ಬಿಸಿಗಾಳಿಯಿಂದ ರಕ್ಷಿಸಿಕೊಳ್ಳಲು ಇಲ್ಲಿವೆ ಉಪಾಯಗಳು
ಉಡುಪಿ: ಭಾರತೀಯ ಹವಾಮಾನ ಇಲಾಖೆಯು ಪ್ರಸಕ್ತ ಸಾಲಿನ ಬಿಸಿಗಾಳಿ ಕುರಿತು ಮುನ್ಸೂಚನೆ ನೀಡಿದ್ದು, ಪ್ರಸ್ತುತ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯತಾಪಮಾನಕ್ಕಿಂತ 2-3 ಡಿಗ್ರಿ ಸೆ. ಅಧಿಕತಾಪಮಾನದಾಖಲಾಗುತ್ತಿದ್ದು, ಇದು ಮನುಷ್ಯ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು ಬಿಸಿಗಾಳಿಯಿಂದಾಗುವ ಅಪಾಯಗಳನ್ನು ತಡೆಯಲು ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆಯು ಸಲಹೆ – ಸೂಚನೆಗಳನ್ನು ಪಾಲಿಸುವುದು ಅಗತ್ಯವಿದೆ. ಬಿಸಿಗಾಳಿಯಿಂದ ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಧ್ಯವಾದಷ್ಟು ಮದ್ಯಾಹ್ನ 12 ರಿಂದ 3 ರ ವರೆಗಿನ ಗರಿಷ್ಠ […]
ಸಿಡಿಲು ಆ್ಯಪ್ ನಿಂದ ದೊರೆಯಲಿದೆ ಸಿಡಿಲಿನ ಮುನ್ಸೂಚನೆ: ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವಿನೂತನ ತಂತ್ರಜ್ಞಾನ
ಉಡುಪಿ: ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಿಡಿಲಿನಿಂದ ರಕ್ಷಣೆ ಪಡೆಯಬಹುದಾದ ಸರಳ ಮಾರ್ಗಗಳನ್ನು ತಿಳಿಸಿದೆ. ಸಿಡಿಲು-ಮೊಬೈಲ್ ಆ್ಯಪ್ ನಲ್ಲಿ ಸಿಡಿಲಿನ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಸಿಡಿಲಿನ ಸಂಭವನೀಯತೆ ಇದ್ದಲ್ಲಿ ಹೊರಗಿನ ಕೆಲಸಗಳನ್ನು ಮುಂದೂಡಿ, ಆದಷ್ಟು ಮನೆಯಲ್ಲಿಯೇ ಇರುವುದು ಸೂಕ್ತ. ಮನೆಯ ಸುತ್ತಲಿನಲ್ಲಿರುವ ಕೊಳೆತ ಹಾಗೂ ಒಣಗಿದ ಮರಗಳನ್ನು ತೆರವುಗೊಳಿಸಬೇಕು. ಮನೆಯ ಒಳಗಿರುವಾಗ ಕಿಟಕಿಯಿಂದ ದೂರವಿರಬೇಕು, ಈ ಸಂದರ್ಭದಲ್ಲಿ ದೂರವಾಣಿ, ಮೊಬೈಲ್ ಮತ್ತುಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಬಾರದು. ಗೃಹಪಯೋಗಿ ಉಪಕರಣಗಳ ಪ್ಲಗ್‌ಗಳನ್ನು ತೆಗೆದಿಡಬೇಕು. ಗೋಡೆಯಿಂದ ದೂರವಿರುವುದು ಉತ್ತಮ. […]