ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವು ಗುರುವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚ್ಚೀಂದ್ರ ಅವರಿಗೆ ಮನವಿ ಸಲ್ಲಿಸಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಇದರ ಅಧೀನ ಸಂಸ್ಥೆಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುಮಾರು 170 ಮಂದಿ ಸದಸ್ಯರು ಪ್ರಾಮಾಣಿಕರಾಗಿ ಕರ್ತವ್ಯ ನಿರ್ವಹಿಸಿ ಕೊಂಡು ಬರುತ್ತಿದ್ದಾರೆ. ಆದರೆ ಇತ್ತೀಚೆಗೆ […]

ಕಲ್ಯಾಣ್ ಮಿತ್ರ ಮಂಡಲ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹಳದಿ ಕುಂಕುಮ ಕಾರ್ಯಕ್ರಮ

ಕಲ್ಯಾಣ್: ಕರ್ನಾಟಕ ಮಿತ್ರ ಮಂಡಲ ಕಲ್ಯಾಣ್ ಪೂರ್ವ ಇದರ ವತಿಯಿಂದ ಮಾರ್ಚ್ 26ರಂದು ಸಂಘದ ಕಚೇರಿಯಲ್ಲಿ ಮಹಿಳೆಯರಿಗಾಗಿ ಆಯೋಜಿಸಲಾದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹಳದಿ ಕುಂಕುಮ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು. ಪ್ರಾರಂಭದಲ್ಲಿ ಮಹಿಳಾ ಸದಸ್ಯರಿಂದ ಭಜನೆ ಕಾರ್ಯಕ್ರಮ ನಡೆಯಿತು. ನಂತರ ತಾಯಿ ಶಾರದಾಂಬೆಗೆ ಧನಂಜಯ ಪಾಲನ್ ರವರಿಂದ ಮಹಾ ಮಂಗಳಾರತಿ ನೆರವೇರಿತು ಹಾಗೂ ರಾಜೇಶ್ ಪೂಜಾರಿ ಅವರಿಂದ ಸಾಮೂಹಿಕ ಪ್ರಾರ್ಥನೆ ಜರುಗಿತು. ಬಳಿಕ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಮಹಿಳಾ ಪದಾಧಿಕಾರಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ […]

ಏ. 3 ರಿಂದ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಸಿ.ಇ.ಟಿ, ನೀಟ್ ಹಾಗೂ ಜೆ.ಇ.ಇ ಕ್ರಾಶ್ ಕೋರ್ಸ್ ತರಬೇತಿ

ಉಡುಪಿ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಾಂಗ ಮಾಡುತ್ತಿರುವ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಸಿ.ಇ.ಟಿ, ನೀಟ್ ಹಾಗೂ ಜೆ.ಇ.ಇ ಕ್ರಾಶ್ ಕೋರ್ಸ್ ತರಬೇತಿಯು ಏಪ್ರಿಲ್ 3 ರಿಂದ ಈ ಕೆಳಕಂಡ ಕಾಲೇಜುಗಳಲ್ಲಿ ನಡೆಯಲಿದೆ. ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಸರಕಾರಿ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ನಡೆಯಲಿದ್ದು, ನೋಡೆಲ್ ಅಧಿಕಾರಿಯಾಗಿ ಕಾಲೇಜಿನ […]

ಕುಡಿಯುವ ನೀರಿಗೆ ತತ್ವಾರ; ಅನ್ಯ ಉದ್ದೇಶಕ್ಕೆ ಬಳಸಿದಲ್ಲಿ ಸಂಪರ್ಕ ಕಡಿತ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ಡ್ಯಾಂನಲ್ಲಿ ನೀರಿನ ಸಂಗ್ರಹ ಅತೀ ಕಡಿಮೆಯಾಗುತ್ತಿದ್ದು ಪ್ರಸ್ತುತ ಕುಡಿಯುವ ನೀರಿನ ಬೇಡಿಕೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ ಉಡುಪಿ ನಗರಸಭೆಯಿಂದ ಕುಡಿಯುವ ನೀರಿನ ಸಂಪರ್ಕ ಪಡೆದಿರುವ ಸಾರ್ವಜನಿಕರು ಕುಡಿಯುವ ನೀರನ್ನು ಅನ್ಯ ಉದ್ದೇಶಗಳಾದ ವಾಹನ ತೊಳೆಯಲು, ಗಿಡಗಳಿಗೆ ನೀರು ಬಿಡಲು ಬಳಸಿದ್ದು ಕಂಡುಬಂದಲ್ಲಿ ಸದರಿಯವರ ನೀರಿನ ಸಂಪರ್ಕವನ್ನು ಯಾವುದೇ ಮುನ್ಸೂಚನೆ ನೀಡದೇ ಕಡಿತಗೊಳಿಸಿ ದಂಡ ವಿಧಿಸಲಾಗುವುದು. ನೀರನ್ನು ಮಿತವಾಗಿ ಬಳಸಲು ಆದ್ಯತೆ ನೀಡಿ, […]

ವಿಧಾನಸಭಾ ಚುನಾವಣೆ: ರಾಜಕೀಯ ಪಕ್ಷ- ಅಭ್ಯರ್ಥಿಗಳ ಬ್ಯಾನರ್ ಅಳವಡಿಕೆ ನಿಷೇಧ

ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಆದ್ದರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವವರೆಗೆ, ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ಪಕ್ಷಗಳಿಗೆ ಹಾಗೂ ಚುನಾವಣಾ ಅಭ್ಯರ್ಥಿಗಳಿಗೆ ಸಂಬಂಧಿಸಿದ ಪ್ರಚಾರ, ಶುಭಕೋರುವ ಹಾಗೂ ಕಾರ್ಯಕ್ರಮಗಳ ಬಗ್ಗೆ ಬ್ಯಾನರ್, ಬಂಟಿಂಗ್ಸ್, ಕಟೌಟ್ ಅಳವಡಿಸಲು, ಭಿತ್ತಿ ಪತ್ರ ಹಂಚಲು, ಭಿತ್ತಿ ಪತ್ರಗಳನ್ನು ಗೋಡೆಗೆ ಅಂಟಿಸಲು ಹಾಗೂ ಗೋಡೆ ಬರಹ ಬರೆಯಲು ಸ್ಥಳಿಯಾಡಳಿತದಿಂದ ಅನುಮತಿ ನೀಡದಿರಲು ಆದೇಶಿಸಿ, ಜಿಲ್ಲಾಧಿಕಾರಿ […]