ವಿಧಾನಸಭಾ ಚುನಾವಣೆಯ ಹಿನ್ನೆಲೆ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಮಂಡಲವಾರು ಅಭಿಪ್ರಾಯದ ಮತದಾನದ ಸಂಗ್ರಹಣಾ ವರದಿ ಹಸ್ತಾಂತರ..

ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸೂಚನೆಯಂತೆ ವಿಧಾನಸಭಾ ಅಭ್ಯರ್ಥಿಗಳ ಬಗ್ಗೆ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಕ್ಷದ ಶಕ್ತಿಕೇಂದ್ರ ಮಟ್ಟದಿಂದ ಮೇಲ್ಪಟ್ಟ ಪದಾಧಿಕಾರಿಗಳು ಮತ್ತಿತರ ಪ್ರಮುಖರ ಮಂಡಲವಾರು ಅಭಿಪ್ರಾಯದ ಮತದಾನದ ವರದಿಯನ್ನು ಬಿಜೆಪಿ ರಾಜ್ಯ ತಂಡ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರಿಗೆ ಹಸ್ತಾಂತರಿಸಿತು ಈ ಸಂದರ್ಭದಲ್ಲಿ ರಾಜ್ಯತಂಡದ ನೇತೃತ್ವ ವಹಿಸಿದ ಬಿಜೆಪಿ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನೆ, ವಿಧಾನ ಪರಿಷತ್ ಉಪ ಸಭಾಪತಿ ಪ್ರಾಣೇಶ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಬಿಜೆಪಿ […]

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ: 11,158 ಮಂದಿ ಮತದಾರರ ಹೆಸರುಗಳು ಪಟ್ಟಿಯಿಂದ ಡಿಲೀಟ್

ಮಂಗಳೂರು: ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 11,158 ಮಂದಿಯ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕಳೆದ ಚುನಾವಣೆಯ ಸಂದರ್ಭದಲ್ಲಿ ಕ್ಷೇತ್ರದಲ್ಲಿ 2,40,057 ಮತದಾರರಿದ್ದರು. ಹೊಸದಾಗಿ ಈಗ 13,487 ಮತದಾರರು ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಒಟ್ಟಾರೆ 1,15,895 ಪುರುಷರು ಮತ್ತು 1,26,447 ಮಹಿಳೆಯರ ಸಹಿತ 2,42,888 ಮತದಾರರಿದ್ದಾರೆ ಎಂದು ಚುನಾವಣಾ ಅಧಿಕಾರಿ ಕೆಂಪೇಗೌಡ ಹೇಳಿದರು. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಳೆದ ಅವಧಿಯ ಚುನಾವಣೆ ಸಂದರ್ಭ 56 ಮಂದಿ ಲಿಂಗತ್ವ ಅಲ್ಪಸಂಖ್ಯಾತ […]

ಪರವಾನಿಗೆ ನವೀಕರಣಕ್ಕೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಸೂಚನೆ

ಉಡುಪಿ : 2023- 24ನೇ ಸಾಲಿನ ಪರವಾನಿಗೆ ನವೀಕರಣಕ್ಕೆ ಎಪ್ರಿಲ್ ಒಂದರಿಂದ ಅವಕಾಶ ಕಲ್ಪಿಸಲಾಗಿದ್ದು ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಉದ್ಯಮೆದಾರಿಗೆ ವ್ಯಾಪಾರ ಆನ್ಲೈನ್ ತಂತ್ರಾಂಶದ ಮೂಲಕ ಡಿಜಿಟಲ್ ಸಹಿಯುಳ್ಳ ಉದ್ದಿಮೆ ಪರವಾನಿಗೆ ನೀಡಲಾಗುತ್ತಿದ್ದು ಅರ್ಜಿ ಸಲ್ಲಿಸಬಹುದಾಗಿದೆ. ಉದ್ಯಮ ಪರವಾನಿಗೆ ಪಡೆಯದ ಇರುವವರು ದಾಖಲೆ ಸಹಿತ ಅರ್ಜಿ ಸಲ್ಲಿಸಬಹುದು ಹಾಗೂ ಪರವಾನಿಗೆ ನವೀಕರಿಸದೆ ಇರುವವರು ಕೂಡ ದಾಖಲೆ ಸಹಿತ ಬಾಕಿ ದಂಡ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಿ ಪರವಾನಿಗೆಯನ್ನು ಪಡೆದುಕೊಳ್ಳಬಹುದು ಉದ್ದಿಮೆ ಪರವಾನಿಗೆ ಪಡೆದು ಉದ್ದಿಮೆ ನಡೆಸಿದೆ […]

ಉಡುಪಿ: ಕಳ್ಳತನದ ಆರೋಪಿಗೆ ಜೈಲು ಶಿಕ್ಷೆ

ಉಡುಪಿ: ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ಕಳವು ಮಾಡಿದ ಆರೋಪಿಗೆ ಉಡುಪಿ ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022 ಮಾರ್ಚ್ 26 ರಂದು ರಾತ್ರಿ ಗುರುರಾಜ್ ಎಂಬಾತನು, ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಗುಂಡಿಬೈಲು ದುಗ್ಗಣ್ಣಬೆಟ್ಟು ಮಾರ್ಗ ಜುಮಾದಿಕಟ್ಟೆ ದೇವಸ್ಥಾನದ ಹಿಂಬದಿ ರಸ್ತೆಯಲ್ಲಿರುವ ಸುನೀತಾ ರಾಮಚಂದ್ರ ಎಂಬವರ ಮನೆಗೆ ನುಗ್ಗಿ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡಿರುವ ಹಿನ್ನೆಲೆ, ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಯ […]

ಕಾಲುಜಾರಿ ಬಿದ್ದು ಹೊಳೆಗೆ ಬಿದ್ದು ವ್ಯಕ್ತಿ ಸಾವು- ಮುಂಡ್ಕೂರು ಶಾಂಭವಿ ಹೊಳೆಯಲ್ಲಿ ಮೃತದೇಹ ಪತ್ತೆ

ಕಾರ್ಕಳ: ಮುಂಡ್ಕೂರು ಶಾಂಭವಿ ಹೊಳೆಯಲ್ಲಿ ಮುಂಡ್ಕೂರು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಿವಾಸಿ ರಮೇಶ್ ಸಪಳಿಗ (68) ವರ್ಷ ಎಂಬವರ ಮೃತದೇಹ ನಿನ್ನೆ  ಪತ್ತೆಯಾಗಿದೆ. ಮುಂಬೈಯಲ್ಲಿ ಹೋಟೆಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಮೇಶ್ ಸಪಳಿಗ ಕೆಲವು ಸಮಯದ ಹಿಂದೆ ಸಹೋದರನ ಅನಾರೋಗ್ಯದ  ಹಿನ್ನಲೆ ಊರಿಗೆ ಬಂದವರು ವಾಪಸು ಹೋಗಿರಲಿಲ್ಲ. ಮಾರ್ಚ್ 29 ರಂದು ರಾತ್ರಿ 9 ಗಂಟೆಗೆ ಮಧ್ಯಪಾನ ಮಾಡಲೆಂದು ಮನೆಯಿಂದ ಹೋದವರು ವಾಪಸ್ ಮನೆಗೆ ಬಂದಿರಲಿಲ್ಲ. ಮಾ.31ರಂದು ಬೆಳಿಗ್ಗೆ ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿ ಇರುವ ನಾಗಬನದ ಹತ್ತಿರದ […]