ಮಾ.28 ರಂದು ನೇರ ಸಂದರ್ಶನ

ಉಡುಪಿ: ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಮಾರ್ಚ್ 28 ರಂದು ಬೆಳಗ್ಗೆ 10.30 ಕ್ಕೆ ನಗರದ ಶಾಂತ ಎಲೆಕ್ಟಿಕಲ್ಸ್ ಪ್ರೈ,ಲಿ., ಆಭರಣ ಜುವೆಲರ್ಸ್  ಹತ್ತಿರ, ಕಾರ್ಪೊರೇಶನ್ ಬ್ಯಾಂಕ್ ರೋಡ್, ಅನುಗ್ರಹ ಕಾಂಪ್ಲೆಕ್ಸ್ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ, ಬಿ.ಎ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ- ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ […]

ಮತ್ಸ್ಯಸಂಜೀವಿನಿ ಮೀನುಗಾರ ರೈತ ಉತ್ಪಾದಕ ಕಂಪನಿಯ ನೂತನ ಕಚೇರಿಯ ಉದ್ಘಾಟನೆ

ಉಪ್ಪುಂದ: ಕರ್ನಾಟಕ ಸರ್ಕಾರ, ಮೀನುಗಾರಿಕಾ ಇಲಾಖೆ ಹಾಗೂ ಸ್ಕೊಡ್‌ವೆಸ್ ಸಂಸ್ಥೆ ಸಹಯೋಗದಲ್ಲಿ ರಚಿತವಾದ ಮತ್ಸ್ಯಸಂಜೀವಿನಿ ಮೀನುಗಾರ ರೈತ ಉತ್ಪಾದಕ ಕಂಪನಿಯ ಕಚೇರಿಯನ್ನು ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿ ಮಾ.22 ರಂದು ಉದ್ಘಾಟಿಸಿದರು‌. ಅವರು ಮೀನುಗಾರ ರೈತರ ಅಭ್ಯುದಯವನ್ನು ಉದ್ದೇಶಿಸಿ ಆರಂಭಿಸಿರುವ ಯೋಜನೆಯ ಸದುಪಯೋಗ ಪಡೆದುಕೊಂಡು ಎಲ್ಲ ಮೀನುಗಾರರು ಪ್ರಗತಿಯನ್ನು ಸಾಧಿಸಬೇಕೆಂದು ನುಡಿದರು. ಸಂಸ್ಥೆಯ ಬೆಳವಣಿಗೆಗೆ ತನ್ನೆಲ್ಲ ಸಹಕಾರವನ್ನು ನೀಡುವುದಾಗಿ ತಿಳಿಸಿದರು. ಕಂಪನಿಯ ಅಧ್ಯಕ್ಷರಾದ ಆನಂದ ಖರ‍್ವಿ ಉಪ್ಪುಂದ ಪ್ರಾಸ್ತಾವಿಕ ನುಡಿಗಳನ್ನಾಡಿ ಕಂಪನಿಯ ಉದ್ದೇಶ ಹಾಗೂ ಮೀನುಗಾರರಿಗೆ ಸಿಗುವ ಪ್ರಯೋಜನಗಳ […]

