ಜುಗಾರಿ ಆಡುತ್ತಿದ್ದ ಮೂವರು ಪೊಲೀಸರ ವಶಕ್ಕೆ- ಶಿರ್ವ ಠಾಣೆಯಲ್ಲಿ ಪ್ರಕರಣ
ಶಿರ್ವ: ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ಕುರ್ಕಾಲು ಗ್ರಾಮದ ಪಾಜೈ ಬಳಿ ಜುಗಾರಿ ಆಟ ಆಡುತ್ತಿದ್ದ ಸ್ಥಳಕ್ಕೆ ಶಿರ್ವ ಪೊಲೀಸ್ ಠಾಣಾಧಿಕಾರಿ ರಾಘವೇಂದ್ರ ಸಿ. ರವಿವಾರ ದಾಳಿ ನಡೆಸಿ ಮಹಮ್ಮದ್ ಬ್ಯಾರಿ (61), ಚಂದ್ರಶೇಖರ ಪೂಜಾರಿ (51) ಮತ್ತು ಮಂಜುನಾಥ ಬೋವಿ (42) ಅವರನ್ನು ವಶಕ್ಕೆ ಪಡೆದಿದ್ದಾರೆ. ಸಮದ್, ಮಂಜುನಾಥ್, ಕೋನಿ, ಗಣೇಶ್ ಮತ್ತು ಸಂಜೀವ ಶೆಟ್ಟಿ ಪರಾರಿಯಾಗಿದ್ದಾರೆ. ಆರೋಪಿಗಳಿಂದ 5,300 ರೂ. ನಗದು ಮತ್ತು ಆಟಕ್ಕೆ ಉಪಯೋಗಿಸಿದ ಇಸ್ಪೀಟು ಎಲೆ ಮೊದಲಾದ ಪರಿಕರಗಳನ್ನು ಪೊಲೀಸರು ವಶಕ್ಕೆ […]
ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ: ಭದ್ರತೆ ಹೆಚ್ಚಳ
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಕರೆ ಮಾಡಿರುವುದು ಬೆಳಕಿಗೆ ಬಂದಿರುವ ಬೆನ್ನಲ್ಲೇ ಅವರಿಗೆ ನೀಡಿದ್ದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಬೆದರಿಕೆ ಕರೆ ಮಾಡಿದವನು ತನ್ನನ್ನು ರಾಜಸ್ಥಾನದ ಜೋಧಪುರದ ರೋಕಿ ಭಾಯ್ ಎಂದು ಪರಿಚಯಿಸಿಕೊಂಡಿದ್ದು, ಏಪ್ರಿಲ್ 30 ರಂದು ನಟನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಕಂಟ್ರೋಲ್ ರೂಂಗೆ ಬಂದ ಕರೆಯಲ್ಲಿ, ರಾಜಸ್ಥಾನದ ಜೋಧಪುರದ ರೋಕಿ ಭಾಯ್ ಎಂದು ಗುರುತಿಸಿಕೊಂಡ ವ್ಯಕ್ತಿ ಏಪ್ರಿಲ್ 30 ರಂದು ನಟ ಸಲ್ಮಾನ್ ಖಾನ್ […]
ಬ್ರಹ್ಮಾವರ: ಲಲಿತಕಲಾ ಸಂಘದ ವತಿಯಿಂದ ಪರಿಸರ ಸಂರಕ್ಷಣೆ ಪ್ರಾತ್ಯಕ್ಷಿತೆ
ಬ್ರಹ್ಮಾವರ: ಪರಿಸರ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿತೆ ಮತ್ತು ತರಬೇತಿ ಕಾರ್ಯಕ್ರಮವನ್ನು ಲಲಿತಕಲಾ ಸಂಘದ ವತಿಯಿಂದ ಏ. 3 ರಂದು ಸೈಂಟ್ ಮೇರಿಸ್ ಕಾಲೇಜಿನಲ್ಲಿ ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಜಯಪ್ರಕಾಶ್ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಮತ್ತು ಅದರ ಪ್ರಾಮುಖ್ಯತೆಯ ಕುರಿತು ವಿವರಿಸಿ ಪ್ಲಾಸ್ಟಿಕ್ ಬದಲಿಗೆ ಪರಿಸರ ಸ್ನೇಹಿ ವಸ್ತುಗಳನ್ನು ಬಳಸಿ ಪರಿಸರವನ್ನು ಸಂರಕ್ಷಣೆ ಮಾಡುವುದರ ಬಗ್ಗೆ ಅರಿವು ಮೂಡಿಸಿದರು ಮತ್ತು ಪೇಪರ್ ನಿಂದ ಪೆನ್ನನ್ನು ತಯಾರಿಸುವುದರ ಬಗ್ಗೆ ತರಬೇತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. […]
ಅಭಿಮಾನಿಗಳೊಂದಿಗೆ ಸಭೆ- ಸ್ವತಂತ್ರ ಅಭ್ಯರ್ಥಿಯಾಗಿ ರಘುಪತಿ ಭಟ್ ಸ್ಪರ್ಧೆ.?
ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ವೇಳೆ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆಗೊಳಿಸಿದ್ದು, ಈ ಪಟ್ಟಿಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ. ಬಿಜೆಪಿ ತನ್ನ ಮೊದಲ ಪಟ್ಟಿಯಲ್ಲಿ ಉಡುಪಿ ಮತ್ತು ಇತರ ಕ್ಷೇತ್ರಗಳ ಅಭ್ಯರ್ಥಿ ಘೋಷಣೆಯ ಬೆನ್ನಲ್ಲೇ ನಡೆದ ತ್ವರಿತ ಬೆಳವಣಿಗೆಯೊಂದಿಗೆ, ಉಡುಪಿ ಹಾಲಿ ಶಾಸಕ ರಘುಪತಿ ಭಟ್ ಅವರು ಇಂದು ತಮ್ಮ ನಿವಾಸದಲ್ಲಿ ಅಭಿಮಾನಿಗಳ ಸಭೆ ಕರೆದಿದ್ದು, ಮುಂದಿನ ರಾಜಕೀಯ ನಿಲುವಿನ ಬಗ್ಗೆ ಭಟ್ ನಿರ್ಧರಿಸಲಿದ್ದಾರೆ ಎಂದು […]
ಬಿಜೆಪಿಯ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: 52 ಹೊಸ ಮುಖಗಳು, 8 ಮಹಿಳೆಯರಿಗೆ ಮಣೆ
ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮಂಗಳವಾರ ತನ್ನ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಕರ್ನಾಟಕದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಪಟ್ಟಿಯನ್ನು ಘೋಷಿಸಿದರು. ಪಕ್ಷವು ತನ್ನ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳು ಮತ್ತು 8 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ತನ್ನ ಸಾಂಪ್ರದಾಯಿಕ ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿಸಿದ್ದರೆ, […]