ಹೆಜಮಾಡಿ ಗ್ರಾ.ಪಂ. ಮಾಜಿ ಸದಸ್ಯ ಗೋವರ್ಧನ್ ಕೋಟ್ಯಾನ್ ಬಿಜೆಪಿ ಸೇರ್ಪಡೆ..

ಪಡುಬಿದ್ರೆ: ಹೆಜಮಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಕಾಂಗ್ರೆಸ್ ಮುಖಂಡರಾದ ಗೋವರ್ಧನ್ ಕೋಟ್ಯಾನ್ ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.

ಜಾತಿ ಮತ್ತು ಧರ್ಮದ ಅಡೆತಡೆಗಳನ್ನು ಮೀರಿದ ಕಲೆ ಸಾರ್ಥಕ ಜೀವನದ ಸಾಧನ: ಮಧುಬನಿ ಕಲಾವಿದರ ಅಭಿಮತ

ಮಣಿಪಾಲ: ಜಾತಿ ಮತ್ತು ಧರ್ಮದ ಅಡೆತಡೆಗಳನ್ನು ಮೀರಿ ಕಲೆ ಜನರನ್ನು ಒಂದು ಮಾಡುತ್ತದೆ ಮತ್ತು ಏಕತೆಯ ಸಂದೇಶವನ್ನು ಹರಡುತ್ತದೆ ಎಂದು ಬಿಹಾರದ ಮಧುಬನಿ ಕಲಾವಿದರು ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ವಿದ್ಯಾರ್ಥಿಗಳೊಂದಿಗೆ ಮಧುಬನಿ ಕಲಾವಿದರಾದ ಸರವಣ್ ಕುಮಾರ್ ಪಾಸ್ವಾನ್, ಸಂತೋಷ್ ಕುಮಾರ್ ಪಾಸ್ವಾನ್ ಮತ್ತು ಉಜಾಲಾ ಕುಮಾರಿ ಮಾತನಾಡಿ, ಕಲೆಯು ಸಾರ್ಥಕ ಜೀವನದ ಸಾಧನವಾಗಿದೆ ಎಂದು ಹೇಳಿದರು. ಕಲಾವಿದರು ತಮ್ಮ ಹುಟ್ಟಿನ ಆಧಾರದ ಮೇಲೆ ತಾರತಮ್ಯವನ್ನು ಎದುರಿಸುವುದು ನಿಜವಾದರೂ ಕಲೆ […]

ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅಧಿಕೃತ ನಿವಾಸದ ‘ಸುಂದರೀಕರಣ’ಕ್ಕೆ 45 ಕೋಟಿ ಖರ್ಚು! ಕೊರೋನಾ ಸಂಕಷ್ಟ ಕಾಲದಲ್ಲಿ ದುಂದುವೆಚ್ಚ?

ಹೊಸದಿಲ್ಲಿ: ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಅಧಿಕೃತ ನಿವಾಸದ ‘ಸುಂದರೀಕರಣ’ಕ್ಕೆ 45 ಕೋಟಿ ರೂ ವೆಚ್ಚ ಮಾಡಲಾಗಿದೆ ಎಂದು ಬಿಜೆಪಿ ಮಂಗಳವಾರ ಹೇಳಿಕೊಂಡಿದ್ದು, ‘ನೈತಿಕ’ ನೆಲೆಯಲ್ಲಿ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ. ವರದಿಗಳ ಪ್ರಕಾರ ಅರವಿಂದ್ ಕೇಜ್ರಿವಾಲ್ ಅವರ ವಸತಿ ಗೃಹದ ನವೀಕರಣಕ್ಕೆ ರೂ 44.78 ಕೋಟಿ ಖರ್ಚು ಮಾಡಲಾಗಿದೆ. ಕೊರೋನಾ ಸಂಕಷ್ಟ ಕಾಲದಲ್ಲಿ ಆಮ್ಲಜನಕ ಟ್ಯಾಂಕರ್‌ಗಳನ್ನು ಖರೀದಿಸಲು ಹಣವಿಲ್ಲ ಎಂದಿದ್ದ ದೆಹಲಿ ಎಎಪಿ ಸರ್ಕಾರವು ತಲಾ 5 ಲಕ್ಷ ರೂಪಾಯಿ ಮೌಲ್ಯದ […]

ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯಿಂದ ಅಂಗದಾನ: 7 ರೋಗಿಗಳಿಗೆ ಜೀವದಾನ

ಮಣಿಪಾಲ: 21 ವರ್ಷದ ಉಲ್ಲಾಸ್ ಆರ್ ಎಂಬವರಿಗೆ ಏ. 22 ರಂದು ಭದ್ರಾವತಿ ತಾಲೂಕಿನ ಚೆನ್ನಗಿರಿಯಲ್ಲಿ ರಸ್ತೆ ಅಪಘಾತವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಏ.23 ರಂದು ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭದ್ರಾವತಿ ತಾಲೂಕಿನ ಕೆಂಚನಹಳ್ಳಿ ಗ್ರಾಮ, ನೀರಗುಂಡಿ ಅಂಚೆಯ ರಾಜಪ್ಪ ಇವರ ಮಗನಾದ ಉಲ್ಲಾಸ್ ಅಪಘಾತದ ಪರಿಣಾಮದಿಂದ ತೀವ್ರವಾಗಿ ಗಾಯಗೊಂಡಿದ್ದು, ವೈದ್ಯರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ. ಮಾನವ ಅಂಗಾಂಗ ಕಸಿ ಕಾಯ್ದೆ 1994 ರ ಅನುಸಾರ ಉಲ್ಲಾಸ್ ಅವರನ್ನು ಎರಡು ಬಾರಿ […]

ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರಿಂದ ಗ್ಯಾರಂಟಿ ಕಾರ್ಡ್ ವಿತರಣೆ

ಹೊಸಬೆಟ್ಟು: ಮುಲ್ಕಿ-ಮೂಡುಬಿದಿರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಹೊಸಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಚ್ಚೆಮೊಗರು, ಹೊಸಬೆಟ್ಟು ಹಾಗೂ ಹಿದಾಯತ್ ನಗರ ಪ್ರದೇಶಗಳಲ್ಲಿ ಕಾಂಗ್ರೆಸ್ ಪಕ್ಷದ ಭರವಸೆಯ ಯೋಜನೆಗಳ ಕುರಿತು ಗ್ಯಾರಂಟಿ ಕಾರ್ಡ್ ಗಳನ್ನು ಮನೆಮನೆಗೆ ಭೇಟಿ ನೀಡಿ ವಿತರಿಸಿದರು.