ಮೇ 10…. ಮತ ಒತ್ತು… ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕರೆ
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ, ಮೇ 10 ರಂದು ನಡೆಯುವ ಮತದಾನ ದಿನದಂದು ಜಿಲ್ಲೆಯ ಎಲ್ಲಾ ಮತದಾರರು ತಪ್ಪದೇ ಮತದಾನ ಮಾಡುವಂತೆ ತಿಳಿಸಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಮತದಾನ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಲು ಸಹಕಾರಿಯಾಗುವಂತೆ, ಮೇ 10… ಮತ ಒತ್ತು.. ಎಂಬ ಪ್ರಾಸ ವಾಕ್ಯವನ್ನು ಸುಲಭವಾಗಿ ನೆನಪಿನಲ್ಲಿಡುವಂತೆ ತಿಳಿಸಿದರು. ಅವರು ರವಿವಾರ ಚುನಾವಣಾ ಆಯೋಗದ ನಿರ್ದೇಶನದಂತೆ, ಮತದಾರರಿಗೆ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸಲು ನಡೆದ, ನಮ್ಮ ನಡೆ ಮತಗಟ್ಟೆಯ […]
ಜೆಇಇ ಮೈನ್ಸ್ ನಲ್ಲಿ ಶ್ರೀ ವೆಂಕಟರಮಣ ಕಾಲೇಜು ವಿದ್ಯಾರ್ಥಿಗಳ ಸಾಧನೆ
ಕುಂದಾಪುರ: ರಾಷ್ಟ್ರಮಟ್ಟದಲ್ಲಿ ಜರುಗಿದ 2023 ನೇ ಸಾಲಿನ ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ನಿತೇಶ್ 94.58 ಪರ್ಸೆಂಟೈಲ್, ಪ್ರಣಮ್ಯ 91.82 ಪರ್ಸೆಂಟೈಲ್, ಸನತ್ 90.60 ಪರ್ಸೆಂಟೈಲ್, ಕಾರ್ತಿಕ್ 88.46 ಪರ್ಸೆಂಟೈಲ್,ರಿಷಿ 87.58 ಪರ್ಸೆಂಟೈಲ್, ನಾಗರಾಜ್ 85.93 ಪರ್ಸೆಂಟೈಲ್ ಗಳಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿಗೆ ಸತತ 5ನೇ ಬಾರಿ ಶೇ.100 ಫಲಿತಾಂಶ
ಕುಂದಾಪುರ: 2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿಗೆ ಶೇ 100 ಫಲಿತಾಂಶ ದಾಖಲಾಗುವುದರ ಜೊತೆಗೆ ರಾಜ್ಯ ಮಟ್ಟದಲ್ಲಿ ತೃತೀಯ ರ‍್ಯಾಂಕ್‌ನೊಂದಿಗೆ ಒಟ್ಟು 11 ರ‍್ಯಾಂಕ್ ಪಡೆದುಕೊಂಡಿದೆ. ಯಾವುದೇ ಅಂಕದ ಷರತ್ತುಗಳು ಇಲ್ಲದೆ ವಿದ್ಯಾರ್ಥಿಗಳನ್ನು ಕಾಲೇಜಿಗೆ ದಾಖಲಿಸಿಕೊಂಡು ಸತತವಾಗಿ 5 ವರ್ಷಗಳಿಂದ ಶೇ.100 ಫಲಿತಾಂಶ ದಾಖಲಿಸುತ್ತಿರುವ ಕುಂದಾಪುರದ ಏಕೈಕ ಕಾಲೇಜು ಆಗಿ ಹೊರಹೊಮ್ಮಿರುವುದು ಶ್ಲಾಘನೀಯ.
ಕಾರ್ಕಳ: ಮೇ1ರಂದು ಕಾಂಗ್ರೆಸ್ ಕಾಲ್ನಡಿಗೆ ಜಾಥ ಹಾಗೂ ಬೃಹತ್ ಸಮಾವೇಶ
ಕಾರ್ಕಳ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ಕಾಂಗ್ರೇಸ್ ಕಾಲ್ನಡಿಗೆ ಜಾಥಾ ಹಾಗೂ ಬೃಹತ್ ಸಮಾವೇಶ ಮೇ 1 ಸೋಮವಾರ ರಂದು ಆಯೋಜಿಸಲಾಗಿದೆ. ಅಂದು ಮಧ್ಯಾಹ್ನ 3ಕ್ಕೆ ಸ್ವರಾಜ್ಯ ಮೈದಾನದಿಂದ ಪ್ರಾರಂಭಗೊಳ್ಳುವ ಬೃಹತ್ ಜಾಥವು ಬಂಡೀಮಠ ಬಸ್ ನಿಲ್ದಾಣದವರೆಗೆ ಕಾಲ್ನಡಿಗೆಯಲ್ಲಿ ರೋಡ್ ಶೋ ಮೂಲಕ ಸಾಗಿ ಬಂದು ಬೃಹತ್ ಸಮಾವೇಶದೊಂದಿಗೆ ಸಮಾಪನಗೊಳ್ಳಲಿದೆ. ಪಕ್ದದ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳಾದ ಡಾ.ಎಂ ವೀರಪ್ಪ ಮೊಯಿಲಿ, ಅಭ್ಯರ್ಥಿ ಮುನಿಯಾಲ್ ಉದಯ್ ಶೆಟ್ಟಿ, ಪ್ರಮುಖ ಭಾಷಣಗಾರಾಗಿ ವಾಗ್ಮಿ ನಿಕೇತ್ ರಾಜ್ ಮೌರ್ಯ, […]
ಮಹಿಳೆಯ ಚಿನ್ನಾಭರಣ ಸುಲಿಗೆ ಮಾಡಿದ ಆರೋಪಿಗೆ ಶಿಕ್ಷೆ
ಉಡುಪಿ: ಮಹಿಳೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಮತ್ತು ಚಿನ್ನದ ಸರವನ್ನು ಸುಲಿಗೆ ಮಾಡಿದ ಆರೋಪಿಗೆ ಉಡುಪಿ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಮ್.ಎಫ್.ಸಿ. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಪ್ರಕರಣದ ವಿವರ: 2015 ನವೆಂಬರ್ 13 ರಂದು ಪ್ರಶಾಂತ್ ಶೆಟ್ಟಿ ಎಂಬಾತನು ಉಡುಪಿ ತಾಲೂಕು ಪೆರ್ಣಂಕಿಲ ಗ್ರಾಮದ ಗುಂಡುಪಾದೆ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಬಂದು ಜಲಜಾ ಎಂಬ ಮಹಿಳೆಯ ಕುತ್ತಿಗೆಯಲ್ಲಿದ್ದ ಸುಮಾರು 41 ಗ್ರಾಂ ತೂಕದ ಕರಿಮಣಿ ಮತ್ತು ಚಿನ್ನದ ಸರವನ್ನು ಸುಲಿಗೆ ಮಾಡಿರುವ ಹಿನ್ನೆಲೆ, […]