ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಆರಂಭ

ಉಡುಪಿ:ರಾಜ್ಯದಲ್ಲಿ 2022-23ನೇ ಸಾಲಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಗಳು ಮುಕ್ತಾಯವಾಗಿವೆ. ಇಂದಿನಿಂದ ಅಂದರೆ ಏಪ್ರಿಲ್ 5, 2023 ರಿಂದ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ ರಾಜ್ಯಾದ್ಯಂತ 65 ಕಡೆ ಮೌಲ್ಯಮಾಪನ ನಡೆಯುತ್ತಿದ್ದು, ವಿಜ್ಞಾನ ವಿಷಯದ ಮೌಲ್ಯಮಾಪನ ಬೆಂಗಳೂರಿನಲ್ಲಿ ಮಾಡಲಾಗುತ್ತಿದೆ.ಉಡುಪಿ ಜಿಲ್ಲೆಯಲ್ಲಿ ಯಾವುದೇ ವಿಷಯದ ಮೌಲ್ಯಮಾಪನ ಕೇಂದ್ರ ಇಲ್ಲ. ಮಂಗಳೂರಿನಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದ ಕೆಲವು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದೆ. ಉಡುಪಿ ಜಿಲ್ಲೆಯ ಮೌಲ್ಯಮಾಪಕರು ಮಂಗಳೂರಿಗೆ ಹೋಗಿ ಮೌಲ್ಯಮಾಪನ ಮಾಡುತ್ತಿದ್ದಾರೆ. ಇನ್ನು ವಿಜ್ಞಾನ ವಿಭಾಗದ ಮೌಲ್ಯಮಾಪಕರು ಈಗಾಗಲೇ […]

ವಿಧಾನಸಭಾ ಸಾರ್ವತ್ರಿಕ ಚುನಾವಣೆ– 2023: ಸ್ವೀಪ್ ಸಮಿತಿ ವತಿಯಿಂದ ಪ್ರೊಪೈಲ್ ಇಮೇಜ್ ಬಿಡುಗಡೆ

ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ, ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿಗೆ ಹಲವು ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಯುವಜನತೆ ಸೇರಿದಂತೆ  ಬಹುತೇಕ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬಳಸುತ್ತಿರುವ ಹಿನ್ನಲೆಯಲ್ಲಿ  ಇವರನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ರೊಪೈಲ್ ಇಮೇಜ್‌ ಗಳನ್ನು ಸಿದ್ದಪಡಿಸಲಾಗಿದೆ. ಮತದಾನದ  ಕುರಿತು ಜಾಗೃತಿ ಮೂಡಿಸಲು ಮತದಾನದ ದಿನವಾದ ಮೇ 10 ನ್ನು ಸಾರ್ವಜನಿಕರಿಗೆ ಸದಾ ನೆನಪು ಮಾಡುವಂತೆ, ಪ್ರೊಪೈಲ್ ಇಮೇಜ್ ಗಳನ್ನು ಸಿದ್ದಪಡಿಸಿದ್ದು, ಇವುಗಳನ್ನು ಮೊಬೈಲ್ ನ […]

ಕೋಝಿಕ್ಕೋಡ್ ರೈಲಿನಲ್ಲಿ ಬೆಂಕಿ ಪ್ರಕರಣ: ಶಂಕಿತ ಆರೋಪಿಯ ಬಂಧನ

ಕೋಝಿಕ್ಕೋಡ್ : ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಶಂಕಿತ ಶಾರುಖ್ ಸೈಫಿ ಎಂಬಾತನನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದ ಸಹಯೋಗದಿಂದ ಕೇರಳ ಪೊಲೀಸರ ವಿಶೇಷ ತಂಡ ಮಹಾರಾಷ್ಟ್ರ ತಲುಪಿ ಮಂಗಳವಾರ ರಾತ್ರಿ ರತ್ನಗಿರಿಯಿಂದ ಬಂಧಿಸಿದೆ. ರೈಲಿಗೆ ಬೆಂಕಿ ಹಚ್ಚಿದ್ದ ಆರೋಪಿಗೂ ಸುಟ್ಟ ಗಾಯಗಳಾಗಿದ್ದು, ರತ್ನಗಿರಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದನು. ಆಸ್ಪತ್ರೆಯಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)ದ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ಮಧ್ಯೆ ಕೇರಳದ ಎಟಿಎಸ್ […]

