ಎಪ್ರಿಲ್ 18ರ ಮಧ್ಯಾಹ್ನ ನಾಮಪತ್ರ ಸಲ್ಲಿಕೆ: ಕೆ. ಗೋಪಾಲ ಪೂಜಾರಿ

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಕಾರ್ಯಕರ್ತರ ಪಡೆದ ಸಿದ್ಧವಾಗಿದ್ದು, ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿಯಾಗಿದೆ ಎಂದು ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಹೇಳಿದರು. ಕಳೆದ ಮೂರು ತಿಂಗಳುಗಳಿಂದ ಕಾಂಗ್ರೆಸ್ ಬಿರುಸಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದೆ. ಬೂತ್ ಮಟ್ಟದಲ್ಲಿ ಮತದಾರರನ್ನು ತಲುಪಿದ್ದು, ನಾಮಪತ್ರ ಸಲ್ಲಿಸಿದ ಬಳಿಕ ಮತ್ತೆ ಪ್ರಚಾರ ನಡೆಸಲಿದ್ದೇವೆ ಎಂದರು. ಎಪ್ರಿಲ್ 18ರ ಮಧ್ಯಾಹ್ನ ನಾಮಪತ್ರ ಸಲ್ಲಿಸಲಾಗುತ್ತಿದ್ದು, ಇದಕ್ಕೂ ಪೂರ್ವಭಾವಿಯಾಗಿ ಬೆಳಿಗ್ಗೆ ತ್ರಾಸಿಯಲ್ಲಿ ಸಭೆ ಮೆರವಣಿಗೆ ನಡೆಯಲಿದೆ ಎಂದರು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ ಶೆಟ್ಟಿ ನೇಮಕ

ಕಾರ್ಕಳ: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿಯವರ ಮಾರ್ಗದರ್ಶನದಂತೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕೃಷ್ಣ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸದಾಶಿವ ದೇವಾಡಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ನಾಮಪತ್ರ ಸಲ್ಲಿಕೆ: ಸಾವಿರಾರು ಅಭಿಮಾನಿಗಳು ಭಾಗಿ

ಕಾಪು: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಸಾವಿರಾರು ಮಂದಿ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜೊತೆ ಮೆರವಣಿಗೆ ನಡೆಸಿ, ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ತಾಲೂಕು ಕಛೇರಿಯಲ್ಲಿ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ, ಲಾಲಾಜಿ‌ ಆರ್. ಮೆಂಡನ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ರಘುಪತಿ ಭಟ್, ಉಡುಪಿ ಬಿಜೆಪಿ ಅಭ್ಯರ್ಥಿ ಯಶಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, […]

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಬಾಯಿಯ ಆರೋಗ್ಯ ಜಾಗೃತಿ, ಶಿಕ್ಷಣ ಮತ್ತು ತಪಾಸಣಾ ಕಾರ್ಯಕ್ರಮ-17 ಏಪ್ರಿಲ್ 2023 ರಿಂದ 21 ಏಪ್ರಿಲ್ 2023 ರವರೆಗೆ ಉಚಿತ ತಪಾಸಣೆ

ಮಣಿಪಾಲ, 17ನೇ ಏಪ್ರಿಲ್ 2023:ಏಪ್ರಿಲ್ ತಿಂಗಳನ್ನು ವಿಶ್ವಾದ್ಯಂತ ಬಾಯಿಯ ಕ್ಯಾನ್ಸರ್ ಜಾಗ್ರತಿ ಕ್ಯಾನ್ಸರ್ ಮಾಸವನ್ನಾಗಿ ಆಚರಿಸಲಾಗುತ್ತದೆ. ಬಾಯಿಯ ಕ್ಯಾನ್ಸರ್ ನಿಮ್ಮ ಬಾಯಿಯ ಮೇಲೆ ಪರಿಣಾಮ ಬೀರುವ ಕ್ಯಾನ್ಸರ್ ಆಗಿದೆ. ಇದು ನಿಮ್ಮ ಒಸಡುಗಳು, ನಾಲಿಗೆ ಅಥವಾ ತುಟಿಗಳು ಸೇರಿದಂತೆ ಯಾವುದೇ ಅಂಗಾಂಶದ ಮೇಲೆ ಬೆಳೆಯಬಹುದು. ಆರಂಭಿಕ ಪತ್ತೆ ಮತ್ತು ಚಿಕಿತ್ಸೆಯು ಗಮನಾರ್ಹವಾಗಿ ಫಲಿತಾಂಶಗಳನ್ನು ಸುಧಾರಿಸುತ್ತದೆ. ಇದರ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಏಪ್ರಿಲ್ 17ರಿಂದ 21ರವರೆಗೆ ಜಾಗೃತಿ, ಶಿಕ್ಷಣ ಮತ್ತು ಉಚಿತ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಇದರ […]

ಮೇ.4ರಂದು ಉಡುಪಿಗೆ- ಯೋಗಿ ಆದಿತ್ಯನಾಥ್ !!

ನವದೆಹಲಿ:  ಉಡುಪಿಯಲ್ಲಿ ಮೇ.4 ರಂದು ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಮೋದಿ ಜೊತೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಯೋಗಿ ಆದಿತ್ಯನಾಥ್ ಆಗಮನದಿಂದ ಭಾರಿ ಭಿಗಿ ಭದ್ರತೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಕರ್ನಾಟಕದ ಚುನಾವಣಾ ಪ್ರಚಾರದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 15 ರಿಂದ 20 ರ್ಯಾಲಿ ನಡೆಸಲಿದ್ದಾರೆ. ಇದೀಗ ಮೇ. 4 ರಂದು ಉಡುಪಿ ನಗರದ […]