ಬಂಟ್ವಾಳ: ಕಾಂಗ್ರೆಸ್ ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ

ಬಂಟ್ವಾಳ : ಸಾಮಾಜಿಕ ಬದ್ಧತೆಯ ಸೈದ್ಧಾಂತಿಕ ರಾಜಕಾರಣ ಮಾಡಿಕೊಂಡು ಬಂದವನು ನಾನು. ಯಾವುದೇ ಧರ್ಮ, ಜಾತಿ ತಾರತಮ್ಯ ಮಾಡದೆ ಎಲ್ಲಾ ವರ್ಗಗಳನ್ನು ಸಮಾನತೆಯಿಂದ ನೋಡಿದವನು. ಚುನಾವಣೆಯಲ್ಲಿ ಮತ್ತೊಮ್ಮೆ ಆಯ್ಕೆಯಾದಲ್ಲಿ ಹಿಂದೆಂದಿಗಿಂತಲೂ ಹೆಚ್ಚು ಜನಸೇವೆ ಮಾಡುತ್ತೇನೆ ಎಂದು ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಭರವಸೆ ನೀಡಿದರು. ಬಂಟ್ವಾಳ ವಿಧಾನಸಭಾ ಕ್ಷೇತ್ರದ ತಮ್ಮ ಚುನಾವಣಾ ಪ್ರಚಾರ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು. ಬಿ.ಸಿ. ರೋಡ್ ನ ಪದ್ಮ ಪೆಟ್ರೋಲ್ ಪಂಪ್ ಮುಂಭಾಗದಲ್ಲಿರುವ ಧನಲಕ್ಷ್ಮಿ ಕಾಂಪ್ಲೆಕ್ಸ್ ನಲ್ಲಿ ರಮಾನಾಥ […]

ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡದಕ್ಕೆ ಬೇಸರವಿಲ್ಲ- ಆದರೆ ಪಕ್ಷ ನಡೆಸಿಕೊಂಡ ರೀತಿಯ ಬಗ್ಗೆ ಬೇಸರವಿದೆ- ಬಿ.ಎಂ.ಸುಕುಮಾರ್ ಶೆಟ್ಟಿ

ಕುಂದಾಪುರ: ಈ ಬಾರಿ ಬೈಂದೂರು ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡದಕ್ಕೆ ಬೇಸರವಿಲ್ಲ. ಮಾಡಿದ ಕೆಲಸಕ್ಕೆ ತೃಪ್ತಿಯಿದೆ. ಆದರೆ,ಟಿಕೆಟ್ ವಿಚಾರದಲ್ಲಿ ನಡೆಸಿಕೊಂಡ ರೀತಿಯ ಬಗ್ಗೆ ಬೇಸರವಿದೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ಹೊರ ಹಾಕಿದರು. ಟಿಕೆಟ್ ನೀಡದ ಬಗ್ಗೆ ಮೊದಲೇ ತಿಳಿಸಬಹುದಿತ್ತು. ನಾನು ಬೆಂಬಲ ನೀಡುವ ಬಗ್ಗೆ ಕಾರ್ಯಕರ್ತರು, ಹಿತೈಷಿಗಳ ಜತೆಗೆ ಚರ್ಚಿಸಿ ಇನ್ನೆರಡು ದಿನದಲ್ಲಿ ನನ್ನ ನಿಲುವು ಏನು ಎಂಬುದನ್ನು ತಿಳಿಸುತ್ತೇನೆ. ಬಿಜೆಪಿಯಲ್ಲಿಯೇ ಇರುತ್ತೇನೆ ಇದರಲ್ಲಿ ಸಂಶಯವೇ ಬೇಡ ಎಂದು ತಿಳಿಸಿದರು. ಈಗಿನ […]

