ಎಸ್ಸೆಸ್ಸೆಲ್ಸಿ ಪರೀಕ್ಷೆ ವ್ಯವಸ್ಥಿತವಾಗಿ ನಡೆಸಿ: ಡಾ.ಬಿ.ಸಿ.ಸತೀಶ

ಇದೇ ಮಾರ್ಚ್, 31 ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದ್ದಾರೆ. ನಗರದ ಸಂತ ಮೈಕಲರ ಶಾಲೆಯ ಸಭಾಂಗಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆ ಸಂಬಂಧಿಸಿದಂತೆ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಒಂದು ಪ್ರಮುಖ ಘಟ್ಟವಾಗಿದ್ದು, ಈ ಹಿನ್ನೆಲೆ ಪರೀಕ್ಷೆಯನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷೆಗೆ ನಿಯೋಜಿಸಿರುವ ಎಲ್ಲಾ ಹಂತದ ಅಧಿಕಾರಿಗಳು ಕರ್ತವ್ಯ ಪ್ರಜ್ಞೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ […]

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಜಿಲ್ಲೆಯಲ್ಲಿ 13,753 ವಿದ್ಯಾರ್ಥಿಗಳು: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೆ ನಡೆಯಲಿದ್ದು, ಈ ಬಾರಿ ಜಿಲ್ಲೆಯಲ್ಲಿ ಒಟ್ಟು 13,753 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ 55 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪರೀಕ್ಷೆಗಳು ಸುಗಮವಾಗಿ ನಡೆಯಲು ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಸೂಚನೆ ನೀಡಿದರು. ಅವರು ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ, ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವ ಸಿದ್ಧತಾ […]