ಕೊಡವೂರು ವಾರ್ಡ್ ರಸ್ತೆಗೆ ಡಾ. ಹೆಡ್ಗೆವಾರ್ ಹೆಸರು

ಉಡುಪಿ: ದೇಶ ಭಕ್ತ ಸಂಘಟನೆಯಾಗಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪಕರಾಗಿರುವ ಡಾ.ಕೇಶವ ಬಲಿರಾಮ ಡಾ. ಹೆಡ್ಗೆವಾರ್ ರವರು ದೇಶದ ಎಲ್ಲಾ ಪ್ರಜೆಗಳಿಗೂ ದೇಶ ಭಕ್ತಿಯನ್ನು ಮೂಡಿಸಬೇಕು ಎನ್ನುವ ದೃಷ್ಟಿಯಿಂದ ತನ್ನ ಜೀವನವನ್ನೇ ಈ ದೇಶಕ್ಕೋಸ್ಕರ ಸಮರ್ಪಣೆ ಮಾಡಿರುವ ಕಾರಣ ಇವರ ಹೆಸರನ್ನು ಕೊಡವೂರು ವಾರ್ಡಿನ ಹೊಸ ರಸ್ತೆಗೆ ನಾಮಕರಣ ಮಾಡಲಾಗಿದೆ ಎಂದು ನಗರಸಭೆ ಸದಸ್ಯ ವಿಜಯ್ ಕೊಡವೂರು ಹೇಳಿದರು. ಮಹಾನ್ ವ್ಯಕ್ತಿಯ ಹೆಸರನ್ನು ಕೊಡವೂರು ವಾರ್ಡಿನಲ್ಲಿ ಹೊಸ ರಸ್ತೆಗೆ ನಾಮಕರಣ ಮಾಡುವ ಮೂಲಕ ಅವರ ಜೀವನ […]

ರಾಹುಲ್ ಗಾಂಧಿ, ನಿತೀಶ್ ಕುಮಾರ್ ಭೇಟಿ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಐತಿಹಾಸಿಕ ಹೆಜ್ಜೆ: ಖರ್ಗೆ

ಹೊಸದಿಲ್ಲಿ: 2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಒಗ್ಗೂಡಿದ ಪ್ರತಿಪಕ್ಷವೊಂದನ್ನು ಒಟ್ಟುಗೂಡಿಸುವ ಮತ್ತೊಂದು ಪ್ರಯತ್ನದಲ್ಲಿ, ಕಾಂಗ್ರೆಸ್, ಜನತಾ ದಳ (ಯುನೈಟೆಡ್) (ಜೆಡಿಯು) ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ದ ಉನ್ನತ ನಾಯಕರು ಇಂದು ದೆಹಲಿಯಲ್ಲಿ ಭೇಟಿಯಾದರು. ಆಡಳಿತಾರೂಢ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು ಇದೊಂದು ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಮಾಧ್ಯಮಗಳಿಗೆ ತಿಳಿಸಿದರು. ಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು […]

ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಶ್ರೀ ಯಶ್ ಪಾಲ್ ಸುವರ್ಣ ಆಗಮನ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಶ್ರೀ ಯಶ್ ಪಾಲ್ ಸುವರ್ಣ ರವರು ಆಗಮಿಸಿದ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುರೇಶ್ ನಾಯಕ್ ಕುಯಿಲಾಡಿ ಹಾಗೂ ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಶ್ರೀ ಪ್ರಸಾದ್ ಕುಮಾರ್ ಸ್ವಾಗತಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪಕ್ಷದ ನಾಯಕರು, ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.  

ಇಂದು ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಮನ್ಮಹಾರಥೋತ್ಸವ

ಸಿದ್ದಾಪುರ: ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಎ. 9 ರಿಂದ ವರ್ಷಾವಧಿ ಉತ್ಸವ ಮೊದಲ್ಗೊಂಡು ಎ. 14ರ ತನಕ ವಿವಿಧ ವಿಧಿ ವಿಧಾನಗಳ ಮೂಲಕ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಎ.12ರಂದು ದೇಗುಲದಲ್ಲಿ ಶ್ರೀ ಮನ್ಮಹಾರಥೋತ್ಸವ ಜರಗಲಿದೆ. ಧಾರ್ಮಿಕ ಕಾರ್ಯಕ್ರಮಗಳು: ಎ. 12 ರಂದು ಶ್ರೀ ಮನ್ಮಹಾರಥೋತ್ಸವ. ಎ. 13 ರಂದು ಚೂರ್ಣೋತ್ಸವ ಹಾಗೂ ತುಲಾಭಾರ ಸೇವೆ, ಎ. 14 ರಂದು ಅವಭೃತ, ಮೃಗಯಾ ವಿಹಾರ, ಪೂರ್ಣಾಹುತಿ, ಧ್ವಜಾರೋಹಣ, ಕುಂಭಾಭಿಷೇಕ ಸಹಿತ […]

2022-23 ಸಾಲಿನಲ್ಲಿ 12.20 ಕೋಟಿ ದಾಖಲೆಯ ಲಾಭ ಗಳಿಸಿದ ಎಂ.ಸಿ.ಸಿ ಬ್ಯಾಂಕ್: ಪಂಚ ಜಿಲ್ಲೆಗಳಲ್ಲಿ ಕಾರ್ಯಕ್ಷೇತ್ರ ವಿಸ್ತರಣೆಯ ಸಾಧನೆ

ಮಂಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ111 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2023 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ 12.20 ಕೋಟಿ ರೂಪಾಯಿ ಲಾಭ ಗಳಿಕೆಯನ್ನು ದಾಖಲಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಮಾಡಲು ಬ್ಯಾಂಕ್ ಶ್ರಮಿಸುತ್ತಿದ್ದು, ಇತ್ತೀಚಿನ ವರ್ಷಗಳಲ್ಲಿ ಪ್ರಪ್ರಥಮ ಬಾರಿಗೆ 1.37% ಎನ್.ಪಿ.ಎ. ದಾಖಲಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಮಾಹಿತಿ ನೀಡಿದರು. ಅವರು ಬುಧವಾರದಂದು ಮಂಗಳೂರಿನಲ್ಲಿರುವ ಬ್ಯಾಂಕಿನ ಆಡಳಿತ ಕಚೇರಿಯಲ್ಲಿ […]