ನಿಷ್ಪಕ್ಷಪಾತ ಮತ್ತು ನ್ಯಾಯ ಸಮ್ಮತ ಚುನಾವಣೆಗೆ ಅಧಿಕಾರಿಗಳು ಚುನಾವಣಾ ಆಯೋಗ ಸೂಚಿಸುವ ನಿಯಮಗಳನ್ನು ತಪ್ಪದೇ ಪಾಲಿಸಬೇಕು– ಮುಖೇಶ್ ತಾರಾಚಂದ್ ಥಕ್ವಾನಿ

ಉಡುಪಿ: ವಿಧಾನಸಭಾ ಚುನಾವಣೆಯು ನಿಷ್ಪಕ್ಷಪಾತ ಮತ್ತು ನ್ಯಾಯ ಸಮ್ಮತವಾಗಿ ನಡೆಯುವಂತೆ ಅಧಿಕಾರಿಗಳು ಚುನಾವಣಾ ಆಯೋಗ ಸೂಚಿಸುವ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಭಾರತೀಯ ಕಂದಾಯ ಸೇವೆಯ ಅಧಿಕಾರಿ ಹಾಗೂ ವೆಚ್ಚ ವೀಕ್ಷಕರಾದ ಮುಖೇಶ್ ತಾರಾಚಂದ್ ಥಕ್ವಾನಿ ಅವರು ತಿಳಿಸಿದರು. ಅವರು ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವೆಚ್ಚ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಚುನಾವಣೆಗೆ ಸ್ಪರ್ಧಿಸುವ ಪ್ರತಿಯೊಬ್ಬ ಅಭ್ಯರ್ಥಿಗಳ ಚುನಾವಣಾ ವೆಚ್ಚದ ಬಗ್ಗೆ ನಿಗಾ ವಹಿಸಬೇಕು, ರಜ್ಯ ಚುನಾವಣಾ ಆಯೋಗ ಈ ಸಂಬAದ […]

ಇಂದು ಕಾಂಗ್ರೆಸ್‌ ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ ಸಾಧ್ಯತೆ ???

ಬೆಂಗಳೂರು:  ಕಾಂಗ್ರೆಸ್‌ನಲ್ಲಿ ಬಾಕಿ ಉಳಿದಿರುವ 58 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಗುರುವಾರ ತಡರಾತ್ರಿವರೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಚುನಾವಣಾ ಸಮಿತಿಯಿಂದ ಮಹತ್ವದ ಚರ್ಚೆ ನಡೆದಿದ್ದು, ಇಂದು(ಶುಕ್ರವಾರ) ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಗುರುವಾರ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ವರಿಷ್ಠ ರಾಹುಲ್‌ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ, ಸ್ಕ್ರೀನಿಂಗ್‌ ಸಮಿತಿಯ ಮೋಹನ್‌ ಪ್ರಕಾಶ್‌ ಭಾಗವಹಿಸಿದ್ದರು. ಸೋಮವಾರವಷ್ಟೇ ಎಐಸಿಸಿ ಸ್ಕ್ರೀನಿಂಗ್‌ ಸಮಿತಿಯು ಸಿದ್ದರಾಮಯ್ಯ, ಶಿವಕುಮಾರ್‌ […]

ಏ.15ರಂದು ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗೆ 60ರ ಅಭಿನಂದನಾ ಸಮಾರಂಭ

ಉಡುಪಿ : ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ದ ರಜತ ಮಹೋತ್ಸವದ ಉದ್ಘಾಟನೆ ಹಾಗೂ ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ 60ರ ಅಭಿನಂದನಾ ಸಮಾರಂಭ ಏಪ್ರಿಲ್ 15ರಂದು ಸಂಜೆ 4:00 ಉಡುಪಿ ಗೋವಿಂದ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಉಡುಪಿ ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಮಂಜುನಾಥ್ ಉಪಾಧ್ಯ ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ 60ರ ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ಏಪ್ರಿಲ್ ಒಂದರಿಂದ 2024ರ ಮಾರ್ಚ್ 31ರವರೆಗೆ ಒಂದು ವರ್ಷಗಳ ಕಾಲ ತಾಲೂಕು ಮಟ್ಟದಲ್ಲಿ […]