ಕರ್ನಾಟಕ ಸಂಘ ಮಾಟುಂಗ ಮುಂಬೈ 90ರ ಸಂಭ್ರಮ: ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ಆಯೋಜನೆ

ಮುಲುಂಡ್: ಕರ್ನಾಟಕ ಸಂಘ ಮಾಟುಂಗ ಮುಂಬೈ ಹಾಗೂ ಕನ್ನಡ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಿಂದ ಏಪ್ರಿಲ್ 8 ರಂದು ಸಂಸ್ಕೃತಿ ಸಂಭ್ರಮ ಉತ್ಸವ ಮುಲುಂಡ್ (ಪ)ನ ಮಹಾಕವಿ ಕಾಳಿದಾಸ ಸಭಾಗೃಹದಲ್ಲಿ ವೈವಿಧ್ಯಪೂರ್ಣ ಸಾಂಸ್ಕೃತಿಕ ನೃತ್ಯ ವೈಭವ ಕಾರ್ಯಕ್ರಮದೊಂದಿಗೆ ಯಶಸ್ವಿಯಾಗಿ ಜರುಗಿತು. ಸಂಜೆ ಜರುಗಿದ ಸಮಾರೋಪ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಮನೋಹರ ಎಂ ಕೋರಿ ಮಾತನಾಡಿ, ಕರ್ನಾಟಕ ಸಂಘ ಕಳೆದ 9 ದಶಕಗಳಲ್ಲಿ ಮಹಾನಗರದಲ್ಲಿ ಕನ್ನಡ ಭಾಷೆ ಸಂಸ್ಕೃತಿಯನ್ನು ಸದಾ ಜೀವಂತವಾಗಿ ಉಳಿಸುವಲ್ಲಿ ಸಾಂಸ್ಕೃತಿಕ ವೇದಿಕೆಯಾಗಿ ಕರ್ನಾಟಕ […]

ಕುಡಿಯುವ ನೀರಿನ ಪೂರೈಕೆಗೆ ಪರ್ಯಾಯ ಮೂಲಗಳನ್ನು ಶೋಧಿಸಲು ಜಿಲ್ಲಾಧಿಕಾರಿ ಸೂಚನೆ

ಕುಂದಾಪುರ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸಮರ್ಪಕ ನೀರಿನ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಸೋಮವಾರ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕುಂದಾಪುರ ಮತ್ತು ಬೈಂದೂರು ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಲಭ್ಯವಿರುವ ನೀರಿನ ಲಭ್ಯತೆ, ಟ್ಯಾಂಕರ್ ಮೂಲಕ ನೀರು ನೀಡಲು ಅಗತ್ಯವಿರುವ ಕುಟುಂಬಗಳ ಸಂಖ್ಯೆಯನ್ನು ನಿಖರವಾಗಿ ತಿಳಿದುಕೊಂಡು, […]

ಏಪ್ರಿಲ್ 10 ರಿಂದ ಮೇ 31 ರವರೆಗೆ ಕರ್ನಾಟಕ ಗೋಲ್ಡ್ ಫೆಸ್ಟಿವಲ್: ಉಡುಪಿ ಜ್ಯುವೆಲ್ಲರ್ಸ್ ಅಸೋಸಿಯೇಷನ್ ನಿಂದ ಬೆಂಬಲ

ಉಡುಪಿ: ಏಪ್ರಿಲ್ 30 ರಂದು ಅಕ್ಷಯ ತೃತೀಯ ಮತ್ತು ಮದುವೆ ಸಮಾರಂಭಗಳನ್ನು ಗಮನದಲ್ಲಿಟ್ಟುಕೊಂಡು ಗ್ರಾಹಕರಿಗಾಗಿ “ಕರ್ನಾಟಕ ಗೋಲ್ಡ್ ಫೆಸ್ಟಿವಲ್” ಅನ್ನು ಏಪ್ರಿಲ್ 10 ರಿಂದ ಮೇ 31 ರವರೆಗೆ ಆಯೋಜಿಸಲಾಗಿದೆ.  ಕರ್ನಾಟಕ ರಾಜ್ಯದಾದ್ಯಂತ ಈ 50 ದಿನಗಳ ಉತ್ಸವದಲ್ಲಿ ಗ್ರಾಹಕರು ಚಿನ್ನ ಮತ್ತು ಬೆಳ್ಳಿಯನ್ನು ಖರೀದಿಸಬಹುದು ಮತ್ತು ಅದೃಷ್ಟ ಕೂಪನ್‌ಗಳನ್ನು ಪಡೆಯಬಹುದು. ಕರ್ನಾಟಕದಾದ್ಯಂತ ಸುಮಾರು 250 ಪ್ರಮುಖ ಆಭರಣ ವ್ಯಾಪಾರಿಗಳು ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಮೊದಲ ಬಾರಿಗೆ, ಜಾಗತಿಕ ಗಣಿಗಾರಿಕೆ ಮತ್ತು ಸಂಸ್ಕರಣಾ ದಿಗ್ಗಜರು ಸಹ ಉತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. […]

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ; ಗೆಲುವೇ ನನ್ನ ಗುರಿ: ಕೃಷ್ಣಮೂರ್ತಿ ಆಚಾರ್ಯ

ಉಡುಪಿ: ಶಾಸಕನಾಗಿ ನನ್ನ ಅಭಿಮಾನಿಗಳ ಸೇವೆ ಮಾಡಬೇಕೆಂಬುದು ನನ್ನ ಜೀವನದ ಬಹಳ ದೊಡ್ಡ ಆಸೆ. ಆದರೆ ಹಲವು ವರ್ಷಗಳ ಕಾಲ ಪಕ್ಷಕ್ಕೆ ದುಡಿದವರನ್ನು ಬಿಟ್ಟು ನಿನ್ನೆ ಮೊನ್ನೆ ಬಂದವರಿಗೆ ಟಿಕೆಟ್ ನೀಡಲಾಗಿದೆ. ಆದುದರಿಂದ ನಾನು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ನನಗೆ ಎಲ್ಲರ ಸಹಕಾರ ಬೇಕು. ನಾನು ಗೆಲುವು ಸಾಧಿಸಿಯೇ ಸಿದ್ಧ. ಅಭಿಮಾನಿಗಳ ಸಹಕಾರದಿಂದ ಈ ಬಾರಿ ಚುನಾವಣೆಗೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದೇನೆ. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮಗೆ ಪಕ್ಷವೇ ದೊಡ್ಡದು. […]

ಪಡುಬಿದ್ರೆ: ಏ. 13 ರಂದು ವಿದ್ಯುತ್ ವ್ಯತ್ಯಯ

ಪಡುಬಿದ್ರೆ: 110/11 ಕೆ.ವಿ ನಂದಿಕೂರು ಎಂ.ಯು.ಎಸ್.ಎಸ್ ನಿಂದ ಹೊರಡುವ 11 ಕೆ.ವಿ ಎರ್ಮಾಳು, ನಂದಿಕೂರು, ಸಾಂತೂರು ಫೀಡರ್ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎರ್ಮಾಳು, ಬಡಾ, ತೆಂಕ, ಪೂಂದಾಡು, ಅದಮಾರು, ನಂದಿಕೂರು, ನಡ್ಸಾಲು, ಎಸ್.ಎಸ್.ರೋಡ್, ಎನ್.ಎಸ್.ರೋಡ್, ಹೆಜಮಾಡಿ, ಪಡುಬಿದ್ರಿ ಡೌನ್ ಟೌನ್, ಅವರಾಲು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಏಪ್ರಿಲ್ 13 ರಂದು ಬೆಳಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.