ಅರ್ಜಿದಾರರ ಮನೆ ಬಾಗಿಲಿಗೆ ಜನನ-ಮರಣ ಪ್ರಮಾಣ ಪತ್ರ

ಉಡುಪಿ: ಉಡುಪಿ ನಗರಸಭೆಯಲ್ಲಿ ಜನನ-ಮರಣ ಪ್ರಮಾಣ ಪತ್ರ ಪಡೆಯಲು ಸೂಕ್ತ ವಿಳಾಸ ನಮೂದಿಸಿ, ಸೇವಾ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಿದ್ದಲ್ಲಿ, ಸ್ಪೀಡ್ ಪೋಸ್ಟ್ ಮೂಲಕ ಅರ್ಜಿದಾರರ ಮನೆ ಬಾಗಿಲಿಗೆ ರವಾನಿಸುವ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರು ಈ ಸೇವೆಯ ಸದುಪಯೋಗ ಪಡೆದುಕೊಳ್ಳುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಏ. 11 ರಂದು ಜಿಲ್ಲಾಧಿಕಾರಿ ಸಂಕೀರ್ಣದಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಯುಕ್ತ ಕೌಶಲ್ಯ ತರಬೇತಿ ಕೇಂದ್ರ, ಪ್ರಕಾಶ್ ರಿಟೇಲ್, ಎಸ್.ಬಿ.ಐ ಲೈಫ್ ಇನ್ಶೂರೆನ್ಸ್, ಏಂಜೆಲ್ ಬ್ರೋಕಿಂಗ್ ಪ್ರೈಲಿ. ಮತ್ತು ಮೆಡ್ ಪ್ಲಸ್ ಕಂಪನಿಗಳ ವತಿಯಿಂದ ಏಪ್ರಿಲ್ 11 ರಂದು ಬೆಳಗ್ಗೆ 10.30 ಕ್ಕೆ ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್‌ಕಾರ್ಡ್ […]

ಉಡುಪಿ: ಮಹಿಳೆ ನಾಪತ್ತೆ

ಉಡುಪಿ: ಆರೋಗ್ಯ ತಪಾಸಣೆಗಾಗಿ 2022 ರ ಫೆಬ್ರವರಿ 7 ರಂದು ನಗರದ ಜಿಲ್ಲಾಸ್ಪತ್ರೆಗೆ ತೆರಳಿದ್ದ ಉಡುಪಿ ತಾಲೂಕು ಪುತ್ತೂರು ಗ್ರಾಮದ ನಿಟ್ಟೂರು ಸ್ತ್ರೀ ಸೇವಾ ನಿಕೇತನದಲ್ಲಿ ದಾಖಲಾಗಿದ್ದ ನಳಿನಿ ದೇವಾಡಿಗ (45) ಎಂಬ ಮಹಿಳೆಯು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 4 ಇಂಚು ಎತ್ತರ, ಕಪ್ಪು ಮೈಬಣ್ಣ, ಸಪೂರ ಉದ್ದನೆಯ ಶರೀರ ಹೊಂದಿದ್ದು, ಮಾತನಾಡಲು ಬರುವುದಿಲ್ಲ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2520444, ಪಿ.ಎಸ್.ಐ ಮೊ.ನಂ: 9480805465, ಪೊಲೀಸ್ […]

ಏ.11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಉಡುಪಿ : ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ಏಪ್ರಿಲ್ 11 ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 33/11 ಕೆ.ವಿ ಮಾರ್ಗದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ತಲ್ಲೂರು ಉಪಕೇಂದ್ರದಿಂದ ಹೊರಡುವ 11 ಕೆ.ವಿ ಹೆಮ್ಮಾಡಿ, ಗುಲ್ವಾಡಿ, ವಂಡ್ಸೆ, ನೇರಳಕಟ್ಟೆ, ಬಾಂಡ್ಯ, ಕೆಂಚನೂರು, ದೇವಲ್ಕುಂದ ಮತ್ತು ಸಬ್ಲಾಡಿ ಹಾಗೂ 33/11 ಕೆ.ವಿ ಗಂಗೊಳ್ಳಿ ಉಪಕೇಂದ್ರದಿಂದ ಹೊರಡುವ 11 ಕೆ.ವಿ ಮುಳ್ಳಿಕಟ್ಟೆ, ತ್ರಾಸಿ, ಗಂಗೊಳ್ಳಿ ಫೀಡರುಗಳ ವಂಡ್ಸೆ, ಚಿತ್ತೂರು, […]

ಉಡುಪಿ: ಯುವಕ ನಾಪತ್ತೆ

ಉಡುಪಿ: ತೆಲಂಗಾಣದ ಹೋಟೆಲೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ನಗರದ ನಿವಾಸಿ ವಿಜೇತ (26) ಎಂಬ ಯುವಕನು ಮಾರ್ಚ್ 13 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 183 ಸೆಂ.ಮೀ ಎತ್ತರ, ದಪ್ಪ ಶರೀರ, ಎಣ್ಣೆಗಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ತೆಲುಗು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.