ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಏರಿಕೆ: 209 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ. ನಿನ್ನೆ ಹೊಸದಾಗಿ 209 ಮಂದಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸಂಕ್ರೀಯ ಸೋಂಕಿತರ ಸಂಖ್ಯೆ 792ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಭಾನುವಾರ 7021 ಮಂದಿಯನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರು ಗ್ರಾಮಾಂತರ 07, ಬೆಂಗಳೂರು ನಗರ 120, ಬೀದರ್ ಮತ್ತು ಚಿಕ್ಕಬಳ್ಳಾಪುರ 03, ದಕ್ಷಿಣ ಕನ್ನಡ, ದಾವಣಗೆರೆ ಮತ್ತು ಕೋಲಾರ ಜಿಲ್ಲೆಯಲ್ಲಿ […]
ಕುಂಭಾಶಿಯಲ್ಲಿ ಸರಣಿ ಅಪಘಾತ- ಯುವಕನೋರ್ವ ಮೃತ್ಯು!

ಕುಂದಾಪುರ:ಕುಂಭಾಶಿಯಿಂದ ಕುಂದಾಪುರ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ಯುವಕನಿಗೆ ಕುಂಭಾಶಿ ಪಾಕಶಾಲಾ ಸಮೀಪದ ಬೀಚ್ ರಸ್ತೆ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಕುಂಭಾಶಿಯಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಕುಂಭಾಶಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೊಳೆಕಟ್ಟು ಸಮೀಪದ ನಿವಾಸಿ ಪ್ರಶಾಂತ್ ಹಾಗೂ ಅವರ ಸ್ನೇಹಿತ ವಿಘ್ನೇಶ್ ಕೆಲಸದ ನಿಮಿತ್ತ ಕುಂದಾಪುರ ಕಡೆಗೆ ಹೋಗುವಾಗ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲನೆ ಮಾಡುತ್ತಿದ್ದ ಯುವಕ ಪ್ರಶಾಂತ್ ಪೂಜಾರಿ (25) ತೀವ್ರ ಸ್ವರೂಪದ ಗಾಯಗಳಾಗಿದ್ದು […]
ಕಾರ್ಕಳ: ಎಣ್ಣೆಹೊಳೆ ಏತ ನೀರಾವರಿ ಯೋಜನೆ ಡ್ಯಾಮ್ ನಲ್ಲಿ ಕ್ರಿಕೆಟ್ ಆಡಿ ಪ್ರತಿಭಟಿಸಿದ ಮುತಾಲಿಕ್ ಟೀಮ್

ಕಾರ್ಕಳ: ಅಜೆಕಾರು ಎಣ್ಣೆಹೊಳೆ ಎಂಬಲ್ಲಿ ಸ್ವರ್ಣ ನದಿಗೆ ನಿರ್ಮಿಸಲಾಗಿದ್ದ ಎಣ್ಣೆಹೊಳೆ ಏತನೀರಾವರಿ ಯೋಜನೆ ಸಂಪೂರ್ಣ ವಿಫಲವಾಗಿದೆ. ರೂ.138 ಕೋಟಿ ಹಣವನ್ನು ಪೋಲುಮಾಡಲಾಗಿದೆ. ಮಹಾಭ್ರಷ್ಟಾಚಾರ ಇದಾಗಿದ್ದು, ಸಂಬಂಧ ಪಟ್ಟ ಇಲಾಖಾಧಿಕಾರಿಗಳನ್ನು ನ್ಯಾಯಾಲಯದ ಕಟಕಟೆಯಲ್ಲಿ ನಿಲ್ಲಿಸುತ್ತೇನೆಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಅಭಿವೃದ್ಧಿಯ ಹೆಸರಿನಲ್ಲಿ ಕೆಲವೇ ಕೆಲ ವ್ಯಕ್ತಿಗಳು ಅಭಿವೃದ್ಧಿ ಹೊಂದುತ್ತಿದ್ದಾರೆ. ಬಿಟ್ಟಿ ಪ್ರಚಾರಕ್ಕಾಗಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ರೂ.108 ಕೋಟಿ ವೆಚ್ಚದಲ್ಲಿ ಎಣ್ಣಿಹೊಳೆ ನೀರಾವರಿ ಯೋಜನೆಗಾಗಿ ಹಣ ವ್ಯಯಿಸಿದರೆ ಮತ್ತೇ ಅದರ ಮುಂದುವರಿದ […]