ಕಾರ್ಕಳ ಬೈಲೂರು ಎರಡು ಬೈಕ್’ಗಳ ನಡುವೆ ಭೀಕರ ಅಪಘಾತ ಓರ್ವ ಸಾವು ಮೂರು ಮಂದಿ ಗಂಭೀರ…!!

ಕಾರ್ಕಳ: ಉಡುಪಿ ಮುಖ್ಯ ರಸ್ತೆಯ ಬೈಲೂರು ಕೆಳ ಪೇಟೆಯಲ್ಲಿಎರಡು ಬೈಕ್’ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.ಯರ್ಲಪ್ಪಡಿ ಕಾಂತರಗೋಳಿ ನಿವಾಸಿ ರಮೇಶ ಆಚಾರ್ಯ ಮೃತಪಟ್ಟ ದುರ್ದೇವಿಯಾಗಿದ್ದಾರೆ. ರಮೇಶ ಆಚಾರ್ಯ ಪತ್ನಿ ಶಕುಂತಲಾ ಆಚಾರ್ಯ ಹಾಗೂ ಜಾರ್ಕಳ ನಿವಾಸಿಗಳಾದ ಸುಧೀರ್ ಹಾಗೂ ಡೇವಿಡ್ ಗಂಭೀರ ಗಾಯಗೊಂಡು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಮೇಶ ಆಚಾರ್ಯ ದಂಪತಿಗಳು ಬೈಕ್ ನಲ್ಲಿ ರಸ್ತೆ ದಾಟುತ್ತಿದ್ದಾಗ ಉಡುಪಿಯಿಂದ ಜಾರ್ಕಳಕ್ಕೆ ಬರುತ್ತಿದ್ದ ಬೈಕು ಡಿಕ್ಕಿಯಾಗಿ ನಾಲ್ಕು […]
ಡಾ.ವಿ.ಎಸ್.ಆಚಾರ್ಯ ಕನಸು ನನಸಾಗಿಸಲು ಯಶ್ ಪಾಲ್ ಸುವರ್ಣರಿಗೆ ಮತ ನೀಡಿ: ಪ್ರತಾಪ್ ಸಿಂಹ ನಾಯಕ್

ಉಡುಪಿ: ಡಾ.ವಿ.ಎಸ್ ಆಚಾರ್ಯ ಕಂಡ ನವ ಉಡುಪಿ ನಿರ್ಮಾಣದ ಕನಸು ನನಸಾಗಿಸಲು ಬಿಜೆಪಿಯ ಸಮರ್ಥ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮನವಿ ಮಾಡಿದರು. 3 ಬಾರಿ ಉಡುಪಿ ನಗರ ಸಭೆಯ ಸದಸ್ಯರಾಗಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಮತ್ತು ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಸಹಕಾರ ಕ್ಷೇತ್ರದಲ್ಲೂ ತಮ್ಮ ಕಾರ್ಯವೈಖರಿಯಿಂದ ಗುರುತಿಸಿಕೊಂಡು, ಧಾರ್ಮಿಕ ಸಾಮಾಜಿಕ ಶಿಕ್ಷಣ ಕ್ಷೇತ್ರದಲ್ಲಿ […]
ಸಿದ್ಧಾಪುರ: ಗೃಹ ಸಚಿವ ಭೇಟಿ ಹಿನ್ನೆಲೆ; ಮದ್ಯ ಮಾರಾಟ ನಿಷೇಧ

ಕುಂದಾಪುರ: ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರ ಭೇಟಿ ಪ್ರಯುಕ್ತ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಏಪ್ರಿಲ್ 29 ರಂದು ಕುಂದಾಪುರ ತಾಲೂಕಿನ ಸಿದ್ಧಾಪುರದ ಸರ್ಕಾರಿ ಪ್ರೌಢಶಾಲೆಯಿಂದ ಸರ್ಕಲ್‌ವರೆಗೆ ರೋಡ್ ಶೋ ನಡೆಸಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ರ ವರೆಗೆ ಸಿದ್ಧಾಪುರ ಗ್ರಾಮ ವ್ಯಾಪ್ತಿಯಲ್ಲಿರುವ ಎಲ್ಲಾ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್, ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟದ […]
ಸಚಿವ ಸುನಿಲ್ ಕುಮಾರ್ ಇರ್ವತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮತದಾರರ ಭೇಡಿ

ಕಾರ್ಕಳ: ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ.ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದ ಇರ್ವತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಇಂದು ಭೇಟಿ ಮಾಡಿದರು. ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿದರ ಮೂಲಕ ಕಾರ್ಕಳವನ್ನು ಅಭಿವೃದ್ಧಿಗೊಳಿಸುವಂತೆ ಕೋರಿದರು.