ಸಚಿವ ವಿ. ಸುನಿಲ್ ಕುಮಾರ್ ಅವರು ಬೆಳ್ತಂಗಡಿಯ ಶ್ರೀ ಕಾಶೀಮಠ ಸಂಸ್ಥಾನಕ್ಕೆ ಭೇಟಿ
ಕಾರ್ಕಳ: ಕನ್ನಡ, ಇಂಧನ ಹಾಗೂ ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಬೆಳ್ತಂಗಡಿಯಲ್ಲಿ ಶ್ರೀ ಕಾಶೀಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಕಾರ್ಕಳದ ಜಿ.ಎಸ್.ಬಿ ಸಮುದಾಯದ ಬಂಧುಗಳು ಉಪಸ್ಥಿತರಿದ್ದರು.
ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರು ರಾಷ್ಟ್ರೀಯ ಸೇವಾ ಸಂಘದ ಹಿರಿಯ ಕಾರ್ಯಕರ್ತ ಶ್ರೀ ವಿಠ್ಠಲ ಕಿಣಿಯವರ ಮನೆಗೆ ಭೇಟಿ
ಉಡುಪಿ: ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರು ಬಿಜೆಪಿ ಹಾಗೂ ರಾಷ್ಟ್ರೀಯ ಸೇವಾ ಸಂಘದ ಹಿರಿಯ ಕಾರ್ಯಕರ್ತ ಶ್ರೀ ವಿಠ್ಠಲ ಕಿಣಿಯವರ ಮನೆಗೆ ಶಾಸಕ ರಘುಪತಿ ಭಟ್ ಅವರೊಂದಿಗೆ ಭೇಟಿ ನೀಡಿ ಆಶೀರ್ವಾದ ಪಡೆದರು.
ಬ್ರಹ್ಮಾವರ: ಎಸ್.ಎಂ.ಎಸ್ ಕಾಲೇಜಿಗೆ 96.54% ಫಲಿತಾಂಶ
ಬ್ರಹ್ಮಾವರ: 2022-2023ನೇ ಶೈಕ್ಷಣಿಕ ಸಾಲಿನಲ್ಲಿ ಸಂಸ್ಥೆಯ 251 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗಿದ್ದು, 70 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 139 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದು ಕಾಲೇಜಿನ ಫಲಿತಾಂಶವು 96.54% ಆಗಿರುತ್ತದೆ.
ಡಾ.ವಿ.ಎಸ್ ಆಚಾರ್ಯರ ಮಾದರಿ ಉಡುಪಿ ಕ್ಷೇತ್ರದ ಕನಸನ್ನು ನನಸಾಗಿಸುವ ಗುರಿ: ಯಶ್ ಪಾಲ್ ಸುವರ್ಣ
ಉಡುಪಿ: ಇಲ್ಲಿನ ಬಿಜೆಪಿ ಅಭ್ಯರ್ಥಿ ಯಶ್ ಪಾಲ ಸುವರ್ಣ ಇಂದು ಕಳ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಲೋನಿಗಳಿಗೆ ಕಾರ್ಯಕರ್ತರೊಂದಿಗೆ ಭೇಟಿ ನೀಡಿ ಮತ ಯಾಚನೆ ಮಾಡಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉಡುಪಿಯನ್ನು ಮಾದರಿ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡುವ ಗುರಿ ನನ್ನದು. ಡಾ.ವಿ ಎಸ್ ಆಚಾರ್ಯರವರ ಅಭಿವೃದ್ಧಿಯ ಕನಸನ್ನು ನನಸು ಮಾಡಿ ಉಡುಪಿಯನ್ನು 224 ಕ್ಷೇತ್ರಗಳಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದರು. ಕಳೆದ ಕೆಲವು ವರ್ಷಗಳಿಂದ ರಘುಪತಿ ಭಟ್ ಉಡುಪಿಯ ಅಭಿವೃದ್ದಿಗಾಗಿ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವರ […]
ಮಂಗಳೂರು: ಎಕ್ಸ್ ಪರ್ಟ್ ಕಾಲೇಜಿನ 99 ಶೇ. ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ
ಮಂಗಳೂರು: ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ವಳಚ್ಚಿಲ್ ಹಾಗೂ ಕೊಡಿಯಾಲ್‌ಬೈಲ್‌ನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಶೇ. 99.52 ರಷ್ಟು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಅಭೂತ ಪೂರ್ವ ಸಾಧನೆ ಮಾಡಿದ್ದಾರೆ. 590 ಕ್ಕಿಂತ ಅಧಿಕ ಅಂಕವನ್ನು 6 ವಿದ್ಯಾರ್ಥಿಗಳು, 580 ಕ್ಕಿಂತ ಅಧಿಕ ಅಂಕವನ್ನು 62, ಶೇ. 95 ಕ್ಕಿಂತ ಅಧಿಕ ಅಂಕವನ್ನು 231, ಶೇ.90 ಕ್ಕಿಂತ ಅಧಿಕ ಅಂಕವನ್ನು 759, ಶೇ.85 ಕ್ಕಿಂತ […]