ಮೂಡಬಿದ್ರಿ: ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಉಳೇಪಾಡಿ ಉಮಾಮಹೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದಲ್ಲಿ ಭಾಗಿ
ಮೂಡುಬಿದ್ರಿ: ಮುಲ್ಕಿ- ಮೂಡುಬಿದ್ರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಅವರು ಉಮಾಮಹೇಶ್ವರ ದೇವಸ್ಥಾನ ಉಳೇಪಾಡಿಯಲ್ಲಿ ನಡೆದ ಶ್ರೀ ದೇವರ ವರ್ಷಾವಧಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸಿದರು.
ಆಮ್ಟಾಡಿ ಶ್ರೀ ಅಣ್ಣಪ್ಪ ಸ್ವಾಮಿ ಮತ್ತು ಜುಮಾದಿ ಬಂಟ ಪರಿವಾರ ದೈವಗಳ ನೇಮೋತ್ಸವಕ್ಕೆ ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ.ರಾಮನಾಥ್ ರೈ ಭೇಟಿ
ಬಂಟ್ವಾಳ: ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ.ರಮನಾಥ ರೈ ವಿಧಾನಸಭಾ ಚುನಾವಣೆಯ ಪ್ರಯುಕ್ತ ಆಮ್ಟಾಡಿ ಶ್ರೀ ಅಣ್ಣಪ್ಪ ಸ್ವಾಮಿ ಮತ್ತು ಜುಮಾದಿ ಬಂಟ ಪರಿವಾರ ದೈವಗಳ ನೇಮೋತ್ಸವಕ್ಕೆ ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿದೆ.
ಡಾ. ಜಿ ಶಂಕರ್ ಮನೆ ಮೇಲೆ ಐಟಿ ದಾಳಿ: ಕಾಂಗ್ರೆಸ್ ನಿಂದ ಖಂಡನೆ
ಉಡುಪಿ: ಮೊಗವೀರ ಸಮುದಾಯದ ಮುಖಂಡರಾದ ನಾಡೋಜ ಡಾ. ಜಿ ಶಂಕರ್ ಅವರ ಮನೆ ಹಾಗೂ ಸಂಸ್ಥೆಗಳ ಮೇಲೆ ನಡೆದಿರುವ ಆದಾಯ ತೆರಿಗೆ ಇಲಾಖೆ ದಾಳಿಯು ಮೊಗವೀರ ಸಮುದಾಯಕ್ಕೆ ಬಿಜೆಪಿ ನೇತೃತ್ವದ ಮೋದಿ ಸರಕಾರ ಮಾಡಿದ ಬಹುದೊಡ್ಡ ಅವಮಾನ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೊಗವೀರ ಸಮುದಾಯವನ್ನು ತಳಮಟ್ಟದಿಂದ ಮೇಲೆತ್ತುವುದರೊಂದಿಗೆ, ಸರ್ವರನ್ನು ಒಗ್ಗೂಡಿಸುವ ಮೂಲಕ ಸಮಾಜದಲ್ಲಿ ಸಂಘಟನೆಯನ್ನು ಬಲ ಪಡಿಸುವ ಬಹುದೊಡ್ಡ ಕೆಲಸವನ್ನು ಡಾ. ಜಿ ಶಂಕರ್ ಕಳೆದ ಹಲವಾರು […]
ಸಚಿವ ಸುನಿಲ್ ಕುಮಾರ್ ಮುಡಾರು ಗ್ರಾಮಕ್ಕೆ ಭೇಟಿ..
ಕಾರ್ಕಳ: ಕಾರ್ಕಳ ಬಿಜೆಪಿ ಅಭ್ಯರ್ಥಿ ಸಚಿವ ವಿ.ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದ ಮುಡಾರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮತದಾರರನ್ನು ಭೇಟಿ ಮಾಡಿದರು. ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಕಾರ್ಕಳವನ್ನು ಮತ್ತಷ್ಟು ಅಭಿವೃದ್ಧಿಗೊಳಿಸಿ ಆಶೀರ್ವದಿಸುವಂತೆ ಕೋರಿದರು.
ಭೃಷ್ಟಾಚಾರದಿಂದ ಕೂಡಿದ ಬಿಜೆಪಿ ಸರಕಾರ ಜನತೆಗೆ ದೌರ್ಜನ್ಯವೆಸಗುತ್ತಿದೆ: ಪ್ರಸಾದ್ ರಾಜ್ ಕಾಂಚನ್
ಉಡುಪಿ: ಮಲ್ಪೆ ಬಂದರಿನ ಅವ್ಯವಸ್ಥೆಯನ್ನು ನಾವು ಸರಿಪಡಿಸಬೇಕು. ಡ್ರೈನೇಜ್, ಮನೆ ಕಟ್ಟಲು ಲೈಸೆನ್ಸ್, ನಿರುದ್ಯೋಗ, ಕುಡಿಯುವ ನೀರಿನ ಸಮಸ್ಯೆಗಳನ್ನು ಬಿಜೆಪಿ ಸರಕಾರ ಪರಿಹರಿಸಿಲ್ಲ. ಭೃಷ್ಟಾಚಾರದಿಂದ ಕೂಡಿದ ಬಿಜೆಪಿ ಸರಕಾರ ಜನತೆಗೆ ದೌರ್ಜನ್ಯವೆಸಗುತ್ತಿದೆ. ಬಡವರಿಗೆ ಬೇಕಾದ ಗ್ಯಾರಂಟಿ ಕಾರ್ಡ್ ವ್ಯವಸ್ಥೆ ಮಾಡಬೇಕು. ಎಂದು ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಅವರು ವಿಧಾನ ಸಭಾ ಚುನಾವಣೆ ಪೂರ್ವಭಾವಿಯಾಗಿ ಕಾಂಗ್ರೆಸ್ ಬ್ಲಾಕ್ ಮಟ್ಟದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಮೂಡುಬೆಟ್ಟು ವಾರ್ಡ್ ಕಾಂಗ್ರೆಸ್ ಮುಖಂಡರಾದ […]