ಕೈರಬೆಟ್ಟು ಸುನಿಲ್ ಪರ ಮತಯಾಚನೆ

ಕಾರ್ಕಳ: ಜನಸಾಮಾನ್ಯರ ಸಮಗ್ರ ಅಭಿವೃದ್ಧಿಗೆ ಶಾಸಕ, ಸಚಿವ ವಿ ಸುನಿಲ್‌ ಕುಮಾರ್ ಪೂರಕ ಆಡಳಿತ ನೀಡಿದ್ದರು. ಸರ್ವ ವ್ಯಾಪಿ, ಸರ್ವ ಸ್ಪರ್ಶಿ ಯೋಜನೆಗಳನ್ನು ಕಾರ್ಕಳಕ್ಕೆ ತಂದು, ಎಲ್ಲ ಜಾತಿ-ಸಮುದಾಯದ ಜನರ ಮೆಚ್ಚುಗೆಗೆ ಕಾರಣರಾಗಿದ್ದಾರೆ. ಬಿಜೆಪಿಯದ್ದು ಹಿಂದುತ್ವ, ಅಭಿವೃದ್ಧಿ ಅಜೆಂಡಾ ಆಗಿದ್ದರೆ, ಕಾಂಗ್ರೆಸ್ಸಿಗರು ಜಾತಿ ಮತ್ತು ಅಪಪ್ರಚಾರದಲ್ಲಿ ತೊಡಗಿ ಮತಯಾಚಿಸುತ್ತಿದ್ದಾರೆ. ಕ್ಷೇತ್ರದ ಜನ ಕ್ಷೇತ್ರದಲ್ಲಿ ಆದ ವಾಸ್ತವ ಬದಲಾವಣೆಗಳನ್ನು ಅರಿತು ಬಿಜೆಪಿ ಅಭ್ಯರ್ಥಿ ವಿ ಸುನಿಲ್‌ ಕುಮಾರ್‌ ಅವರನ್ನು ಈ ಬಾರಿ ಬೆಂಬಲಿಸುವಂತೆ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ […]

ಬೆಳ್ಮಣ್ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮತದಾರರನ್ನು ಭೇಟಿ ಮಾಡಿದ ಸಚಿವ ಸುನಿಲ್ ಕುಮಾರ್

ಕಾರ್ಕಳ: ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ.ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದ ಬೆಳ್ಮಣ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಭೇಟಿ ಮಾಡಿದರು. ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿದರ ಮೂಲಕ ಕಾರ್ಕಳವನ್ನು ಅಭಿವೃದ್ಧಿಗೊಳಿಸುವಂತೆ ಕೋರಿದರು.

ಮೇ 2 ರಿಂದ 4 ರ ವರೆಗೆ ಅಂಚೆ ಮತದಾನ ಕೇಂದ್ರ ಕಾರ್ಯಾಚರಣೆ

ಉಡುಪಿ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆ ಎಂದು ಗುರುತಿಸಲಾದ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕೇಂದ್ರ ಚುನಾವಣಾ ಆಯೋಗವು ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ಅಗತ್ಯ ಸೇವೆಗಳ ಇಲಾಖೆಗಳಡಿ ಬರುವ ಗೈರು ಹಾಜರಿ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪೋಸ್ಟಲ್ ವೋಟಿಂಗ್ ಸೆಂಟರ್ ಅನ್ನು ಜಿಲ್ಲೆಯಲ್ಲಿ ಏಕ ಮಾದರಿಯಾಗಿ ಮೇ 2 ರಿಂದ 4 ರ ವರೆಗೆ ಬೆಳಗ್ಗೆ 9 ರಿಂದ ಸಂಜೆ 5 ರ […]

ಮತದಾನದ ದಿನದಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ಆದೇಶ

ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು ಮೇ 10 ರಂದು ಚುನಾವಣೆ ನಿಗದಿಪಡಿಸಿದ್ದು, ಸದರಿ ದಿನದಂದು ಜಿಲ್ಲೆಯಾದ್ಯಂತ ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು, 1951ರ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ)ರಡಿ ಹಾಗೂ ಕೈಗಾರಿಕಾ ಸಂಸ್ಥೆಗಳ ಕಾಯ್ದೆ-1963 ಕಲಂ 3(ಎ) ಅನ್ವಯ ಅರ್ಹ ಕಾರ್ಮಿಕ ಮತದಾರರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಿ, ಮತ ಚಲಾಯಿಸಲು ಅನುವು […]

ವಿದ್ಯಾರ್ಥಿಗಳ ಕೊರತೆ: ಪಂಚನಬೆಟ್ಟು ವಿದ್ಯಾವರ್ಧಕ ಪ್ರೌಢಶಾಲೆ ಮುಚ್ಚಲು ಆದೇಶ

ಉಡುಪಿ: ಮಕ್ಕಳ ಸಂಖ್ಯೆ ಕೊರತೆಯ ಕಾರಣದಿಂದ ಉಡುಪಿ ವಲಯದ ಪಂಚನಬೆಟ್ಟು ವಿದ್ಯಾವರ್ಧಕ ಅನುದಾನಿತ ಪ್ರೌಢಶಾಲೆಯನ್ನು ಕಾರ್ಯಸಾಧುವಲ್ಲದ ಶಾಲೆಯೆಂದು ಸರ್ಕಾರ ಘೋಷಿಸಿದ್ದು, ಪ್ರಸಕ್ತ ಸಾಲಿನಿಂದ ಶಾಲೆಯ ಮಾನ್ಯತೆ ಹಿಂಪಡೆದು, ಶಾಲೆ ಮುಚ್ಚಲು ಆದೇಶಿಸಲಾಗಿರುತ್ತದೆ. ಆದ್ದರಿಂದ ಪ್ರಸಕ್ತ ಸಾಲಿನಿಂದ ಈ ಶಾಲೆಗೆ ಮಕ್ಕಳನ್ನು ದಾಖಲಾತಿ ಮಾಡಿದ್ದಲ್ಲಿ ಸಂಬಂಧಪಟ್ಟ ಪೋಷಕರೇ ಜವಾಬ್ದಾರರಾಗಿರುತ್ತಾರೆ ಎಂದು ಉಡುಪಿ ವಲಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.