ಕನ್ನಡ ಚಿತ್ರರಂಗದಲ್ಲಿ ಮತ್ತೊಂದು ಮರ್ಡರ್ ಮಿಸ್ಟ್ರಿ ಸಿನಿಮಾ ಅಜ್ಞಾತವಾಸಿ ಟೀಸರ್ ಬಿಡುಗಡೆ
ದಾಕ್ಷಾಯಣಿ ಟಾಕೀಸ್ ಪ್ರಸ್ತುತಪಡಿಸುತ್ತಿರುವ “ಅಜ್ಞಾತವಾಸಿ” ಚಿತ್ರದ ಅಧಿಕೃತ ಟೀಸರ್ ಬಿಡುಗಡೆಯಾಗಿದ್ದು, ಕುತೂಹಲಕಾರಿಯಾಗಿದೆ. ಗೋಧಿ ಬಣ್ಣ ಸಾಧಾರಣ ಮೈಕಟ್ಟು, ಕವಲುದಾರಿ ಮತ್ತು ಸಪ್ತಸಾಗರದಾಚೆ ಎಲ್ಲೋ ತಯಾರಕರಿಂದ ಮತ್ತೊಂದು ಸಸ್ಪೆನ್ಸ್ ಥ್ರಿಲ್ಲರ್ ಮಾದರಿಯ ಅಜ್ಞಾತವಾಸಿ ಚಿತ್ರದ ಟೀಸರ್ ಚಿತ್ರದ ಬಗ್ಗೆ ನಿರೀಕ್ಷೆಗಳನ್ನು ಹೆಚ್ಚಿಸುತ್ತಿದೆ. ರಂಗಾಯಣ ರಘು, ಪಾವನ, ರವಿಶಂಕರ್ ತಾರಾಗಣವಿದ್ದು, ಗುಲ್ಟೂ ಚಿತ್ರ ನಿರ್ದೇಶಿಸಿದ್ದ ಜನಾರ್ಧನ್ ಚಿಕ್ಕಣ್ಣ ಆಕ್ಷನ್ ಕಟ್ ಹೇಳಿದ್ದಾರೆ. ಚಿತ್ರವನ್ನು ಹೇಮಂತ್ ಎಂ ರಾವ್, ಪ್ರಚುರ ಪಿ ಪಿ, ಜಯಲಕ್ಷ್ಮಿ ನಿರ್ಮಿಸಿದ್ದಾರೆ. ಕೃಷ್ಣರಾಜ್ ಚಿತ್ರಕಥೆ ಇದೆ. ಚಿತ್ರದ […]
ಬೈಂದೂರು: ಏಪ್ರಿಲ್ 12 ರಂದು ಲೋಕಾಯುಕ್ತರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ
ಉಡುಪಿ: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಏಪ್ರಿಲ್ 12 ರಂದು ಬೈಂದೂರು ಪ್ರವಾಸಿ ಮಂದಿರದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರ ವರೆಗೆ ಜನಸಂಪರ್ಕ ಸಭೆ ಹಾಗೂ ಸಾರ್ವಜನಿಕ ಅಹವಾಲು ಕಾರ್ಯಕ್ರಮ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881 ಹಾಗೂ ದೂ.ಸಂಖ್ಯೆ: 0820-2536661 ಅಥವಾ ಅರ್ಜಿದಾರರು ನಮೂನೆ […]
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಳಿಕೆ ಆಯಾನೋತ್ಸವ ಸಿರಿ ಜಾತ್ರಾ ಮಹೋತ್ಸವ ಶ್ರೀ ರಾಶಿ ಪೂಜಾ ಮಹೋತ್ಸವ ಸಂಪನ್ನ…!!
