ಎ.27ರಂದು ಕಾಂಗ್ರೆಸ್ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಉಡುಪಿ ಜಿಲ್ಲೆಗೆ ಆಗಮನ: ನಗರದಲ್ಲಿ ಅಶೋಕ್ ಕೊಡವೂರು
ಉಡುಪಿ: ಕಾಂಗ್ರೆಸ್ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಎ.27ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದ್ದು, ಅಂದು ಅವರು ಉಚ್ಚಿಲದಲ್ಲಿ ಮೀನುಗಾರರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ 40 ಮಂದಿ ಸ್ಟಾರ್ ಕ್ಯಾಂಪೆನ್ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಹಲವು ಮಂದಿ ನಾಯಕರು ಜಿಲ್ಲೆಗೆ ಆಗಮಿಸಿ ಪ್ರಚಾರ ಕಾರ್ಯ ನಡೆಸಲಿದ್ದಾರೆ ಎಂದರು. ಎ.23ರಂದು […]
ಶ್ರೀ ವೆಂಕಟರಮಣ ಪ.ಪೂ ಕಾಲೇಜು ವಿದ್ಯಾರ್ಥಿನಿ ನೇಹಾ ಜೆ. ರಾವ್ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ
ಕುಂದಾಪುರ: 2022-2023 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನೇಹಾ ಜೆ. ರಾವ್ ವಿಜ್ಞಾನ ವಿಭಾಗದಲ್ಲಿ 594 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ, ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾಳೆ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು , ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಕಾಪು: ಪಂಚಾಯತ್ ಸದಸ್ಯ ಮಿತೇಶ್ ಸುವರ್ಣ ಬಿಜೆಪಿ ಸೇರ್ಪಡೆ
ಕಾಪು: ಉದ್ಯಾವರ ಗ್ರಾಮ ಪಂಚಾಯತ್ ನ ಸದಸ್ಯ ಯುವ ನಾಯಕ ಮಿತೇಶ್ ಸುವರ್ಣ ಅವರು ಇಂದು ಕಾಪು ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಕಾಪು ಮಂಡಲ ಅಧ್ಯಕ್ಷ ಶ್ರೀಕಾಂತ ನಾಯಕ್ ಇವರ ನೇತೃತ್ವದಲ್ಲಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಲಾಲಾಜಿ ಆರ್ ಮೆಂಡನ್, ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಇವರು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಬಳಿಕ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ಮಿತೇಶ್ ಸುವರ್ಣ ಸೇರ್ಪಡೆಯಿಂದ ಉದ್ಯಾವರದಲ್ಲಿ ನಮ್ಮ ಪಕ್ಷಕ್ಕೆ […]
ಕಾರ್ಕಳ: ಬಿಜೆಪಿ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
ಕಾರ್ಕಳ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಬಿಜೆಪಿಯ ಅನೇಕ ಹಿರಿಯ ಮುಖಂಡರು ಹಾಗೂ ಬಿಜೆಪಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಸಾಣೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರಾಜೇಶ್ವರಿ ರವಿ ಪೂಜಾರಿ, ಪುರಸಭೆಯ ಮಾಜಿ ಅಧ್ಯಕ್ಷ ಚಂದ್ರಹಾಸ್ ಸುವರ್ಣ, ಮುನಿಯಾಲ್ ಬಿಲ್ಲವ ಸಂಘದ ಸ್ಥಾಪಾಕಾಧ್ಯಕ್ಷ, ಬಿಜೆಪಿ ಹಿರಿಯ ಮುಖಂಡ ಆನಂದ ಪೂಜಾರಿ, ಉದ್ಯಮಿ ಕಾಂತಾವರ ಉದಯ್ ಶೆಟ್ಟಿ. ಕುಕ್ಕುಂದೂರು ಪಂಚಾಯತ್ ಸದಸ್ಯ ಹಾಗೂ ನ್ಯಾಯ ಸಮಿತಿ ಅಧ್ಯಕ್ಷ ರಮೇಶ್ ಮತ್ತು ಅನೇಕ ಗ್ರಾಮಗಳ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು […]
ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ: ಐಶ್ವರ್ಯ ಖಾರ್ವಿ 591 ಅಂಕಗಳೊಂದಿಗೆ ರಾಜ್ಯ ಮಟ್ಟದಲ್ಲಿ 6ನೇ ರ್‍ಯಾಂಕ್
ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ 116 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 56 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದ 15 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗದ ಐಶ್ವರ್ಯ ಖಾರ್ವಿ 591 ಅಂಕಗಳನ್ನು […]