ವರನಟ ಡಾ. ರಾಜ್‌ಕುಮಾರ್ ಜಯಂತಿ ಕಾರ್ಯಕ್ರಮ

ಉಡುಪಿ: ವರನಟ ಡಾ. ರಾಜ್‌ಕುಮಾರ್ ಜಯಂತಿ ಕಾರ್ಯಕ್ರಮವನ್ನು ಸೋಮವಾರ ಉಡುಪಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯಲ್ಲಿ ಸರಳವಾಗಿ ಆಚರಿಸಲಾಯಿತು. ವಾರ್ತಾಧಿಕಾರಿ ಮಂಜುನಾಥ್.ಬಿ ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಾರ್ತಾ ಸಹಾಯಕ ಶಿವಕುಮಾರ್ ಹಾಗೂ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ

ಕಾರ್ಕಳ: ಕಾಂಗ್ರೆಸ್ ಅಭ್ಯರ್ಥಿ ಉದಯ ಕುಮಾರ್ ಶೆಟ್ಟಿಯವರ ನಾಯಕತ್ವವನ್ನು ಮೆಚ್ಚಿ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯಲ್ಲಿ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರವೀಣ್ ಸೂಡ ಕೆರೆಬೆಟ್ಟು ಬಿಜೆಪಿ ರೈತ ಮೋರ್ಚಾದ ಕಾರ್ಯದರ್ಶಿ, ಅರುಣ್ ಕುಮಾರ್ ಶೆಟ್ಟಿ, ಹರೀಶ್ ಕುಮಾರ್ ಹಾಗೂ ಶ್ರೀನೀವಾಸ್ ಪೂಜಾರಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ, ಸುಬೀತ್ ಎನ್.ಆರ್, ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷ ದೀಪಕ್ ಕೋಟ್ಯಾನ್ ಉಪಸ್ಥಿತಿತರಿದ್ದರು.
ಧರ್ಮದ ಆಧಾರದ ಮೇಲೆ ಮೀಸಲಾತಿ ಅಸಂವಿಧಾನಿಕ: ಅಮಿತ್ ಶಾ

ಹುಬ್ಬಳ್ಳಿ: ಧರ್ಮದ ಆಧಾರದ ಮೇಲೆ ಮೀಸಲಾತಿ ಅಸಂವಿಧಾನಿಕ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಹೇಳಿದ್ದಾರೆ ಮತ್ತು ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಅಳವಡಿಸಿಕೊಂಡ ಕೋಟಾ ಸೂತ್ರವನ್ನು ಬಿಜೆಪಿ ಜಾರಿಗೆ ತರಲಿದೆ ಎಂದು ಭರವಸೆ ನೀಡಿದರು. ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಧರ್ಮದ ಆಧಾರದ ಮೇಲೆ ಮೀಸಲಾತಿ ಅಸಂವಿಧಾನಿಕವಾಗಿದೆ ಮತ್ತು ಸಂವಿಧಾನದ ಅಡಿಯಲ್ಲಿ ಅದಕ್ಕೆ “ಅನುಮತಿ” ಎಂದಿಗೂ ಇರುವುದಿಲ್ಲ ಎಂದರು. ಒಬಿಸಿ ಅಡಿಯಲ್ಲಿ ಇರುವ ಮುಸ್ಲಿಂ ಸಮುದಾಯದ ವರ್ಗಗಳಿಗೆ ನಾವು ಇಂದಿಗೂ […]
ಉಡುಪಿ: ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್

ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸೋಮವಾರದಂದು ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡ ಪಾದಯಾತ್ರೆಯಲ್ಲಿ ಪಾಲ್ಗೊಂಡು ನಂತರ ಅಜ್ಜರಕಾಡು ಹುತಾತ್ಮ ಸೈನಿಕರ ಸ್ಮಾರಕದ ಬಳಿ ಹಮ್ಮಿಕೊಂಡ ಸಭೆಯನ್ನುದ್ದೇಶಿಸಿ ಮಾತನಾಡಿದರು. ಉಡುಪಿ ಸಿಟಿ ಬಸ್ ಸ್ಟಾಂಡ್ ನಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕದವರೆಗೆ ಬೃಹತ್ ಪಾದಯಾತ್ರೆಯಲ್ಲಿ ಭಾಗಿಯಾದರು. ಕ್ಷೇತ್ರದ ಚುನಾವಣಾ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮಾತನಾಡಿ, ಮಲ್ಪೆ ಬಂದರಿನಲ್ಲಿ 75 ಮೀನುಗಾರರು ಕಾಲುಜಾರಿ ಸಾವನ್ನಪ್ಪಿದ್ದಾರೆ. ಬಿಜೆಪಿಗರು ಈ ಕುರಿತು ತಲೆಕೆಡಿಸಿಕೊಂಡಿಲ್ಲ. […]
ಉಡುಪಿ: ನಾಮಪತ್ರ ಹಿಂಪಡೆದ ಬಂಡಾಯ ಅಭ್ಯರ್ಥಿ ಕೆ.ಕೃಷ್ಣ ಮೂರ್ತಿ

ಉಡುಪಿ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದ ಕೆ.ಕೃಷ್ಣಮೂರ್ತಿ ಆಚಾರ್ಯ ನಾಮಪತ್ರವನ್ನು ಹಿಂಪಡೆದಿದ್ದಾರೆ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಳ್ಳಲು ಸೋಮವಾರ ( ಎ.24 ರಂದು) ಕೊನೆಯ ದಿನವಾಗಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಗೆ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಕೆ.ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಟಿಕೆಟ್ ಕೈತಪ್ಪಿತ್ತು. ಇದರಿಂದ ಅಸಮಾಧನಾಗೊಂಡಿದ್ದ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದರು. ಕಾರ್ಯಕರ್ತರ ಜೊತೆ ಚರ್ಚಿಸಿ ನಿರ್ಧಾರ ಕೈಗೊಂಡಿದ್ದ ಅವರು ತಮ್ಮ […]