ವಿಧಾನಸಭಾ ಚುನಾವಣೆ: ಉಡುಪಿ ಜಿಲ್ಲೆಗೆ ಪ್ಯಾರಾ ಮಿಲಿಟರಿ ಪಡೆ ಆಗಮನ

ಉಡುಪಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಗೆ ಮಂಗಳವಾರ ತಡರಾತ್ರಿ ಸೆಂಟ್ರಲ್‌ ಪ್ಯಾರಾ ಮಿಲಿಟರಿ ಪಡೆ ಆಗಮನವಾಗಿದೆ.ಅಸ್ಸಾಂನಿಂದ 4 ಕಂಪೆನಿಯ 400 ಮಂದಿ ಆಗಮಿಸಿದ್ದಾರೆ. ಒಂದು ತಂಡದಲ್ಲಿ 100 ಮಂದಿ ಇರಲಿದ್ದು, ಆಗಮಿಸಿರುವ 3 ತಂಡದಲ್ಲಿ 300 ಮಂದಿ ಪುರುಷರಿದ್ದರೆ.ಮತ್ತೂಂದು ತಂಡದಲ್ಲಿ ಮಹಿಳಾ ಸಿಬಂದಿ ಇದ್ದಾರೆ. ಚುನಾವಣೆ ನಿಮಿತ್ತ ರಾಜ್ಯಕ್ಕೆ 20 ಸಾವಿರ ಪ್ಯಾರಾ ಮಿಲಿಟರಿ ಸಿಬಂದಿ ಆವಶ್ಯಕತೆಯಿದ್ದು, ಮುಂದಿನ ಹಂತದಲ್ಲಿ ಇತರ ತಂಡಗಳು ಆಗಮಿಸಲಿವೆ. ಇವರನ್ನು ಕಾಪು, ಕಾರ್ಕಳ, ಉಡುಪಿ, ಬೈಂದೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಿಯೋಜಿಸಲಾಗುತ್ತದೆ. ಕುಂದಾಪುರ […]

ನಾಟ್ಯಶಾಸ್ತ್ರದ 108 ಕರಣಗಳ ಯಶಸ್ವಿ ಪ್ರದರ್ಶನ: ತನುಶ್ರೀ ಮುಡಿಗೆ 8ನೇ ವಿಶ್ವದಾಖಲೆ

ಉಡುಪಿ: ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ 7 ವಿಶ್ವದಾಖಲೆಗಳನ್ನು ಮುಡಿಗೇರಿಸಿಕೊಂಡಿರುವ ಉಡುಪಿಯ ಯೋಗ ಸಾಧಕಿ ತನುಶ್ರೀ ಪಿತ್ರೋಡಿ ಅವರು ನಾಟ್ಯ ಶಾಸ್ತ್ರದಲ್ಲಿ 8ನೇ ವಿಶ್ವದಾಖಲೆ ನಿರ್ಮಿಸಿದ್ದಾರೆ. ಮಂಗಳವಾರ ಬನ್ನಂಜೆ ನಾರಾಯಣ ಗುರು ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಟ್ಯಶಾಸ್ತ್ರದ 108 ಕರಣಗಳ ಭಂಗಿಗಳನ್ನು 3 ನಿಮಿಷ 29 ಸೆಕೆಂಡ್‌ ನಲ್ಲಿ ಪ್ರಸ್ತುತಪಡಿಸುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಸೇರ್ಪಡೆಯಾದರು. ಕಾಲು, ಕೈಗಳ ಚಲನೆ, ದೇಹದ ಭಂಗಿ ಈ ಮೂರು ಅಂಶಗಳ ಸಂಯೋಜನೆ 108 ಕರಣಗಳಾಗಿವೆ. ಭಗವಂತ ಶಿವ […]