ಏ. 15 ರಂದು ರಾಜಕೀಯ ಪಕ್ಷ ಪ್ರತಿನಿಧಿಗಳಿಗಾಗಿ ಸಾಮಾಜಿಕ ಮಾಧ್ಯಮ ಜಾಹೀರಾತು ಕಾರ್ಯಾಗಾರ

ಉಡುಪಿ: ಕರ್ನಾಟಕ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ, ಮಾದರಿ ನೀತಿ ಸಂಹಿತೆಯಡಿ, ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತನ್ನು ನೀಡುವ ಕುರಿತು, ಜಿಲ್ಲಾ ಎಂಸಿಎಂಸಿ ಸಮಿತಿ ವತಿಯಿಂದ ಪೂರ್ವಾನುಮತಿ ಪಡೆಯುವ ಪ್ರಕ್ರಿಯೆ ಹಾಗೂ ಜಾಹೀರಾತುಗಳಲ್ಲಿ ಇರಬೇಕಾದ ಅಥವಾ ಇರಬಾರದ ವಿಷಯಗಳು ಸೇರಿದಂತೆ ಇತರ ವಿಷಯಗಳನ್ನು ವಿವರವಾಗಿ ತಿಳಿಸಲು ಎಲ್ಲಾ ರಾಜಕೀಯ ಪಕ್ಷಗಳಿಗೆ ಎಲ್ಲಾ ಅಭ್ಯರ್ಥಿಗಳಿಗೆ ಹಾಗೂ ಅವರ ಏಜೆಂಟರುಗಳಿಗೆ ಏಪ್ರಿಲ್ 15 ರಂದು ಬೆಳಗ್ಗೆ 11.30 ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ಎಲ್ಲಾ […]

ನವೀಕೃತ ಕಾಂಕ್ರೀಟ್ ರಸ್ತೆ ಡಮಾರ್..!! ಅಲ್ಲಲ್ಲಿ.. ಬಿರುಕು..!! ಸಾರ್ವಜನಿಕರ ಹಣ ವ್ಯರ್ಥ..!!

ಉಡುಪಿ: ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯಿಂದ ರೈಲು ನಿಲ್ದಾಣ ಸಂಪರ್ಕಿಸುವ ಜಾರ್ಜ್ ಫೆರ್ನಾಂಡಿಸ್ ರಸ್ತೆಯನ್ನು ಕೆಲವು ಸಮಯಗಳ ಹಿಂದೆ ದುರಸ್ಥಿ ಪಡಿಸಲಾಗಿತ್ತು. ಇದೀಗ ಕಳಪೆ ಮಟ್ಟದ ಕಾಮಗಾರಿಯಿಂದ ಕಾಂಕ್ರೀಟ್ ರಸ್ತೆ ಬಿರುಕು ಬಿಟ್ಟಿದ್ದು. ಸಾರ್ವಜನಿಕರ ಹಣ ಪೋಲಾಗಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಂಡ ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಅಯೋಗ್ಯವಾಗಿದ್ದ ಜಾರ್ಜ್ ಫೆರ್ನಾಂಡಿಸ್ ರಸ್ತೆಯನ್ನು ದುರಸ್ತಿ ಪಡಿಸುವಂತೆ ವಿನೂತನ ಪ್ರತಿಭಟನೆಯ ಮೂಲಕ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಅಧಿಕಾರಿಗಳ ಗಮನ ಸೆಳೆದಿದ್ದರು. ಆ ಬಳಿಕ ರೈಲ್ವೆ […]

ಪೋಕ್ಸೋ ಪ್ರಕರಣ: ಆರೋಪಿಗೆ ಜೈಲು ಶಿಕ್ಷೆ

ಉಡುಪಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯವು 3 ವರ್ಷ ಜೈಲುಶಿಕ್ಷೆ ವಿಧಿಸಿ ಮಂಗಳವಾರ ಆದೇಶಿಸಿದೆ. ಗೋವಿಂದ ನಾಯ್ಕ ಶಿಕ್ಷೆಗೆ ಗುರಿಯಾಗಿರುವ ಆರೋಪಿ. 2021ರ ಮಾ. 2ರಂದು ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ 13ವರ್ಷ ವಯಸ್ಸಿನ ಬಾಲಕಿಯು ಆರೋಪಿ ಗೋವಿಂದ ನಾಯ್ಕನ ಅಂಗಡಿಗೆ ಬಿಸ್ಕೆಟ್‌ ಖರೀದಿಸಲು ಹೋಗಿದ್ದಳು. ಈ ವೇಳೆ ಆರೋಪಿ ಬಾಲಕಿಗೆ ಬಿಸ್ಕೆಟ್‌ ನೀಡಿ, ಜ್ಯೂಸ್‌ ಕೊಡುವುದಾಗಿ ಹೇಳಿ ಅಂಗಡಿ ಒಳಗೆ […]

ಶ್ರೀಕೃಷ್ಣ ಮಠದಲ್ಲಿ ಸೌರಯುಗಾದಿ ಉತ್ಸವ ಆಚರಣೆ

ಉಡುಪಿ: ಸೌರಯುಗಾದಿಯ ಪ್ರಯುಕ್ತ ಶುಕ್ರವಾರ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಮುಖ್ಯಪ್ರಾಣದೇವರ ಉತ್ಸವ ನಡೆಯಿತು. ಪರ್ಯಾಯ ಶ್ರೀಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು, ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಮಠಾಧೀಶರಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ನಂತರ ಚಂದ್ರಶಾಲೆಯಲ್ಲಿ ಪರ್ಯಾಯ ಮಠದ ವತಿಯಿಂದ ಶ್ರೀಪಾದರಿಗೆ ಗಂಧಾದಿ ಉಪಚಾರಗಳೊಂದಿಗೆ ಗೌರವ ಕಾಣಿಕೆ ಸಲ್ಲಿಸಲಾಯಿತು. ಪರ್ಯಾಯ ಮಠದ […]

ಉಡುಪಿ: ಕ್ರಿಯೇಟಿವ್ ಕಾಲೇಜ್ ನಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜನ್ಮದಿನಾಚರಣೆ

ಉಡುಪಿ: ಮಹಾ ಮಾನವತಾವಾದಿ, ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 132ನೇ ಜನ್ಮದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಸ್ಟ್ಯಾನಿ ಲೋಬೋ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಜಗತ್ತಿನಾದ್ಯಂತ ಅನೇಕ ವಿಶ್ವವಿದ್ಯಾನಿಲಯಗಳಲ್ಲಿ ಅತ್ಯುನ್ನತ ವಿದ್ಯಾಭ್ಯಾಸವನ್ನು ಮಾಡಿ, ಶೋಷಿತ ಸಮುದಾಯದ ಬಾಳಿನ ಬೆಳಕಾಗಿ, ಇಡೀ ವಿಶ್ವವೇ ಮೆಚ್ಚುವಂತಹ ಜಗತ್ತಿನ ಅತಿ ದೊಡ್ಡ ಶ್ರೇಷ್ಠ ಸಂವಿಧಾನವನ್ನು ರಚಿಸಿದ ಕೀರ್ತಿ ಅಂಬೇಡ್ಕರ್ ರವರದ್ದು. ಅವರ ಕಠಿಣ ಪರಿಶ್ರಮ, ನಡೆದು ಬಂದ ದಾರಿ, ಅವರ ಜ್ಞಾನ, […]