ಎ.10 ರಂದು ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಶ್ರೀ ಮನ್ನಹಾರಥೋತ್ಸವ

ಬ್ರಹ್ಮಾವರ: ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಎ. 7 ರಂದು ಮಯೂರ ವಾಹನೋತ್ಸವ, 8 ರಂದು ಹಂಸ ವಾಹನೋತ್ಸವ, 9 ರಂದು ಗಜವಾಹನೋತ್ಸವ, ಎ. 10 ರಂದು ಬೆಳಿಗ್ಗೆ ರಥಾರೋಹಣ, ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ ಶ್ರೀ ಮನ್ನಹಾರಥೋತ್ಸವ ಜರಗಲಿದೆ ಎಂದು ದೇಗುಲದ ಪ್ರಕಟನೆ ತಿಳಿಸಿದೆ.

ಶ್ರೀಕೃಷ್ಣಮಠದಲ್ಲಿ ಸುಂದರಕಾಂಡ ಪ್ರವಚನ ಸಪ್ತಾಹ ಸಂಪನ್ನ

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಶ್ರೀ ಹನುಮ ಜಯಂತಿ ಪ್ರಯುಕ್ತ ಸುಂದರಕಾಂಡ ಪ್ರವಚನ 6 ದಿನಗಳ ಕಾಲ ನಡೆಯಿತು. ಪ್ರವಚನ ನಡೆಸಿಕೊಟ್ಟ ವಿದ್ವಾನ್ ಶ್ರೀ ಬ್ರಹ್ಮಣ್ಯಾಚಾರ್ಯ ಇವರನ್ನು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಗೌರವಿಸಿ ಅನುಗ್ರಹಸಿದರು. ಸಂಸ್ಥೆಯ ವತಿಯಿಂದ ಶ್ರೀಪಾದರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್,ಪ್ರಾಯೋಜಕರಾದ ಕಿದಿಯೂರು ಹೋಟೆಲ್ ಮಾಲೀಕ ಭುವನೇಂದ್ರ ಕಿದಿಯೂರು, ಜಿತೇಶ್ ಕಿದಿಯೂರು , ಯುವರಾಜ್ ಮಾಸ್ಖತ್ , ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.

ದೊಡ್ಡಣ್ಣಗುಡ್ಡೆ: ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಸತ್ಯನಾರಾಯಣ ಕಥೆ ಉದ್ಯಾಪನಾ ಮಹೋತ್ಸವ

ಉಡುಪಿ: ದೊಡ್ಡಣ್ಣಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ಶ್ರೀ ಲಕ್ಷ್ಮಿ ಸಹಿತ ಸತ್ಯನಾರಾಯಣ ವ್ರತಕಥ ಪೂಜೆಯ ಉದ್ಯಾಪನ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ಋತ್ವಿಜರ ಸಹಕಾರದೊಂದಿಗೆ ಭಕ್ತರ ಸಮಕ್ಷಮದಲ್ಲಿ ನಿರಂತರ ಅನ್ನ ಸಂತರ್ಪಣೆಯೊಂದಿಗೆ ಸಂಪನ್ನಗೊಂಡಿತು. ಏಪ್ರಿಲ್ 6 ರಂದು ಹುಣ್ಣಿಮೆಯ ಪರ್ವಕಾಲದಲ್ಲಿ ಕಪಿಲ ಮಹರ್ಷಿಗಳ ಸನ್ನಿಧಾನದಲ್ಲಿ ವಿಶೇಷ ಗುರುಪೂಜೆ ಸಲ್ಲಿಸಿ ಆದ್ಯ ಗಣಪತಿಯಾಗ, ಉದ್ಯಾಪನ ಮಹಾಯಾಗ ಹಾಗೂ ವಿವಿಧ ಧಾರ್ಮಿಕ ಪ್ರಕ್ರಿಯೆಗಳು ನೆರವೇರಿತು. […]

ಹಿರಿಯ ದೈವ ಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ ನಿಧನ…

ಮೂಡುಬಿದಿರೆ: ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ಜಿಲ್ಲೆಯ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಮಾರ್ನಾಡು ಹೊಯಿಪಾಲಬೆಟ್ಟುವಿನ ಅನುವಂಶಿಕ ಮೊಕ್ತೇಸರ ರಾಜೇಶ್ ಬಲ್ಲಾಳ್ ಬೆಳಿಯಾರು ಗುತ್ತು, ಲಾಡಿ ಗುತ್ತಿನ ಪಾರ್ಶ್ವನಾಥ  ಬಲ್ಲಾಳ್ ಸಂತಾಪ ಸೂಚಿಸಿದ್ದಾರೆ. […]

ಕಾಪು: ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಚುನಾವಣಾ ಉಸ್ತುವಾರಿಯಾಗಿ ನಿವೃತ್ತ ಪಿ.ಎಸ್.ಐ ಜಯ ಕೌಡೂರು ನೇಮಕ

ಕರ್ನಾಟಕ ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಶಿಫಾರಸ್ಸಿನ ಮೇರೆಗೆ ಉಡುಪಿ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯಕುಮಾರ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮುಂದಾಳುತ್ವದಲ್ಲಿ ಕಾಪು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪರಿಶಿಷ್ಟ ಜಾತಿ ಪಂಗಡ ವಿಭಾಗದ ಚುನಾವಣಾ ಉಸ್ತುವಾರಿಯಾಗಿ ನಿವೃತ್ತ ಪಿ.ಎಸ್.ಐ ಜಯ ಕೌಡೂರು ಇವರನ್ನು ನೇಮಕ ಮಾಡಲಾಗಿದೆ. ಇವರು ಕಾಪು, ಉಡುಪಿ, ಪಡುಬಿದ್ರಿ ಪೊಲೀಸ್ ಠಾಣೆಗಳಲ್ಲಿ ಪಿ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಸಂದರ್ಭದಲ್ಲಿ […]