ಪಕ್ಷೇತರ ಅಭ್ಯರ್ಥಿಯಾಗಿ ಪ್ರಮೋದ್ ಮುತಾಲಿಕ್ ನಾಮಪತ್ರ ಸಲ್ಲಿಕೆ.

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಾಲೂಕು ಕಚೇರಿಯಲ್ಲಿ ಚುನಾವಣೆ ಅಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಶ್ರೀರಾಮ ಸೇನೆಯ ಮುಖಂಡ ಗಂಗಾಧರ್ ಕುಲಕರ್ಣಿ, ನಿಟ್ಟೆ ಗ್ರಾಮ ಪಂಚಾಯತ್ ಸದಸ್ಯ ಸುಭಾಸ್ ಹೆಗ್ಡೆ, ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ ಶೆಟ್ಟಿ, ಪ್ರಮೋದ್ ಮುತಾಲಿಕ್ ಅಭಿಮಾನಿ ಸಂಘದ ಅಧ್ಯಕ್ಷ ಹರೀಶ ಅಧಿಕಾರಿ, ಚಿತ್ತರಂಜನ್ ಶೆಟ್ಟಿ ದುರ್ಗಾ ಸೇನೆ ಅಧ್ಯಕ್ಷ ವಿನಯ, ರಾನಡೆ ಕಾರ್ಯದರ್ಶಿ ರೂಪ […]

ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ಮಂಗಳವಾರ ತಮ್ಮ ಸಾವಿರಾರು ಕಾರ್ಯಕರ್ತರು, ಬೆಂಬಲಿಗರು ಮತ್ತು ಅಭಿ‌ಮಾನಿಗಳೊಂದಿಗೆ  ಮೆರವಣಿಗೆಯ ಮೂಲಕ ಬಂದು ನಾಮಪತ್ರ ಸಲ್ಲಿಸಿದರು. ಕಾಪು ಶ್ರೀ ಲಕ್ಷ್ಮೀ ಜನಾರ್ದ‌ನ ದೇವಸ್ಥಾನದಲ್ಲಿ ಪ್ರಾರ್ಥನೆಗೈದು ಪಾದಯಾತ್ರೆಯ ಮೂಲಕವಾಗಿ ತಾಲೂಕು ಮಿನಿವಿಧಾನ ಸೌಧಕ್ಕೆ ಬಂದು ಚುನಾವಣಾಧಿಕಾರಿ ಪಿ.ಕೆ. ಬಿನೋಯ್ ನಂಬಿಯಾರ್ ಮತ್ತು ಕಾಪು ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರ ಮೂಲಕವಾಗಿ ನಾಮಪತ್ರ ಸಲ್ಲಿಸಿದರು. ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್, ಕಾಪು ದಿವಾಕರ […]

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ

ಬೆಳ್ತಂಗಡಿ: ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಇವರು ಇಂದು ಧರ್ಮಸ್ಥಳ ಶ್ರೀ ಮಂಜುನಾಥೇಶ್ವರನ ಸನ್ನಿಧಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಜೊತೆಗಿದ್ದರು.  

ಅಜೆಕಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ ಸಂಪನ್ನ

ಅಜೆಕಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವವು ಮಂಗಳವಾರದಂದು ನಡೆಯಿತು. ನೂತನ ರಥ ಸಮರ್ಪಣೆ ಬಳಿಕ ದೇವಸ್ಥಾನದಲ್ಲಿ ಆಶ್ಲೇಷಾ ಬಲಿ, ಚಂಡಿಕಾಯಾಗ, ರಂಗಪೂಜೆ, ಗಣಹೋಮ ಸಹಿತ ಧಾರ್ಮಿಕ ವಿಧಿವಿಧಾನಗಳು ವೇ.ಮೂ ಕೊರಂಗ್ರಪಾಡಿ ವಾದಿರಾಜ ತಂತ್ರಿ ನೇತೃತ್ವದಲ್ಲಿ ಪ್ರಧಾನ ಅರ್ಚಕರಾದ ವೆಂಕಟರಮಣ ಭಟ್ ಪೌರೋಹಿತ್ಯದಲ್ಲಿ ನೆರವೇರಿತು. ಸೋಮವಾರ ರಾತ್ರಿ ರಥೋತ್ಸವ, ಕೆರೆದೀಪ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶಿವರಾಮ ಜಿ.ಶೆಟ್ಟಿ, ಕಾರ್ಯದರ್ಶಿ ಭಾಸ್ಕರ ಶೆಟ್ಟಿ ಕುಂಟಿನಿ, ಕೋಶಾಧಿಕಾರಿ ಜಯಕರ ಶೆಟ್ಟಿ, ವಿಜಯ ಶೆಟ್ಟಿ, ಹರೀಶ್ […]

ಮತದಾನ ನಮ್ಮ ಹಕ್ಕು; ಪ್ರತಿಯೊಬ್ಬರೂ ಮತ ಚಲಾಯಿಸಿ: ಅನಿತಾ ಎಂ.‌ಮಡ್ಲೂರ್

ಮಣಿಪಾಲ: ಪಾತ್ರೆ ಅಥವಾ ಮಾಪಕ ತುಂಬಲು ಹೇಗೆ ಒಂದೊಂದು ಹನಿ ನೀರೂ ಮುಖ್ಯವೋ ಹಾಗೆಯೆ ಮತದಾನದಲ್ಲಿ ಒಂದೊಂದು ಮತವೂ ಮುಖ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಮತ ಚಲಾಯಿಸಬೇಕು. ಅದು ನಮ್ಮ ಹಕ್ಕು. ನಮ್ಮ ಮತ ನಮ್ಮ ಅಧಿಕಾರ ಎಂದು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕಿ ಅನಿತಾ ಎಂ.‌ಮಡ್ಲೂರ್ ಹೇಳಿದರು. ಅವರು ಮಣಿಪಾಲದ ಮಣ್ಣಪಳ್ಳ ಕೆರೆಯ ಬಳಿ ವಿಶ್ವ ಭೂ ದಿನ ಪ್ರಯುಕ್ತ ಪ್ರಕೃತಿ ಸೌಂದರ್ಯದ ವಾತಾವರಣದಲ್ಲಿ ರವಿವಾರ ಎಂಐಟಿ ಮಣಿಪಾಲದ ರಾಷ್ಟ್ರೀಯ ಸೇವಾ ಯೋಜನೆಯ ಎರಡು ಘಟಕಗಳು, […]