ವಿಧಾನಸಭೆ ಚುನಾವಣೆ: ಮೇ 10 ರಂದು ಒಂದೇ ಹಂತದಲ್ಲಿ ಮತದಾನ; ಮೇ 13 ರಂದು ಫಲಿತಾಂಶ

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ಮೇ 10 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ ವರ್ಷದ ಚುನಾವಣೆಯಲ್ಲಿ 9.17 ಲಕ್ಷಕ್ಕೂ ಹೆಚ್ಚು ಮೊದಲ ಬಾರಿಯ ಮತದಾರರು ಮತ ಚಲಾಯಿಸಲಿದ್ದಾರೆ. ಹಾಲಿ ವಿಧಾನಸಭೆಯ ಅವಧಿ ಮೇ 24ಕ್ಕೆ ಮುಕ್ತಾಯವಾಗಲಿದೆ. ಒಟ್ಟು 5.21 ಕೋಟಿ ಜನರು ಮತದಾನದ ಹಕ್ಕು ಹೊಂದಿದ್ದಾರೆ. 224 ಎಸಿಗಳಲ್ಲಿ 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಪ್ರತಿ ಪಿಎಸ್‌ಗೆ ಸರಾಸರಿ 883 ಮತದಾರರು ಇರಲಿದ್ದಾರೆ. 50% […]

ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿ: ಸಿಎಂ ಬೊಮ್ಮಾಯಿ ಸರ್ಕಾರಿ ಕಾರ್ಯಕ್ರಮಗಳು ರದ್ದು

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಬುಧವಾರದಂದು ವೇಳಾಪಟ್ಟಿ ಪ್ರಕಟವಾಗಲಿದ್ದು ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಯಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳು ರದ್ದಾಗಿವೆ. ಇಂದು ಸಿಎಂ ಬೊಮ್ಮಾಯಿ ಅವರು ಕೊಪ್ಪಳ ಹಾಗೂ ತವರು ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಬೇಕಿತ್ತು. ಆದರೆ 11.30ಕ್ಕೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿರುವುದರಿಂದ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ನೀರಾವರಿ ಯೋಜನೆಗೆ ಚಾಲನೆ ನೀಡಬೇಕಿತ್ತು. ಕೆರೆಗಳಿಗೆ ನೀರು ತುಂಬುವ ಯೋಜನೆ ಚಾಲನೆ ಹಾಗೂ ಶಿಗ್ಗಾಂವಿ, ರಾಣೆಬೆನ್ನೂರಿನಲ್ಲಿ […]

ಕರ್ನಾಟಕ ವಿಧಾನಸಭೆ ಚುನಾವಣೆ: ಇಂದೇ ಮುಹೂರ್ತ ಫಿಕ್ಸ್

ನವದೆಹಲಿ: ಇಂದು (ಬುಧವಾರ) ಕೇಂದ್ರ ಚುನಾವಣಾ ಆಯೋಗ ದಿಂದ ಸುದ್ದಿಗೋಷ್ಠಿ ನಡೆಯಲಿದ್ದು, ಚುನಾವಣಾ ದಿನಾಂಕ ಘೋಷಣೆ ಮಾಡಲಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಲಿದೆ. ಮೇ ಮೊದಲ ವಾರದಲ್ಲಿ ರಾಜ್ಯದ 224 ಕ್ಷೇತ್ರಗಳಿಗೆ ಚುನಾವಣೆ ನಡೆಯುವ ಸಾಧ್ಯತೆಗಳಿದ್ದು,ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದರೇ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. 

ಏಪ್ರಿಲ್ 1 ರಿಂದ 2,000 ಕ್ಕಿಂತ ಹೆಚ್ಚಿನ ವ್ಯಾಪಾರಿ ಯುಪಿಐ ವಹಿವಾಟುಗಳ ಮೇಲೆ ಶೇಕಡಾ 1.1 ರಷ್ಟು ಇಂಟರ್‌ಚೇಂಜ್ ಶುಲ್ಕ ಅನ್ವಯ

ನವದೆಹಲಿ: ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಪ್ರಿಪೇಯ್ಡ್ ಪಾವತಿ ಉಪಕರಣಗಳು (ಪಿಪಿಐಗಳು) – ವ್ಯಾಲೆಟ್‌ಗಳು ಅಥವಾ ಕಾರ್ಡ್‌ಗಳನ್ನು ಬಳಸಿಕೊಂಡು ಮಾಡುವ ವ್ಯಾಪಾರಿ ಯುಪಿಐ (ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್) ವಹಿವಾಟುಗಳ ಮೇಲೆ ಶೇಕಡಾ 1.1 ರಷ್ಟು ಇಂಟರ್‌ಚೇಂಜ್ ಶುಲ್ಕ ಅನ್ವಯಿಸುತ್ತದೆ ಎಂದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎನ್‌ಪಿಸಿಐ) ಸೂಚನೆ ನೀಡಿದೆ. ಆನ್‌ಲೈನ್ ವ್ಯಾಪಾರಿಗಳು, ದೊಡ್ಡ ವ್ಯಾಪಾರಿಗಳು ಮತ್ತು ಸಣ್ಣ ಆಫ್‌ಲೈನ್ ವ್ಯಾಪಾರಿಗಳಿಗೆ ಮಾಡಿದ ರೂ.2,000 ಕ್ಕಿಂತ ಹೆಚ್ಚಿನ ಯುಪಿಐ ಪಾವತಿಗಳ ಮೇಲೆ ಶುಲ್ಕವನ್ನು ವಿಧಿಸಲಾಗುತ್ತದೆ. […]

ಕಾಪು: ಸ್ಮಶಾನ ಭೂಮಿಗಾಗಿ ಅರ್ಜಿ ಸಲ್ಲಿಸಲು ಆಹ್ವಾನ

ಕಾಪು: ಜಿಲ್ಲೆಯ ಎಲ್ಲಾ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರ್ಕಾರದ ಉದ್ದೇಶವಾಗಿದ್ದು, ಕಾಪು ತಾಲೂಕು ವ್ಯಾಪ್ತಿಯ ಗ್ರಾಮಗಳ ಸಾರ್ವಜನಿಕ ಸ್ಥಳಗಳಲ್ಲಿ ಸ್ಮಶಾನ ನಿರ್ಮಾಣಕ್ಕೆ ಜಮೀನಿನ ಅವಶ್ಯಕತೆ ಇದ್ದಲ್ಲಿ ಬೇಡಿಕೆಗಳನ್ನು ತಾಲೂಕು ತಹಶೀಲ್ದಾರರು ಅಥವಾ ಗ್ರಾಮ ವ್ಯಾಪ್ತಿಯ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದೆ. ಸ್ಮಶಾನ ಭೂಮಿ ಅವಶ್ಯಕತೆಯ ಬಗ್ಗೆ ಅರ್ಜಿ ಸಲ್ಲಿಸುವ ವ್ಯಕ್ತಿಗಳು ಮನವಿಯ ಜೊತೆಗೆ ಹೆಸರು, ತಂದೆಯ ಹೆಸರು, ಆಧಾರ್ ಕಾರ್ಡ್ ನಂಬರ್, ಗ್ರಾಮದ ಹೆಸರು, ನಗರ, ತಾಲೂಕು […]