ಪಕ್ಷದ ಕಾರ್ಯತಂತ್ರದಂತೆ ಚುನಾವಣೆ ಎದುರಿಸುತ್ತೇವೆ: ಪ್ರಸಾದ್ ರಾಜ್ ಕಾಂಚನ್
ಉಡುಪಿ: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಮತ್ತು ತಂತ್ರಗಾರಿಕೆ ಇಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಹೊರತು ಎದುರಾಳಿ ಅಭ್ಯರ್ಥಿಗಳ ಆಲೋಚನೆಯಿಂದಲ್ಲ. ಬಿಜೆಪಿಯ ಅಭ್ಯರ್ಥಿ ಒಂದೇ ಸಮುದಾಯಕ್ಕೆ ಸಂಬಂಧಪಟ್ಟಿದ್ದರೂ, ಇಲ್ಲಿನ ಮತದಾರರು ಬುದ್ದಿವಂತರು ಮತ್ತು ವಿದ್ಯಾವಂತರೂ ಆಗಿರುವ ಕಾರಣ ಸರಿಯಾದ ಶಾಸಕನನ್ನು ಆಯ್ಕೆ ಮಾಡಲಿದ್ದಾರೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಅವರು ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಕಳೆದ ಆರು ತಿಂಗಳಿನಿಂದ ಕ್ಷೇತ್ರದಲ್ಲಿ ಸಿದ್ದತೆ ನಡೆಸುತ್ತಿದ್ದು, 100 ಸದಸ್ಯರ ಕಮಿಟಿ […]
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ- ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಆಪ್ ಅಭ್ಯರ್ಥಿ ವಿರುದ್ದ ಪ್ರಕರಣ
ಉಡುಪಿ : ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ ಪೂರ್ವಾನುಮತಿ ಪಡೆಯದೇ ಫ್ಲೆಕ್ಸ್ ಬ್ಯಾನರ್ ಹಾಕಿದಕ್ಕೆ ಉಡುಪಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮೇಲೆ ಪ್ರಕರಣ ದಾಖಲಾಗಿದೆ ಉಡುಪಿ ನಗರ ಠಾಣೆಯಲ್ಲಿ ಫ್ಲೈಯಿಂದ್ ಸ್ಟ್ಯಾಡ್ ಅಧಿಕಾರಿ ರೋಶನ್ ಕುಮಾರ್ ಅವರು ದೂರು ದಾಖಲಿಸಿದ್ದಾರೆ., ಉಡುಪಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಸಂಭಾವ್ಯ ಅಭ್ಯರ್ಥಿ ಎಂದು ಬಿಂಬಿತ ಪ್ರಭಾಕರ ಪೂಜಾರಿ ತೊಟ್ಟಂ ಎಂಬುವವರು ಫ್ಲೆಕ್ಸ್ ಗಳನ್ನು ಅಳವಡಿಸಿರುವ ಬಗ್ಗೆ ಪ್ರಾಧಿಕಾರದಿಂದ ಯಾವುದೇ ಪೂರ್ವಾನುಮತಿ […]
ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ; ಗೆಲುವಿಗಾಗಿ ಶ್ರಮ: ಲಾಲಾಜಿ ಮೆಂಡನ್
ಉಡುಪಿ: ವಿಧಾನಸಭಾ ಚುನಾವಣೆಗೆ ಕಾಪು ಕ್ಷೇತ್ರದಿಂದ ಅಭ್ಯರ್ಥಿ ಎಂದು ಘೋಷಿಸಿದ ಬಳಿಕ ಗುರ್ಮೆ ಸುರೇಶ್ ಶೆಟ್ಟಿ ಅವರು ಬುಧವಾರ ಬೆಳಿಗ್ಗೆ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ಬಳಿಕ ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಮನೆಗೆ ತೆರಳಿ ಅವರೊಂದಿಗೆ ಚರ್ಚೆ ನಡೆಸಿದ್ದು ಅವರೊಂದಿಗಿನ ಮಾತುಕತೆ ಬಳಿಕ ಜಂಟಿ ಸುದ್ಧಿಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಲಾಲಾಜಿ ಮೆಂಡನ್, ಪಕ್ಷದಲ್ಲಿ ಯಾವುದೇ ಬಂಡಾಯವಿಲ್ಲ. ಪಕ್ಷವನ್ನು ಎರಡೂವರೆ ಸಾವಿರ ಮತಗಳಿಂದ 75 ಸಾವಿರ ಮತಗಳವರೆಗೆ ಬೆಳೆಸಿದ್ದೇವೆ. ಮುಂದೆಯೂ ಬಿಜೆಪಿ […]
ಉತ್ತರಪ್ರದೇಶದ ಮಾಫಿಯಾ ಡಾನ್ ಅತೀಕ್ ಅಹ್ಮದ್ ಪುತ್ರ ಎಸ್ಟಿಎಫ್ ಎನ್ಕೌಂಟರ್ ನಲ್ಲಿ ಬಲಿ
ಝಾನ್ಸಿ: ಉತ್ತರ ಪ್ರದೇಶದ ರಾಜಕಾರಣಿಯಾಗಿ ಪರಿವರ್ತಿತ ಮಾಫಿಯಾ ಡಾನ್ ಅತೀಕ್ ಅಹ್ಮದ್ ಪುತ್ರ ಅಸದ್ ಮತ್ತು ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ಗುಲಾಮ್ ಎಂಬಾತನು ಝಾನ್ಸಿಯಲ್ಲಿ ಉತ್ತರಪ್ರದೇಶ ಎಸ್ಟಿಎಫ್ ತಂಡದೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಬಲಿಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎ.ಎನ್.ಐ ವರದಿ ಮಾಡಿದೆ. ಪ್ರಯಾಗ್ ರಾಜ್ ನಲ್ಲಿ ನಡೆದ ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಗಳ ಮೇಲೆ ತಲಾ ಐದು ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಝಾನ್ಸಿಯಲ್ಲಿ ಡಿವೈಎಸ್ಪಿ ನಾವೇಂದು ಮತ್ತು ಡಿವೈಎಸ್ಪಿ ವಿಮಲ್ […]
ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ- ಅದೃಷ್ಟವಶಾತ್ ಸಿಎಂ ಬೊಮ್ಮಾಯಿ ಬಚಾವ್…!!
ಉಡುಪಿ: ವಿಧಾನಸಭಾ ಚುನಾವಣೆ ಹಿನ್ನೆಲೆ ಏಪ್ರಿಲ್ 12ರ ರಾತ್ರಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೆ ಸಿಎಂ ಬಸವರಾಜ ಬೊಮ್ಮಾಯಿ ಟೆಂಪಲ್ ರನ್ ಶುರು ಮಾಡಿದ್ದಾರೆ ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಸಿಎಂ ಆಗಮಿಸಿದ್ದಾರೆ ಹೀಗಾಗಿ ಉಡುಪಿಗೆ ಭೇಟಿ ನೀಡಿದ್ದು ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್ ಹೋದ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು ಕೆಲ ಕ್ಷಣ ಆತಂಕದ ವಾತಾವರಣ ಸೃಷ್ಟಿಯಾಗಿತ್ತು….ಬೈಂದೂರು ಅಗ್ನಿಶಾಮಕದಳ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದು. ಅದೃಷ್ಟವಶಾತ್ ಸಿಎಂ ಬೊಮ್ಮಾಯಿ ಸ್ವಲ್ಪದರಲ್ಲಿ ಬಚಾವ್ […]