ಮಾಧ್ಯಮಗಳಲ್ಲಿ ರಾಜಕೀಯ ಜಾಹೀರಾತುಗಳ ಮೇಲೆ ಎಂಸಿಎಂಸಿ ಮೂಲಕ 24*7 ನಿಗಾ
ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು, ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮಗಳು, ಕೇಬಲ್ ಟಿವಿ, ಫೇಸ್‌ಬುಕ್-ವಾಟ್ಸಾಪ್ ಸೇರಿದಂತೆ ಎಲ್ಲಾ ರೀತಿಯ ಸೋಷಿಯಲ್ ಮೀಡಿಯಾಗಳಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ) ಯಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ. ಎಂಸಿಎಂಸಿ ಯಿಂದ ಪೂರ್ವಾನುಮತಿ ಪಡೆಯದೇ ಜಾಹೀರಾತು ಪ್ರಸಾರ ಮಾಡುತ್ತಿರುವುದನ್ನು ಪರಿಶೀಲಿಸಲು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ […]
ಮಹಾವೀರರ ತತ್ವಗಳಿಂದ ಪ್ರಕೃತಿಗೆ ಪೂರಕವಾದ ಮಾನವ ಧರ್ಮ ನೆಲೆಗೊಳ್ಳುತ್ತದೆ: ವೀಣಾ ಬಿ.ಎನ್
ಉಡುಪಿ: ಪ್ರಕೃತಿ ಸಕಲ ಜೀವಿಗಳಿಗೂ ಬದುಕು ಹಕ್ಕನ್ನು ನೀಡಿದೆ. ನಾವು ನಮ್ಮ ಜೀವನದಲ್ಲಿ ಮಹಾವೀರರ ಐದು ಪಂಚ ತತ್ವಗಳಾದ ಸತ್ಯ, ಅಹಿಂಸೆ, ಅಪರಿಗ್ರಹ, ಆಚೌರ್ಯ ಮತ್ತು ಬ್ರಹ್ಮಚರ್ಯ ಪಾಲಿಸಿದಾಗ ಪ್ರಕೃತಿಗೆ ಪೂರಕವಾದ ಮಾನವ ಧರ್ಮ ಸಮಾಜದಲ್ಲಿ ನೆಲೆಗೊಳ್ಳುತ್ತದೆ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ರವರು ಹೇಳಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು. ಭಗವಾನ್ ಮಹಾವೀರರು ಶಾಂತಿ ಸೌಹಾರ್ದತೆಯನ್ನು ಬೋಧಿಸುವ ಮೂಲಕ ಮಾನವನ ಜೀವನ ಮೌಲ್ಯಗಳು ಸುಧಾರಿಸಲು ಮಾರ್ಗದರ್ಶನವನ್ನು […]
ಬಿಸಿಲ ಧಗೆಯಿಂದ ತತ್ತರಿಸಿದ ಸಾರ್ವಜನಿಕರಿಗೆ ಉಚಿತ ಕುಡಿಯುವ ನೀರಿನ ವ್ಯವಸ್ಥೆ
ಉಡುಪಿ: ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ನಗರದ ಮಾರುಥಿ ವಿಥಿಕಾ ರಸ್ತೆಯ ಜೋಸ್ ಅಲುಕಾಸ್ ಬಳಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ಥಾಪಿಸಿರುವ ಉಚಿತ ಶುದ್ದ ಕುಡಿಯುವ ನೀರಿನ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ದಿನೇ ದಿನೇ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ ತತ್ತರಿಸುತ್ತಿ ರುವ ಹಿರಿಯ ನಾಗರಿಕರು, ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ವ್ಯವಸ್ಥೆ ಮಾಡ ಲಾಗಿದ್ದು, ಐದನೇ ವರ್ಷದ ಈ ಸಾಮಾಜಿಕ ಕಾರ್ಯಕ್ಕೆ ಉಡುಪಿ ಜೋಸ್ ಅಲುಕಾಸ್ ಸಹಕಾರ ನೀಡಿದೆ. ಉಚಿತ ಕುಡಿಯುವ ನೀರಿನ ವ್ಯವಸ್ಥೆಗೆ ಉದ್ಯಮಿ ಉದಯ್ […]
ಬ್ರಹ್ಮಾವರ: ಎ. 6-13 ರವರೆಗೆ ಭೂಮಿಕಾ ಹಾರಾಡಿಯ ಬಣ್ಣ ನಾಟಕೋತ್ಸವ
ಬ್ರಹ್ಮಾವರ: ನಾಟಕಗಳಿಂದ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲೇ ಹೆಸರು ಮಾಡಿದ ಭೂಮಿಕಾ(ರಿ)ಹಾರಾಡಿ ತನ್ನ 25ನೇ ವರ್ಷದ ಸಂಭ್ರಮದಲ್ಲಿದ್ದು, ಈ ಪ್ರಯುಕ್ತ ಭೂಮಿಕಾ ತಂಡವು ತನ್ನ ವಾರ್ಷಿಕ ಸಂಭ್ರಮ “ಬಣ್ಣ-9”ಅನ್ನು ವಿಶಿಷ್ಟವಾಗಿ ಆಚರಿಸುತ್ತಿದೆ. ಬ್ರಹ್ಮಾವರದ ಎಸ್ಎಂಎಸ್ ಪದವಿ ಪೂರ್ವ ಕಾಲೇಜಿನ ಮಕ್ಕಳ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಎ.6ರಿಂದ ಎ.13ರ ರ ತನಕ ನಡೆಯಲಿರುವ ನಾಟಕೋತ್ಸವದಲ್ಲಿ ಎ.6 ರಂದು ಶಿಕ್ಷಕರ ಬಳಗ ಉಡುಪಿ ಇವರ ಬರ್ಬರೀಕ, ಎ.7 ರಂದು ರಂಗಾಯಣ ಶಿವಮೊಗ್ಗ ಇವರ ಹಕ್ಕಿಕಥೆ, ಎ.8 […]
ಮತದಾನ ಜಾಗೃತಿಗಾಗಿ ಸ್ವೀಪ್ ನಿಂದ್ ಪ್ರೊಫೈಲ್ ಇಮೇಜ್ ಬಿಡುಗಡೆ
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ, ಉಡುಪಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿಗೆ ಹಲವು ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಯುವಜನತೆ ಸೇರಿದಂತೆ ಬಹುತೇಕ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬಳಸುತ್ತಿರುವ ಹಿನ್ನಲೆಯಲ್ಲಿ ಇವರನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ರೊಪೈಲ್ ಇಮೇಜ್‌ಗಳನ್ನು ಸಿದ್ದಪಡಿಸಲಾಗಿದೆ. ಮತದಾನದ ಕುರಿತು ಜಾಗೃತಿ ಮೂಡಿಸಲು ಮತದಾನದ ದಿನವಾದ ಮೇ 10ನ್ನು ಸಾರ್ವಜನಿಕರಿಗೆ ಸದಾ ನೆನಪು ಮಾಡುವಂತೆ, ಪ್ರೊಪೈಲ್ ಇಮೇಜ್ ಗಳನ್ನು ಸಿದ್ದಪಡಿಸಿದ್ದು, ಇವುಗಳನ್ನು ಮೊಬೈಲ್ ನ ಡಿಪಿಯಾಗಿ […]