ಕುಂಜಿಬೆಟ್ಟುವಿನಲ್ಲಿ ಉಪ ವಿದ್ಯುತ್ ಕೇಂದ್ರ ಹಾಗೂ ಇತರ ಕಾಮಗಾರಿಗಳ ಅನಾವರಣ ಕಾರ್ಯಕ್ರಮ ಉದ್ಘಾಟನೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ಉಡುಪಿ ಜಿಲ್ಲೆಯಲ್ಲಿ ಒಟ್ಟು 124.72ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಹೆಗ್ಗುಂಜೆ, ಬೆಳ್ಮಣ್ ಮತ್ತು ಬೆಳಪು ಉಪ ವಿದ್ಯುತ್ ಕೇಂದ್ರ ಹಾಗೂ ಇತರ ಕಾಮಗಾರಿಗಳ ಅನಾವರಣ ಕಾರ್ಯಕ್ರಮ ಕುಂಜಿಬೆಟ್ಟುವಿನ ಕರ್ನಾಟಕ ವಿದ್ಯುಚ್ಛಕ್ತಿ ನೌಕರರ ಸಭಾಭವನದಲ್ಲಿ ಇಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಉಡುಪಿ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಇಂಧನ ಕ್ಷೇತ್ರಕ್ಕೆ ನೀಡಿದ ಕೊಡುಗೆಯಿಂದ ಇಂದು ವಿದ್ಯುತ್ ಸಮಸ್ಯೆಗಳು ನಿವಾರಣೆಯಾಗಿವೆ ಎಂದರು. ಮಂಗಳೂರು ಮೆಸ್ಕಾಂ […]

ಉಡುಪಿ ಸೀರೆ ಅಂತಾರಾಷ್ಟ್ರೀಯ ಖ್ಯಾತಿ ಆಗಲಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಉಡುಪಿಯ ಹೆಮ್ಮಯೆ ಕೈಮಗ್ಗದ ಸೀರೆ ಆದ, ಭೌಗೋಳಿಕ ವಿಶಿಷ್ಠತೆ ಮಾನ್ಯತೆ ಪಡೆದಿರುವ ಉಡುಪಿ ಸೀರೆಯ ಉತ್ಪಾದನೆಯು ಅಧಿಕಗೊಂಡು, ವಿಶ್ವ ಮಾನ್ಯತೆ ಪಡೆಯುವಂತಾಗಲಿ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ, ಜಿಲ್ಲಾ ಖಜಿನ ಪ್ರತಿಷ್ಠಾನ ಟ್ರಸ್ಟ್, ಕೈಮಗ್ಗ ಮತ್ತು ಜವಳಿ ಇಲಾಖೆ, ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಗ ಇವರ ಸಹಯೋಗದಲ್ಲಿ ನಡೆದ, ಉಡುಪಿ ಕೈ […]

ಕಾಯಕ ಶುದ್ದಿಯಿಂದ ಆತ್ಮ ಶುದ್ದಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ವ್ಯಕ್ತಿಗಳು ತಾವು ಮಾಡುವ ಕಾಯಕವನ್ನು ಶ್ರದ್ದೆ ಮತ್ತು ಭಕ್ತಿಯಿಂಧ ಮಾಡುವುದರ ಮೂಲಕ ಮನಸ್ಸು ಮತ್ತು ಆತ್ಮವನ್ನು ಶುದ್ದಿ ಮಾಡಿಕೊಳ್ಳಬಹುದು ಎಂಬ ದೇವರ ದಾಸಿಮಯ್ಯ ಸಂದೇಶ ಎಲ್ಲ ಕಾಲಕ್ಕೂ ಸಲ್ಲುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ವತಿಯಿಂದ ನಡೆದ, ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರತಿಯೊಬ್ಬರೂ ತಾವು ಮಾಡುವ ಕೆಲಸವನ್ನು ಶ್ರದ್ದೆ ಮತ್ತು […]

ಮುಂದಿನ ಮೂರು- ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು-ನಾಲ್ಕು ದಿನ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರ ನೀಡಿದೆ. ಸಮುದ್ರ ಮಟ್ಟದಿಂದ 900 ಮೀಟರ್‌ ಎತ್ತರದಲ್ಲಿ ಟ್ರಫ್‌ ಇರುವುದರಿಂದ ಹವಾಮಾನದಲ್ಲಿ ಭಾರೀ ಬದಲಾವಣೆ ಆಗಲಿದೆ ಎಂದಿದೆ. ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳ ವಿವಿಧ ಕಡೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ನೀಡಿದೆ.

ಸತತ ಏರಿಕೆ ಕಂಡಿದ್ದ ಚಿನ್ನದ ಬೆಲೆ ಕೊಂಚ ಇಳಿಕೆ..  

ನಿನ್ನೆ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ (Gold Price) ಶನಿವಾರ ಪೇಟೆಯಲ್ಲಿಂದು ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ಹೌದು, 24 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆಯು 160 ರೂ ಇಳಿಕೆಯಾದ್ದು, ಬೆಳ್ಳಿಯ ಬೆಲೆಯಲ್ಲಿ ಇಂದು ಕೂಡ 300 ರೂ ಏರಿಕೆಯಾಗಿದೆ. ಚಿನ್ನ, ಬೆಳ್ಳಿ ಖರೀದಿಸುವ ಪ್ಲಾನ್ ಮಾಡಿದ್ದರೆ ಒಮ್ಮೆ ಬೆಲೆಗಳನ್ನು ಪರಿಶೀಲಿಸಿ ನಂತರ ಖರೀದಿಸಿ. ರಾಜ್ಯದಲ್ಲಿ ಚಿನ್ನ, ಬೆಳ್ಳಿ ದರದ ಮಾಹಿತಿ ಹೀಗಿದೆ. ಹೌದು, ಕರ್ನಾಟಕದಲ್ಲಿ 24 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆಯು 160 ರೂ […]