ಜೆಇಇ ಮೈನ್ಸ್ ದ್ವಿತೀಯ ಹಂತದ ಪರೀಕ್ಷೆಯಲ್ಲಿ ಮಾರ್ಸ್ ಲರ್ನಿಂಗ್ ಸೆಂಟರ್ ವಿದ್ಯಾರ್ಥಿಗಳ ಸಾಧನೆ
ಮಂಗಳೂರು: ಎಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ದ್ವಿತೀಯ ಹಂತದ ಪರೀಕ್ಷೆಯಲ್ಲಿ ಬೆಂದೂರ್‌ವೆಲ್ ಸಿಟಿ ಆರ್ಕೇಡ್ ಬಿಲ್ಡಿಂಗ್‌ನಲ್ಲಿರುವ ಮಾರ್ಸ್ ಲರ್ನಿಂಗ್ ಸೆಂಟರ್‌ನ ಎಂ.ಬಿ. ಗ್ಯಾನ್ ತಮ್ಮಯ್ಯ 98.609 ಅಂಕ ಪಡೆದಿದ್ದು ಸಂಸ್ಥೆಯ ಒಟ್ಟು 4 ವಿದ್ಯಾರ್ಥಿಗಳು 96 ಕ್ಕಿಂತಲೂ ಅಧಿಕ ಅಂಕ ಗಳಿಸಿರುತ್ತಾರೆ. ಶ್ರೀಕಾ ಆಳ್ವಾ 97.575 ಪರ್ಸೆಂಟೈಲ್, ತನಿಷ್ಕ್ 97.367 ಪರ್ಸೆಂಟೈಲ್, ಇಶಾನ್ ರೈನಾ 96.025 ಪರ್ಸೆಂಟೈಲ್ ಅಂಕ ಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಮಾರ್ಸ್ ಲರ್ನಿಂಗ್ ಸೆಂಟರ್ ನಿರ್ದೇಶಕಿ ಡಾ| ರೀನಾ ಆಳ್ವಾ […]
ಉಡುಪಿಯಲ್ಲಿ ಪರಿಸರ ಸ್ನೇಹಿ ಉದ್ಯಮಗಳನ್ನು ಸ್ಥಾಪಿಸುವ ಭರವಸೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್
ಉಡುಪಿ: ಉಡುಪಿಯ ಜನತೆಗೆ ಪರಿಸರ ಸ್ನೇಹಿ ಉದ್ಯಮಗಳನ್ನು ಸ್ಥಾಪಿಸಿ, ಇಲ್ಲೇ ಉದ್ಯೋಗ ದೊರಕಿಸಿಕೊಟ್ಟರೆ ಹೆತ್ತವರೂ ಬಹಳ ಸಂತೋಷದಿಂದ ಮಕ್ಕಳ ಜತೆಗೇನೆ ಬದುಕುತ್ತಾರೆ. ಈ ನಿಟ್ಟಿನಲ್ಲಿ ತಾನು ಶಾಸಕನಾದ ಬಳಿಕ ತೀವ್ರವಾಗಿ ಪ್ರಯತ್ನ ಮಾಡುವುದಾಗಿ ಮತದಾರರಿಗೆ ಭರವಸೆ ನೀಡಿದರು. ಕ್ಷೇತ್ರದಲ್ಲಿ ಉದ್ಯಮಗಳು ಬರಬೇಕಾದರೆ ಸುಸಜ್ಜಿತ ಮೂಲಭೂತ ಸೌಕರ್ಯಗಳೂ ಇರಬೇಕು ಅದಲ್ಲದೇ ಸಮಾಜದಲ್ಲಿ ಶಾಂತಿ ಸೌಹಾರ್ದತೆಯೂ ನೆಲೆಸಿರಬೇಕು, ಇವೆಲ್ಲವೂ ಸಾಧ್ಯ ಆಗಬೇಕಾದರೆ ಉಡುಪಿಯ ಜನ ತನಗೆ ಆಶೀರ್ವಾದ ಮಾಡಿ ಗೆಲ್ಲಿಸಬೇಕು ಎಂದು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ […]
ಕಾರ್ಕಳ: ಮೇ1ರಂದು ಕಾಂಗ್ರೆಸ್‌ನಿಂದ ರೋಡ್ ಶೋ; ಬೃಹತ್ ಸಮಾವೇಶ
