ಉಡುಪಿಯ ಯುವ ಜನತೆಯ ಉದ್ಯೋಗ ಸೃಷ್ಟಿಗೆ ಐ ಟಿ ಪಾರ್ಕ್ ಪ್ರಥಮ ಆದ್ಯತೆ : ಯಶ್‌ಪಾಲ್

ಉಡುಪಿ : ವಿದ್ಯಾವಂತರ ಜಿಲ್ಲೆಯಾಗಿ ಗುರುತಿಸಿಕೊಂಡಿರುವ ಉಡುಪಿಯ ಯುವ ಜನತೆಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಸೃಷ್ಟಿಗೆ ಪ್ರಥಮ ಆದ್ಯತೆ ನೀಡುವುದಾಗಿ ಬಿಜೆಪಿ ಅಭ್ಯರ್ಥಿ ಯಶ್‌ಪಾಲ್ ಸುವರ್ಣ ಹೇಳಿದರು. ಮಣಿಪಾಲ ಇಂಡಸ್ಟಿಯಲ್ ಏರಿಯಾದಲ್ಲಿ ವಿವಿಧ ಘಟಕಗಳಿಗೆ ಭೇಟಿ ನೀಡಿ ಸಿಬಂದಿಗಳಲ್ಲಿ ಮತ ಯಾಚನೆ ಮಾಡಿ ಮಾತನಾಡಿದರು. ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಿಂದ ಉಡುಪಿಯಲ್ಲಿ ಐ ಟಿ ಪಾರ್ಕ್ ಸ್ಥಾಪನೆಗೆ ವಿಶೇಷ ಕಾರ್ಯ ಯೋಜನೆ ರೂಪಿಸಿದ್ದು ಈ ಮೂಲಕ ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಮುಂಚೂಣಿಯ ಐ ಟಿ ಹಬ್ […]
ಮತದಾನ ಜಾಗೃತಿಗಾಗಿ ಪ್ರಜ್ಞಾವಂತರಿಗೊಂದು ಸವಾಲ್ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆ: ಆಕರ್ಷಕ ಬಹುಮಾನ ಗೆಲ್ಲುವ ಅವಕಾಶ

ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾ ಸ್ವೀಪ್ ಸಮಿತಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ರಸಪ್ರಶ್ನೆ ಸ್ಪರ್ಧೆ ಮೂಲಕ ಮತದಾರರಿಗೆ ಚುನಾವಣೆಯಲ್ಲಿ ಭಾಗವಹಿಸುವ ಬಗ್ಗೆ ಆಸಕ್ತಿ ಮೂಡಿಸುವ ಕಾರ್ಯ ಮಾಡುತ್ತಿದೆ. ಸ್ವೀಪ್ ಸಮಿತಿಯ ಕಾರ್ಯಕ್ರಮಗಳ ಮಾಹಿತಿಗೆಂದೇ ರೂಪಿಸಿರುವ ಇ-ಪತ್ರಿಕೆಯಲ್ಲಿ , ಚುನಾವಣೆಯ ಬಗ್ಗೆ ನಿಮಗೆಷ್ಟು ತಿಳಿದಿದೆ ಎಂಬ ವಿಷಯದ ಬಗ್ಗೆ, ಪ್ರಜ್ಞಾವಂತರಿಗೊಂದು ಸವಾಲ್ ಎಂಬ ಕುತೂಹಲಕಾರಿ ಪಶ್ನೆಗಳನ್ನು ಒಳಗೊಂಡ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾವಹಿಸುವವರು ಪ್ರತಿದಿನ […]
ಇಂದಿರಾ ಎಜುಕೇಶನ್ ಟ್ರಸ್ಟ್ ಅಧೀನ ಕಾಲೇಜುಗಳ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ

ಮಂಗಳೂರು: ನಗರದ ಫಳ್ನೀರ್ ನಲ್ಲಿರುವ ಇಂದಿರಾ ಎಜುಕೇಶನ್ ಟ್ರಸ್ಟ್ ಇದರ ಅಧೀನ ಕಾಲೇಜುಗಳ ಪದವಿ ದಿನವನ್ನು ಎಪ್ರಿಲ್ 29 ಶನಿವಾರದಂದು ಮಂಗಳೂರಿನ ಮಿಲಾಗ್ರಿಸ್ ಜುಬಿಲಿ ಹಾಲ್‌ನಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ.ಎನ್.ರಾಮಕೃಷ್ಣರೆಡ್ಡಿ, ಗೌರವ ಅತಿಥಿಗಳಾಗಿ ಪ್ರೊ.ಡಾ.ಯು.ಟಿ. ಇಫ್ತಿಕರ್ ಅಲಿ, ಮಾಜಿ ಸಿಂಡಿಕೇಟ್ ಸದಸ್ಯ, ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ಬೆಂಗಳೂರು ಇವರು ಆಗಮಿಸಿದ್ದರು. ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಗ್ರೀಶಾ ಜೋಸ್; ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲೆ ಡಾ.ಎನ್. […]
ದೊಡ್ಡಣ್ಣಗುಡ್ಡೆ: ಮೇ. 4 ರಂದು ಶ್ರೀದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ನವೀಕೃತ ನಾಗಾಲಯದ ಪುನ: ಪ್ರತಿಷ್ಠಾ ಮಹೋತ್ಸವ

ಉಡುಪಿ: ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ನಾಗಾಲಯದಲ್ಲಿ ಸಪರಿವಾರ ನಾಗದೇವರ ಪುನ: ಪ್ರತಿಷ್ಠೆ ಮೇ 4 ರಂದು ನೆರವೇರಲಿದೆ. ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ವೇದಮೂರ್ತಿ ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿದೆ. ಆ ಪ್ರಯುಕ್ತ ಮೇ 3ರ ಸಂಜೆ ಗಂಟೆ 5 ರಿಂದ ತೋರಣ ಉಗ್ರಾಣ ಮುಹೂರ್ತ, ವಾಸ್ತು ರಾಕ್ಷೋಜ್ಞಾದಿ ಪ್ರಕ್ರಿಯೆ, ಸಪರಿವಾರ ನಾಗ ಬಿಂಬ, ಆದಿ ವಾಸ ಪ್ರಕ್ರಿಯೆ, ಮೇ 4ರ […]
ಭಾರತೀಯ ಜನತಾ ಪಕ್ಷದ ‘ಪ್ರಜಾ ಪ್ರಣಾಳಿಕೆ’ ಬಿಡುಗಡೆ: ಬಿಪಿಎಲ್ ಕುಟುಂಬಕ್ಕೆ ನಂದಿನಿ ಹಾಲು; ವರ್ಷಕ್ಕೆ ಮೂರು ಉಚಿತ ಸಿಲಿಂಡರ್ ಘೋಷಣೆ

ಬೆಂಗಳೂರು: ಚುನಾವಣೆಗೆ ಇನ್ನು ಒಂಭತ್ತು ದಿನಗಳು ಬಾಕಿ ಉಳಿದಿದ್ದು, ಭಾರತೀಯ ಜನತಾ ಪಕ್ಷವು ತನ್ನ ಚುನಾವಣಾ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇಂದು ಬಿಜೆಪಿ ರಾಷ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರಣಾಳಿಕೆಯನ್ನು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಜೆಪಿ ನಡ್ಡಾ ಅವರೊಂದಿಗೆ ಪಕ್ಷದ ನಾಯಕರು ಭಾಗಿಯಾದರು. ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ ಮೂರು ಅಡುಗೆ ಅನಿಲ ನೀಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿದೆ. ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಹಾಗೂ ದೀಪಾವಳಿ ಹಬ್ಬದಂದು ಮೂರು ಸಿಲಿಂಡರ್ಗಳನ್ನು […]