ನಗರದ ಸೋದೆ ಮಠದ ಜಗಲಿಯಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯ ರಕ್ಷಣೆ ಜಿಲ್ಲಾ ಆಸ್ಪತ್ರೆಗೆ ದಾಖಲು

ಉಡುಪಿ: ನಗರದ ಸೋದೆ ಮಠದ ಜಗಲಿಯಲ್ಲಿ ಹೊಟ್ಟೆ ಹಾಗೂ ಕಾಲು ಉಬ್ಬಿಕೊಂಡು ಅನಾರೋಗ್ಯದಿಂದ ತೀರಾ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯನ್ನು ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು ಅವರು ಸಾರ್ವಜನಿಕರ ಸಹಕಾರದೊಂದಿಗೆ ರಕ್ಷಣೆ ಮಾಡಿ ಜಿಲ್ಲಾ ಆಸ್ಪತ್ರೆಗೆ ದಾಖಲುಪಡಿಸಿದ್ದಾರೆ. ಈ ಹಿಂದೆ ಕೂಡ ಇದೇ ವ್ಯಕ್ತಿಗೆ ಕಣ್ಣುಗಳೆರಡು ಮಂಜಾಗಿ ಸರಿಯಾಗಿ ನಡೆದಾಡಲು ಆಗದಿರುವಂಥ ಸ್ಥಿತಿಯಲ್ಲಿದ್ದ ಸಂದರ್ಭದಲ್ಲಿ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು ಅವರು ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆಯನ್ನು ಕೊಡಿಸಿ ಮಾನವೀಯತೆಯನ್ನು ಮರೆದಿದ್ದರು. ರಕ್ಷಿಸಲ್ಪಟ್ಟ ವ್ಯಕ್ತಿಯನ್ನು ಗಣೇಶ 38 ವರ್ಷ […]

ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಲ್ಲಿ ಶಿಸ್ತು ಕ್ರಮ: ಜಿಲ್ಲಾಧಿಕಾರಿ

ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಚುನಾವಣೆ ಮತ್ತು ಪ್ರಚಾರ ಕಾರ್ಯಗಳಲ್ಲಿ ರಾಜಕೀಯ ಪಕ್ಷದವರು ಚುನಾವಣೆಯ ರ‍್ಯಾಲಿಯಲ್ಲಿ, ಕರಪತ್ರ ಹಂಚುವಿಕೆ ಕೆಲಸದಲ್ಲಿ, ಪ್ರಚಾರ ಕಾರ್ಯಗಳಲ್ಲಿ ಮತ್ತು ಇತರೆ ಕೆಲಸಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಈ ಆದೇಶಕ್ಕೆ ವ್ಯತಿರಿಕ್ತವಾಗಿ ಮಕ್ಕಳನ್ನು ಬಳಸಿಕೊಂಡಲ್ಲಿ ಅಂತಹವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಚುನಾವಣೆಯ ಪೂರ್ವ ತಯಾರಿ ಸಭೆ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವ ತಯಾರಿಯ ಬಗ್ಗೆ ಚರ್ಚಿಸಲು ಮಂಗಳವಾರದಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ‌ ಸಭೆ ನಡೆಯಿತು. ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಎಲ್ಲಾ ವಾರ್ಡ್‌ ಹಾಗೂ ಪಂಚಾಯತ್‌ ಗಳಿಗೆ ಉಸ್ತುವಾರಿಗಳ ನೇಮಕ ಮಾಡುವ ಬಗ್ಗೆ ಮತ್ತು ಪ್ರತಿ ವಾರ್ಡಿನಲ್ಲಿ ಸಭೆಯನ್ನು ನಡೆಸುವುದರ ಬಗ್ಗೆ ತೀರ್ಮಾನಿಸಲಾಯಿತು. ಸದಸ್ಯರು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಉಡುಪಿ ಜಿಲ್ಲಾ […]

ಪ್ರಸಕ್ತ ಸಾಲಿನಲ್ಲಿ 16 ಕೋಟಿ ಲಾಭಗಳಿಸಿದ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ: ಯಶ್‍ಪಾಲ್ ಸುವರ್ಣ 

ಉಡುಪಿ: ಕರಾವಳಿ ಭಾಗದ ಪ್ರತಿಷ್ಠಿತ ಪಟ್ಟಣ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ 2022-23ನೇ ಸಾಲಿನಲ್ಲಿ ರೂ. 812.19 ಕೋಟಿ ವ್ಯವಹಾರ ನಡೆಸಿ ರೂ. 16 ಕೋಟಿ ಲಾಭ ದಾಖಲಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷ ಯಶ್‍ಪಾಲ್ ಸುವರ್ಣ ತಿಳಿಸಿದ್ದಾರೆ. ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್, ಸಹಕಾರಿ ಇಲಾಖೆ ಹಾಗೂ ಭಾರತೀಯ ರಿಸರ್ವ್ ಬ್ಯಾಂಕಿನ ಪರಿವೀಕ್ಷಣೆಗೆ ಒಳಪಟ್ಟು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಶಾಖೆಗಳ 28,000 ಸದಸ್ಯರು ಹಾಗೂ 35,000 ಗ್ರಾಹಕರ ಮೂಲಕ ವ್ಯವಹಾರ ನಡೆಸುತ್ತಿದೆ. […]