ಕಾರ್ಕಳ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ಕಾಂಗ್ರೆಸ್ ಕಾಲ್ನಡಿಗೆ ಜಾಥಾ ಹಾಗೂ ಬೃಹತ್ ಸಮಾವೇಶವು ಮೇ 1 ಸೋಮವಾರದಂದು ನಡೆಯಲಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಸ್ವರಾಜ್ಯ ಮೈದಾನದಿಂದ ಪ್ರಾರಂಭಗೊಳ್ಳುವ ಬೃಹತ್ ಜಾಥವು ಬಂಡೀಮಠ ಬಸ್ ನಿಲ್ದಾಣದವರೆಗೆ ಕಾಲ್ನಡಿಗೆಯಲ್ಲಿ ರೋಡ್ ಶೋ ಮೂಲಕ ಸಾಗಿ ಬೃಹತ್ ಸಮಾವೇಶದೊಂದಿಗೆ ಸಮಾಪನಗೊಳ್ಳಲಿದೆ. ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯಿಲಿ, ಅಭ್ಯರ್ಥಿ ಮುನಿಯಾಲ್ ಉದಯ್ ಶೆಟ್ಟಿ, ಪ್ರಮುಖ ಭಾಷಣಕಾರ, ವಾಗ್ಮಿ ನಿಕೇತ್ ರಾಜ್ ಮೌರ್ಯ, […]
ಮುಂಡ್ಕೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮತದಾರರನ್ನು ಭೇಟಿ ಮಾಡಿದ ಸಚಿವ ಸುನಿಲ್ ಕುಮಾರ್
ಕಾರ್ಕಳ: ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ.ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದ ಮುಂಡ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಇಂದು ಭೇಟಿ ಮಾಡಿದರು. ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿದರ ಮೂಲಕ ಕಾರ್ಕಳವನ್ನು ಅಭಿವೃದ್ಧಿಗೊಳಿಸುವಂತೆ ಕೋರಿದರು.
ಜೆಇಇ ಮೈನ್ಸ್: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಸಾಧನೆ
ಹೆಮ್ಮಾಡಿ: ರಾಷ್ಟ್ರ ಮಟ್ಟದಲ್ಲಿ ನಡೆಯುವ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ ಮೈನ್ 2ನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಆಯುಷ್ ಭೌತಶಾಸ್ತ್ರದಲ್ಲಿ 97 ಪರ್ಸಂಟೈಲ್ ಪಡೆದು ಒಟ್ಟು96 ಪರ್ಸಂಟೈಲ್ ಪಡೆದಿರುತ್ತಾನೆ ಹಾಗೂ ಸುಮಂತ್ ರಸಾಯನಶಾಸ್ತ್ರದಲ್ಲಿ 99.12 ಪರ್ಸಂಟೈಲ್ ಪಡೆಯುವುದರ ಜೊತೆಗೆ ಒಟ್ಟು 96 ಪರ್ಸಂಟೈಲ್ ಪಡೆದಿರುತ್ತಾನೆ. ಹಾಗೆಯೇ ಓಂಕಾರ್ ಪ್ರಭು ಒಟ್ಟು 90.04 ಪರ್ಸಂಟೈಲ್, ಹರ್ಷಿತ್ ಖಾರ್ವಿ 88.17 ಪರ್ಸಂಟೈಲ್, ತನಿಷಾ 83.5 ಪರ್ಸಂಟೈಲ್ ಪಡೆದಿರುತ್ತಾರೆ. ಪರೀಕ್ಷೆಗೆ ಕುಳಿತ ಕಾಲೇಜಿನ […]