಯನ್ನು ಮುಂದುವರೆಸುವುದಿಲ್ಲ ಎಂಬುದು ಗಮನಾರ್ಗ ವಿಷಯವಾಗಿದೆ. ಹಲವರು ಈಗಾಗಲೇ ಜೋಡಣೆ ಮಾಡುತ್ತಿದ್ದು ಇನ್ನೂ ಕೆಲವರು ಜೋಡಣೆಯಾಗಿದೆಯೇ ಇಲ್ಲವೇ ಎಂಬುದನ್ನು ಮರೆತಿದ್ದಾರೆ. ಆಧಾರ್-ಪ್ಯಾನ್ ಜೋಡಣೆಯಾಗಿದೆಯೇ ಇಲ್ಲವೇ? ಎಂಬುದನ್ನು ತಿಳಿಯುವುದಕ್ಕೆ ಆನ್ […]

ಮಾ.25ರ ವರೆಗೆ ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ

ಇಂದಿನಿಂದ ಮಾರ್ಚ್‌ 25ರವರೆಗೆ ಮೂರು ದಿನಗಳ ಕಾಲ ಕರ್ನಾಟಕ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೆ ಕಾರಣ ಬಂಗಾಳಕೊಲ್ಲಿ ಮತ್ತು ಮಧ್ಯ ಅರೇಬಿಯನ್ ಸಮುದ್ರದ ಮೇಲೆ, ಎರಡು ಆಂಟಿ ಸೈಕ್ಲೋನ್ಗಳು ರೂಪುಗೊಂಡಿದ್ದುಜೊತೆಗೆ, ಜೊತೆಗೆ ಇತರ ಕೆಳಮಟ್ಟದ ಸೈಕ್ಲೋನಿಕ್ ಪರಿಚಲನೆಗಳು ರೂಪುಗೊಂಡಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು, ವಾಯುವ್ಯ ರಾಜಸ್ಥಾನ ಭಾಗದಿಂದ ಕರ್ನಾಟಕದವರೆಗಿನ ಪ್ರದೇಶಗಳಲ್ಲಿ ಹಾಗು ದೆಹಲಿ, ಪಂಜಾಬ್ ಸೇರಿದಂತೆ ಕೆಲ ರಾಜ್ಯಗಳಲ್ಲಿ […]

ಮಾ.24 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಮಾರ್ಚ್ 24 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110/33/11 ಕೆ.ವಿ ವಿದ್ಯುತ್ ಉಪಕೇಂದ್ರ ಹಿರಿಯಡ್ಕದಲ್ಲಿ 110 ಕೆ.ವಿ ಬಸ್ ಬಾರ್ ಮತ್ತು ಇದಕ್ಕೆ ಸಂಬಂಧಿಸಿದ ಉಪಕರಣಗಳ ವಾರ್ಷಿಕ ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ 33 ಕೆ.ವಿ ಹೆಬ್ರಿ ಫೀಡರಿನಲ್ಲಿ ವಿದ್ಯುತ್ ಅಡಚಣೆಯಾಗುವುದರಿಂದ 33/11 ಕೆ.ವಿ ಹೆಬ್ರಿ ಉಪ ಕೇಂದ್ರದಿಂದ ಸರಬರಾಜಾಗುವ ಬೇಳೆಂಜೆ, ಕಳ್ತೂರು, ಸಂತೆಕಟ್ಟೆ, ಕರ್ಜೆ, ಮುಂಡಾಡಿಜೆಡ್ಡು, ಕುರ್ಪಾಡಿ, […]

ಆಡಳಿತ ವ್ಯವಸ್ಥೆಯು ಸಮಸ್ಯೆಗೆ ಪರಿಹಾರವಾಗಬೇಕು: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಆಡಳಿತ ವ್ಯವಸ್ಥೆಯು ಜನಸಾಮಾನ್ಯರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವ ಅತ್ಯಂತ ಪ್ರಮುಖ ಭಾಗವಾಗಿ ಕಾರ್ಯನಿರ್ವಹಿಸುವ ಮೂಲಕ ಜನಸ್ನೇಹಿಯಾಗಿರಬೇಕು ಎಂದು ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು, ಬ್ರಹ್ಮಾವರದಲ್ಲಿ, ಕಂದಾಯ ಇಲಾಖೆ ಹಾಗೂ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ, 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಬ್ರಹ್ಮಾವರ ತಾಲೂಕು ಆಡಳಿತ ಸೌಧದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಸಾರ್ವಜನಿಕರ […]

ಗಾಂಜಾ ಸೇವನೆ: ಮಣಿಪಾಲದಲ್ಲಿ ಐವರು‌ ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

ಮಣಿಪಾಲ ಮಾಂಡವಿ ಎಮರಾಲ್ಡ್ ಅಪಾರ್ಟ್ಮೆಂಟ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಐವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಶಕ್ಕೆ ಪಡೆದ ವಿದ್ಯಾರ್ಥಿಗಳನ್ನು 22ವರ್ಷದ ನಿಖಿಲ್ ಎಮ್, 25ವರ್ಷದ ತನ್ವೀರ್ ರೆಡ್ಡಿ, 22ವರ್ಷದ ಶರಣ್ ಶೆಟ್ಟಿ , 21ವರ್ಷದ ರಾಹುಲ್ ಸೀಮಾ, 21ವರ್ಷದ ತುಶಾರ್ ಜಿ ಎಂದು ಗುರುತಿಸಲಾಗಿದೆ. ಮಣಿಪಾಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ನವೀನ್ ನಾಯ್ಕ ಅವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ವಿದ್ಯಾರ್ಥಿಗಳು ಗಾಂಜಾ ಸೇವಿಸಿದಂತೆ ಕಂಡುಬಂದಿದ್ದು, ವಶಕ್ಕೆ […]