ಬಿಸಿಲಿನ ಧಗೆಯಿಂದ ತನುವನ್ನು ತಂಪಾಗಿಸಿಕೊಳ್ಳಲು ನೈಸರ್ಗಿಕ ಆರೋಗ್ಯಕರ ಪೇಯಗಳನ್ನು ಸೇವಿಸಿರಿ
ಕರಾವಳಿಯ ಭಾಗದಲ್ಲಿ ಬಿಸಿಲು ಧಗಧಗಿಸುತ್ತಿದ್ದು, ಮಂಗಳೂರಿನಲ್ಲಿ 39ಡಿಗ್ರಿ ಸೆಲ್ಸಿಯಸ್ ನ ಅತ್ಯಾಧಿಕ ತಾಪಮಾನ ದಾಖಲಾಗಿದೆ. ಬಿಸಿಲಿನ ತಾಪಾಘಾತದಿಂದ ಜನರು ಮಾತ್ರವಲ್ಲದೆ ಪ್ರಾಣಿ ಪಕ್ಷಿಗಳು ಕೂಡಾ ಪ್ರಾಣಕಳೆದುಕೊಳ್ಳುವ ಘಟನೆಗಳು ಭಾರತದಲ್ಲಿ ಸರ್ವೇ ಸಾಮಾನ್ಯ. ಬೇಸಿಗೆ ಕಾಲದಲ್ಲಿ ದೇಹವು ಅತಿ ಹೆಚ್ಚು ನೀರನ್ನು ಕಳೆದುಕೊಳ್ಳುವುದರಿಂದ ಈ ಸಮಯದಲ್ಲಿ ನೀರಿನ ಸೇವನೆಯನ್ನು ಹೆಚ್ಚಿಸುವುದು ಅವಶ್ಯ. ಬರಿಯ ನೀರು ಕುಡಿಯುವ ಬದಲಿಗೆ ಕೆಲವೊಂದು ಆರೋಗ್ಯ ಪೇಯಗಳನ್ನು ಆಹಾರದ ಜೊತೆ ಸೇವಿಸಿದಲ್ಲಿ ತನುವನ್ನು ತಂಪಾಗಿಸುವ ಜೊತೆ ಮನಸ್ಸನ್ನೂ ಉಲ್ಲಾಸಭರಿತವಾಗಿಸಿಕೊಳ್ಳಬಹುದು. ನೀರು ಮಜ್ಜಿಗೆ: ಮಜ್ಜಿಗೆಯ ನಿಯಮಿತ […]
ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ, ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ, ಉಡುಪಿ ಜಿಲ್ಲಾ ಘಟಕ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಹಾಗೂ ಯೆನಪೋಯ ಮೆಡಿಕಲ್ ಕಾಲೇಜು ದೇರಳಕಟ್ಟೆ ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಮಹಿಳಾ ಸ್ವಾಸ್ಥ್ಯ ಸಂರಕ್ಷಣಾ ತಪಾಸಣೆ ಹಾಗೂ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವು ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಯುಜಿ.ಎವಿ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ […]
ಎಸ್.ಎಸ್.ಎಲ್.ಸಿ ಪರೀಕ್ಷೆ: ನಿಷೇಧಾಜ್ಞೆ
ಉಡುಪಿ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೆ ಜಿಲ್ಲೆಯ ಒಟ್ಟು 55 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1) ರಂತೆ ನಿಷೇಧಾಜ್ಷೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
ಮಹಿಳೆಯರು ಸುಸ್ಥಿರ ಆರೋಗ್ಯವಂತರಾಗಿರಬೇಕು: ಸುಮಿತ್ರಾ ಆರ್ ನಾಯಕ್
ಉಡುಪಿ: ಮಹಿಳೆಯರು ತಮ್ಮ ಆರೋಗ್ಯದ ಸಮಸ್ಯೆಗಳ ಬಗ್ಗೆ ಸಕಾಲದಲ್ಲಿ ಸೂಕ್ತ ತಪಾಸಣೆ ಮಾಡಿಸಿಕೊಳ್ಳದೇ ಇದ್ದಲ್ಲಿ ಅದರಿಂದ ಆಕೆಯ ಆರೋಗ್ಯ ಮಾತ್ರವಲ್ಲದೇ, ಆಕೆಯ ಕುಟುಂಬ ಮತ್ತು ಸಮಾಜದ ಆರೋಗ್ಯದ ಮೇಲೆ ಸಹ ವ್ಯತಿರಿಕ್ತ ಪರಿಣಾಮ ಉಂಟಾಗಲಿದ್ದು, ಮಹಿಳೆಯರು ಸುಸ್ಥಿರ ಆರೋಗ್ಯವಂತರಾಗಿರಲು ಆಯುಷ್ಮತಿ ಕ್ಲಿನಿಕ್‌ಗಳು ಸಹಕಾರಿಯಾಗಲಿವೆ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಗೂ […]