ಬಿಜೆಪಿ ಜನರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದೆ: ಡಿ.ಕೆ.ಶಿವಕುಮಾರ್

ಬೈಂದೂರು: ಹಿಂದೂತ್ವ ಎಂಬುದು ಯಾರ ಮನೆಯ ಆಸ್ತಿಯೂ ಅಲ್ಲ. ನಾನೂ ಕೂಡಾ ಹಿಂದೂ. ಬಿಜೆಪಿ ಬದುಕಿನ ಬಗ್ಗೆ ಚಿಂತನೆ ಮಾಡದೇ, ಭಾವನೆ ಜೊತೆಗೆ ಆಟವಾಡುತ್ತಿದೆ. ಬೆಲೆ ಏರಿಕೆ, ಉದ್ಯೋಗ, ಭವಿಷ್ಯದ ಬಗ್ಗೆ ಅವರಿಗೆ ಚಿಂತೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಯಡ್ತರೆ ಜೆ.ಎನ್.ಆರ್. ಸಭಾಭವನದಲ್ಲಿ ಜರುಗಿದ ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹತ್ತಾರು ಸರಕಾರಿ ಉದ್ದಿಮೆ ಸ್ಥಾಪನೆ, ಜನರ ಸಶಕ್ತೀಕರಣಕ್ಕೆ ನೂರಾರು […]
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶಾರದಾ ಪ.ಪೂ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಉಡುಪಿ: ಇಲ್ಲಿನ ಕುಂಜಿಬೆಟ್ಟುವಿನ ಶಾರದಾ ಪ.ಪೂ ವಿಶ್ವವಿದ್ಯಾಲಯ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದು, ವಿದ್ಯಾರ್ಥಿಗಳ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಹೆಬ್ರಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ: ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗುಡುಗಿದ ಸುನಿಲ್ ಕುಮಾರ್

ಕಾರ್ಕಳ: ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ ಟಿಕೆಟ್ ಬಯಸಿ ಸಿಗದಿದ್ದಾಗ ಅಂದು ಗೋಪಾಲ ಭಂಡಾರಿ ಬದುಕಿದ್ದಾಗಲೆ ಸಾರ್ವಜನಿಕವಾಗಿ ಅವರ ಶವಯಾತ್ರೆ ನಡೆಸಿದ ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿಗೆ ಈಗ ನಾಲ್ಕು ವರ್ಷದ ಬಳಿಕ ಭಂಡಾರಿಯವರ ನೆನಪಾಗಿದೆ, ಪುತ್ಥಳಿ ನಿರ್ಮಿಸುವುದಕ್ಕೆ ಜ್ಞಾನೋದಯವಾಗಿದೆ. ತಾವು ಮೊದಲು ತಮ್ಮ ಬದ್ಧತೆ ಏನೆಂಬುದನ್ನು ಸ್ಪಷ್ಟಪಡಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ಸವಾಲು ಹಾಕಿದ್ದಾರೆ. ಹೆಬ್ರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಟಿಕೆಟ್ ಸಿಗದಿದ್ದಾಗ ಜೀವಂತವಿದ್ದ ವ್ಯಕ್ತಿಯನ್ನೇ ಶವಯಾತ್ರೆ […]
ರೆಂಜಾಳ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿ ಬಿಜೆಪಿಗೆ ಸೇರ್ಪಡೆ

ಕಾರ್ಕಳ: ರೆಂಜಾಳ ಗ್ರಾಮ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಪದಾಧಿಕಾರಿ, ಕಳೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ, ಸ್ಥಳೀಯ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯವಾಗಿರುವ ಮಲ್ಲಿಕಾ ಶೆಟ್ಟಿ ಯವರು ಇಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಚಿವರಾದ ಶ್ರೀ ವಿ ಸುನಿಲ್ ಕುಮಾರ್‌ರವರು ಕಾರ್ಕಳ ಕ್ಷೇತ್ರದಾದ್ಯಂತ ಹಾಗೂ ರೆಂಜಾಳ ಗ್ರಾಮದಲ್ಲಿ ನಡೆಸಿದ ಅಭಿವೃದ್ಧಿ ಚಟುವಟಿಕೆಗಳನ್ನು ಮತ್ತು ಪಕ್ಷದ ಸಿದ್ಧಾಂತಗಳನ್ನು ಮೆಚ್ಚಿ, ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಕ್ಷೇತ್ರಾಧ್ಯಕ್ಷರಾದ ಮಹಾವೀರ ಹೆಗ್ಡೆಯವರು ಬಿಜೆಪಿ ಪಕ್ಷದ ಶಾಲು ಮತ್ತು […]
ಸ್ತ್ರೀ-ಪುರುಷರೆಂಬ ತಾರತಮ್ಯವಿಲ್ಲದೆ ಸರ್ವಜನಾಂಗದ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರು ಬಸವಣ್ಣ: ಪ್ರಸನ್ನ ಹೆಚ್

ಉಡುಪಿ: ಜಗತ್ತಿನಲ್ಲಿ ಪ್ರಥಮ ಸಂಸತ್ತು ಎಂಬ ಹೆಗ್ಗಳಿಕೆಗೆ ಪಾತ್ರವಾದ ಅನುಭವ ಮಂಟಪವನ್ನು ರಚಿಸುವ ಮೂಲಕ ಸರ್ವಜನಾಂಗದ ಶ್ರೇಯೋಭಿವೃದ್ಧಿಗೆ ಸ್ತ್ರೀ-ಪುರುಷರೆಂಬ ತಾರತಮ್ಯವಿಲ್ಲದೆ ಮುಕ್ತ ವಾತಾವರಣವನ್ನು ಕಲ್ಪಿಸಿದ ಬಸವಣ್ಣನವರು ಜಗತ್ತಿನ ಪ್ರಥಮ ಪ್ರಜಾಪ್ರಭುತ್ವಕ್ಕೆ ಮಾದರಿಯಾದವರು ಎಂದು ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹೇಳಿದರು. ಅವರು ಭಾನುವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಬಸವ ಜಯಂತಿಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು. ತಾವು ಈ ಹಿಂದೆ ಬಸವಕಲ್ಯಾಣದಲ್ಲಿ […]