ಕಾರ್ಕಳ : ತಾಲೂಕಿನ ನಾಲ್ಕು ಸ್ಥಾನ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಳಿಕೆ ಆಯಾನೋಸ್ಸವ ಸಿರಿ ಜಾತ್ರಾ ಮಹೋತ್ಸವ ಮತ್ತು ಶ್ರೀ ರಾಶಿ ಪೂಜಾ ಮಹೋತ್ಸವ ದಿನಾಂಕ ಏಪ್ರಿಲ್ 06/04/2023 ರಂದು ಗುರುವಾರ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಹಾಗೂ ಮಹಾ ಅನ್ನಸಂರ್ಪಣೆ ಯೊಂದಿಗೆ ವಿಜೃಂಭಣೆಯಿಂದ ನಡೆಯಿತು ರಾತ್ರಿ ಘ 9-00 ಕೆ ನಂದಳಿಕೆ ಚಾವಡಿ ಅರಮನೆ ಯಿಂದ ಶ್ರೀ ಹೆಗ್ಡೆಯವರ ಆಗಮನದ ಪರಂಪರಾಗತ ಅದ್ದೂರಿ ಮೆರವಣಿಗೆ ನಂತರ ಅಯಾನೋಸ್ಸವ ,ಬಲಿ,ವೈಭವೋಪೇತ ಕೆರೆ ದೀಪೋತ್ಸವ ನಂತರ ಸತ್ಯದ ಸಿರಿಗಳ […]
ಅಕ್ರಮ ಮದ್ಯ ಮಾರಾಟದ ವಿರುದ್ದ ಕಠಿಣ ಕ್ರಮ: ಜಿಲ್ಲಾಧಿಕಾರಿ
ಉಡುಪಿ: ಜಿಲ್ಲೆಯಲ್ಲಿ ಸುಗಮ ಮತ್ತು ಪಾರದರ್ಶಕ ಚುನಾವಣೆ ನಡೆಸಲು ಎಲ್ಲಾ ಸಿದ್ದತೆಗಳ್ನು ನಡೆಸಲಾಗುತ್ತಿದ್ದು, ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ನಿಯಮ ಉಲ್ಲಂಘಿಸಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಸನ್ನದುದಾರರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಎಚ್ಚರಿಕೆ ನೀಡಿದರು. ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ವೈನ್ ಮರ್ಚೆಂಟ್ ಅಸೋಸಿಯೇಷನ್ ನ ಅಧ್ಯಕ್ಷರು ಮತ್ತು ಪದಾಧಿಕಾರಿಗಳೊದಿಗೆ ಹಾಗೂ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯಲ್ […]
ಏಪ್ರಿಲ್ 8ರಂದು ಮಂಗಳೂರಿನಿಂದ ಮುಂಬೈಗೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ವಿಶೇಷ ರೈಲು…!!
ನವದೆಹಲಿ: ಮಂಗಳೂರು ಜಂಕ್ಷನ್‌ನಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್‌ಗೆ ಏಕಮುಖ ವಿಶೇಷ ರೈಲನ್ನು ಭಾರತೀಯ ರೈಲ್ವೆ ಇಲಾಖೆ ಘೋಷಿಸಿದೆ. ಈ ಮೂಲಕ ಮಂಗಳೂರಿನಿಂದ ಮುಂಬೈಗೆ ಪ್ರಯಾಣಿಸುವ ಜನರು ಈಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. 06007 ಸಂಖ್ಯೆಯ ರೈಲನ್ನು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡಲು ಆರಂಭಿಸಲಾಗುತ್ತಿದೆ. ಮೂಲಗಳ ಪ್ರಕಾರ, ಮಂಗಳೂರು ಜಂಕ್ಷನ್‌ನಿಂದ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್‌ಗೆ ಹೊರಡುವ ವಿಶೇಷ ರೈಲು ಮಂಗಳೂರಿನಿಂದ ಏಪ್ರಿಲ್ 8ರಂದು ಸಂಜೆ 6.10ಕ್ಕೆ ಹೊರಟು 9ರಂದು ಮಧ್ಯಾಹ್ನ 1.15ಕ್ಕೆ ಮುಂಬೈ ತಲುಪಲಿದೆ. […]