ವಿಧಾನಸಭೆ ಚುನಾವಣೆ: ಕಾಂಗ್ರೆಸ್‌ ನ ಮೊದಲ ಪಟ್ಟಿ ರಿಲೀಸ್

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷದ ಮೊದಲ ಪಟ್ಟಿ ರಿಲೀಸ್‌ ಆಗಿದೆ. ಮೊದಲ ಪಟ್ಟಿಯಲ್ಲಿ 124 ಸ್ಥಾನಗಳಿಗೆ ಟಿಕೆಟ್‌ ಘೋಷಿಸಲಾಗಿದೆ. ಪ್ರಮುಖ ಕ್ಷೇತ್ರಗಳು ಮತ್ತು ಅಭ್ಯರ್ಥಿಗಳು: ಪ್ರಮುಖವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವರುಣಾ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ನಂಜನಗೂಡು ಕ್ಷೇತ್ರಕ್ಕೆ ಧ್ರುವನಾರಾಯಣ್‌ ಅವರ ಪುತ್ರ ದರ್ಶನ್‌ ಅವರಿಗೆ ಟಿಕೆಟ್‌ ನೀಡಲಾಗಿದೆ. ಕನಕಪುರ ಕ್ಷೇತ್ರದಿಂದ ಡಿಕೆಶಿ ಅವರು ಸ್ಪರ್ಧಿಸಲಿದ್ದಾರೆ. ದೇವನಹಳ್ಳಿ ಎಸ್‌ ಸಿ  ಕ್ಷೇತ್ರದಿಂದ ಕೆ.ಹೆಚ್.ಮುನಿಯಪ್ಪ ಅವರಿಗೆ ಟಿಕೆಟ್‌ ನೀಡಲಾಗಿದೆ. ಗಾಂಧಿನಗರದಿಂದ ದಿನೇಶ್‌ ಗುಂಡೂರಾವ್‌, ಬಿಟಿಎಂ […]

ಕರಾವಳಿ ಭದ್ರತಾ ತರಬೇತಿ: ಸಮಾರೋಪ ಸಮಾರಂಭ

ಉಡುಪಿ: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 2 ನೇಯ ತಂಡದ ತರಬೇತಿಯ ಸಮಾರೋಪ ಸಮಾರಂಭವು ಮಲ್ಪೆಯ ಸಿಎಸ್‌ಪಿ ಕೇಂದ್ರ ಕಚೇರಿಯಲ್ಲಿ ಮಂಗಳವಾರ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಹೋಮ್‌ಗಾರ್ಡ್ ಕಮಾಂಡೆಂಟ್ ಡಾ. ಪ್ರಶಾಂತ್ ಶೆಟ್ಟಿ ಮಾತನಾಡಿ, ತರಬೇತಿಯಿಂದಾಗಿ ಅಧಿಕಾರಿ ಮತ್ತು ಸಿಬ್ಬಂದಿಗಳು ಹೆಚ್ಚು ಪರಿಣಿತರಾಗಿ ಇಲಾಖೆಯಲ್ಲಿ ಸಮರ್ಥ ರೀತಿಯಲ್ಲಿ ಕರ್ತವ್ಯ ನಿರ್ವಹಿಸಬಹುದಾಗಿದೆ. ತೊಂದರೆಗೀಡಾದ ಸಾರ್ವಜನಿಕರ ಜೀವರಕ್ಷಣೆಗೆ ತರಬೇತಿಯು ಅನುಕೂಲವಾಗಲಿದೆ ಎಂದರು. ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದ ಸಿಎಸ್‌ಪಿ ಹೆಜಮಾಡಿ ಠಾಣೆಯ ಎಎಸ್‌ಐ ಮೋಹನದಾಸ್, […]

ಮುಂಬರುವ ದಿನಗಳಲ್ಲಿ ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನಗಳು ಲಭಿಸಲಿವೆ: ಶಾಸಕ ವೇದವ್ಯಾಸ ಕಾಮತ್

ಮಂಗಳೂರು: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು ರಾಜ್ಯ ಸರ್ಕಾರ ಸಾಕಷ್ಟು ಪ್ರಯತ್ನ ನಡೆಸುತ್ತಿದ್ದು, ಅದರ ಫಲವಾಗಿ ಮುಂಬರುವ ದಿನಗಳಲ್ಲಿ ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನಗಳು ಲಭಿಸಲಿವೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಹರ್ಷ ವ್ಯಕ್ತಪಡಿಸಿದರು. ಅವರು ಶುಕ್ರವಾರ ನಗರದ ತುಳು ಭವನದಲ್ಲಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ 360 ಲಕ್ಷ ರೂ.ಗಳ ಅನುದಾನದಿಂದ ನಿರ್ಮಿಸಲಾದ ತುಳುಭವನದ ಹೆಚ್ಚುವರಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು. ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಲು […]