ಬೆಂಗಳೂರು: ವ್ಯಾಪಾರಿಯನ್ನು ಅಡ್ಡಗಟ್ಟಿ 80 ಲಕ್ಷ ರೂ. ದರೋಡೆ: 8 ಮಂದಿ ವಶಕ್ಕೆ
ಬೆಂಗಳೂರು: ವ್ಯಾಪಾರಿಯೊಬ್ಬರನ್ನು ಅಡ್ಡಗಟ್ಟಿ 80 ಲಕ್ಷ ರೂಪಾಯಿ ದರೋಡೆ ಮಾಡಿದ್ದ ಆರೋಪದಡಿ ಕೇರಳದ 8 ಮಂದಿಯನ್ನು ಮಹದೇವಪುರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ರಖಂ ವ್ಯಾಪಾರಿಯೊಬ್ಬರು ಅಂಗಡಿಗಳಿಂದ ಸಂಗ್ರಹಿಸಿದ್ದ ವ್ಯಾಪಾರದ ಹಣವನ್ನು ಕಾರಿನಲ್ಲಿಟ್ಟುಕೊಂಡು ಹೋಗಿದ್ದರು. ಅವರನ್ನು ಅಡ್ಡಗಟ್ಟಿದ್ದ ಆರೋಪಿಗಳು, ಕೊಲೆ ಬೆದರಿಕೆಯೊಡ್ಡಿ, ಮಾರಕಾಸ್ತ್ರಗಳನ್ನು ತೋರಿಸಿ ದರೋಡೆ ಮಾಡಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ವ್ಯಾಪಾರಿ ದೂರು ನೀಡಿದ್ದರು ಎಂದು ತಿಳಿದು ಬಂದಿದೆ. ವ್ಯಾಪಾರಿಯ ಪರಿಚಯವಿರುವ ವ್ಯಕ್ತಿಗಳೇ ಕೃತ್ಯ ಎಸಗಿರುವ ಅನುಮಾನವಿದೆ. ಕೆಲ ಪುರಾವೆಗಳನ್ನು ಸಂಗ್ರಹಿಸಿ 8 ಮಂದಿಯನ್ನು […]
ಪಾಕಿಸ್ತಾನದಲ್ಲಿ ಭೂಕಂಪನ13 ಮಂದಿ ಸಾವು; ಭಾರತದಲ್ಲೂ ಕಂಪಿಸಿದ ಭೂಮಿ
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಕಳೆದ ರಾತ್ರಿ ಪ್ರಬಲ ಭೂಕಂಪನ ಸಂಭವಿಸಿದ್ದು ಕನಿಷ್ಠ 13 ಮೃತಪಟ್ಟು 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪಾಕಿಸ್ತಾನದ ವಾಯವ್ಯ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಸ್ವಾತ್ ಕಣಿವೆ ಪ್ರದೇಶದಲ್ಲಿ ಕನಿಷ್ಠ 13 ಜನರು ಭೂಕಂಪನದಿಂದಾಗಿ ಸಾವನ್ನಪ್ಪಿದ್ದಾರೆ. ಸುಮಾರು 150 ಮಂದಿ ಗಾಯಗೊಂಡಿದ್ದಾರೆ. ಪಾಕಿಸ್ತಾನದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಹಿಂದೂಕುಶ್ ಪ್ರದೇಶ ಎಂದು ಪಿಎಂಡಿ ಹೇಳಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 6.8 ಇದೆ. ಭಾರತದಲ್ಲೂ ಭೂಕಂಪನ ಪ್ರಭಾವ ಕಂಡುಬಂದಿದೆ. ದೆಹಲಿ, ಉತ್ತರ […]
ವೋಟರ್ ಐಡಿಯೊಂದಿಗೆ ಆಧಾರ್ ಲಿಂಕ್: ಗಡುವು ವಿಸ್ತರಣೆ
ನವದೆಹಲಿ: ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಲಿಂಕ್ ಮಾಡುವ ಗಡುವನ್ನು ಕೇಂದ್ರ ಸರ್ಕಾರ ಮಾರ್ಚ್ 31, 2024 ರವರೆಗೆ ವಿಸ್ತರಿಸಿದೆ. ಆಧಾರ್ ಕಾರ್ಡ್ ಅನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಲಿಂಕ್ ಮಾಡುವ ಗಡುವನ್ನು ಕೇಂದ್ರ ಸರ್ಕಾರ 2023 ರ ಏಪ್ರಿಲ್ 1 ರಿಂದ 2024 ರ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ನಿನ್ನೆ ಹೊರಡಿಸಿದ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಆಧಾರ್ ಅನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಲಿಂಕ್ ಮಾಡುವುದು ಸ್ವಯಂಪ್ರೇರಿತವಾಗಿದೆ. ಅದನ್ನು ಲಿಂಕ್ ಮಾಡಲು ಮತದಾರರ […]