ಹೆಬ್ರಿಯಲ್ಲಿ ಇಂದು ಕಲ್ಪರಸ ಮಳಿಗೆ ಉದ್ಘಾಟನೆ..

ಹೆಬ್ರಿ: ರುಚಿಕರವೂ.. ಆರೋಗ್ಯಕರವೂ.. ಆದ ಕಲ್ಪರಸ ಸಮೃದ್ಧಿ ಸ್ವದೇಶಿ ಉತ್ಪನ್ನಗಳ ಮಳಿಗೆ ಇಂದು ಹೆಬ್ರಿಯ ಬಸ್ ನಿಲ್ದಾಣದ ಎದುರುಗಡೆ ಇರುವ ರಾಮನಾಥ (ಪೂಜಾ) ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಂಡಿತು. ಉಕಾಸ ಕಂಪೆನಿ ಉಡುಪಿಯ ಅಧ್ಯಕ್ಷರಾದ ಸತ್ಯನಾರಾಯಣ ಉಡುಪ ಮಳಿಗೆಯನ್ನು ಉದ್ಘಾಟಿಸಿದರು. ಜಗನ್ನಾಥ ಶೆಣೈ, ಕಟ್ಟಡ ಮಾಲಕರಾದ ಅನಂತ ನಾಯಕ್ ಹಾಗೂ ಸಮೃದ್ಧಿ ಸ್ವದೇಶಿ ಉತ್ಪನ್ನಗಳ ಮಳಿಗೆ ಮಾಲಕರಾದ ಸುದೇಶ್ ಪ್ರಭು ಉಪಸ್ಥಿತರಿದ್ದರು. ಕುಂದಾಪುರದಾದ್ಯಂತ ಪರಿಚಿತಗೊಂಡಿರುವ ಕಲ್ಪರಸ ಇದೀಗ ಹೆಬ್ರಿಯಲ್ಲಿ ಕೂಡ ಲಭ್ಯವಾಗಿದೆ. ರೈತರಿಂದ ನೇರವಾಗಿ ಗ್ರಾಹಕರಿಗೆ ಅನ್ನುವಂತೆ ಕೆಮಿಕಲ್ […]

ಕಾರ್ಕಳ: ಪುರಸಭಾ ವ್ಯಾಪ್ತಿಯ ಎಲ್ಲಾ ವಾರ್ಡಿನಲ್ಲಿ ನೀರಿನ ಸಮಸ್ಯೆ- ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹ…

ಕಾರ್ಕಳ: ಪುರಸಭಾ ವ್ಯಾಪ್ತಿಯಲ್ಲಿ ಎಲ್ಲಾ ವಾರ್ಡಿನಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ವಿಪಕ್ಷ ಸದಸ್ಯರು ಪುರಸಭೆಯಲ್ಲಿ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ನೀಡಿ ಮುಖ್ಯಾಧಿಕಾರಿಯವರನ್ನು ಆಗ್ರಹಿಸಿದರು, ವಾರ್ಡ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯನ್ನು ಗುರುತಿಸಿ ಸಮರ್ಪಕ ವಿತರಣೆಗೆ ಕ್ರಮ ಜರುಗಿಸಲಾಗುವುದು ಮತ್ತು ಅಗತ್ಯವಿರು ಸ್ಥಳಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಬರವಸೆಯನ್ನು ಮುಖ್ಯಾಧಿಕಾರಿಯವರು ನೀಡಿ ಪ್ರತಿಭಟನಾಕಾರರ ಮನವೊಲಿಸಿದರು ಈ ಸಂದರ್ಬದಲ್ಲಿ ವಿಪಕ್ಷ ನಾಯಕ ಅಶ್ಫಕ್ ಅಹಮ್ಮದ್, ಸದಸ್ಯರುಗಳಾದ ಶುಭದರಾವ್, ಪ್ರವೀಣ್ […]

ದ.ಕ ಜಿಲ್ಲೆ: ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ 

ಮಂಗಳೂರು:  ಏಪ್ರಿಲ್ 7 ಮತ್ತು 8 ರಂದು  ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ.

ಮಣಿಪಾಲ: ವಿಶ್ವ ಆರೋಗ್ಯ ದಿನ ನಿಮಿತ್ತ ಆರೋಗ್ಯ ಜಾಗೃತಿ ಅರಿವಿಗಾಗಿ ಶಿಲ್ಪ ಅನಾವರಣ

ಮಣಿಪಾಲ: ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನವನ್ನಾಗಿ ವಿಶ್ವದ್ಯಾಂತ ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಉತ್ತಮ ಆರೋಗ್ಯದ ಕುರಿತು ಅರಿವು ಮೂಡಿಸುವುದಾಗಿದೆ. ಮೊದಲು ಸೋಂಕು ಕಾಯಿಲೆಗಳು ಮತ್ತು ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಅವಶ್ಯಕತೆ ಇತ್ತು. ಆದರೀಗ ಅಸಾಂಕ್ರಾಮಿಕ ಮತ್ತು ಜೀವನ ಶೈಲಿಯಿಂದ ಬರುವ ಕಾಯಿಲೆಗಳು, ಮಧುಮೇಹ, ಹೃದ್ರೋಗ, ಕಿಡ್ನಿ ಇತ್ಯಾದಿಗಳ ತಡೆಗಟ್ಟುವ ಮಾಹಿತಿ ಮತ್ತು ಅರಿವು ಮೂಡಿಸುವ ಅವಶ್ಯಕತೆ ಇದೆ. ಇಂತಹ ಕಾರ್ಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು […]

ಬೆಳ್ತಂಗಡಿಯ ಥೋಮಸ್ ನೀಲಿಯಾರ ಬೆಂಗಳೂರಿನ ಸರ್ವಜ್ಞ ನಗರ ಕ್ಷೇತ್ರದಿಂದ ಕಣಕ್ಕೆ?

ಮಂಗಳೂರು: ಮೂಲತಃ ದ.ಕ ಜಿಲ್ಲೆಯ ಬೆಳ್ತಂಗಡಿಯ ಗಂಡಿಬಾಗಿಲು ಗ್ರಾಮದ ನಿವಾಸಿಯಾಗಿರುವ, ಪ್ರಸ್ತುತ 25 ವರ್ಷಗಳಿಂದ ಬೆಂಗಳೂರು ಸರ್ವಜ್ಞನಗರದಲ್ಲಿ ನೆಲೆಯಾಗಿರುವ ಥೋಮಸ್ ನೀಲಿಯಾರ ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಕಾನೂನು ಪದವೀಧರರಾಗಿರುವ ಇವರು, ಪಕ್ಷದ ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಸದಸ್ಯರು ಮತ್ತು ಕೇರಳದ ಪ್ರಭಾರಿ ಆಗಿದ್ದು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯರೂ ಆಗಿದ್ದಾರೆ. ಥೋಮಸ್(ಸುರೇಶ್) ಚೆರಿಯನ್ ನೀಲಿಯಾರ ಸರ್ವಜ್ಞ ನಗರ ಕ್ಷೇತ್ರದ ಬಿಜೆಪಿ ನಾಮಾಂಕಿತ ಅಭ್ಯರ್ಥಿಗಳ ಪಟ್ಟಿಯಲ್ಲಿ ಒಬ್ಬರಾಗಿದ್ದಾರೆ. ಹಾಲಿ ಕಾಂಗ್ರೆಸ್ […]