ಭಜರಂಗ ದಳ ಬ್ಯಾನ್ ಮಾಡುವ ಯೋಚನೆ? ಕಾಂಗ್ರೆಸ್ ನ ಮಾನಸಿಕತೆಯನ್ನು ತೋರಿಸುತ್ತೆ: ವಿ.ಸುನಿಲ್ ಕುಮಾರ್

ಮಂಗಳೂರು: ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ವಿಚಾರ ಪ್ರಸ್ತಾಪವಾಗಿರುವುದು ರಾಜ್ಯಾದ್ಯಂತ ತೀವ್ರ ವಿವಾದ ಸೃಷ್ಟಿಸಿದ್ದು, ಇಂಧನ ಸಚಿವ ವಿ.ಸುನಿಲ್ ಕುಮಾರ್ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಜರಂಗದಳ ನಿಷೇಧದ ಮೂಲಕ ರಾಷ್ಟ್ರಭಕ್ತಿಯ ನಿಷೇಧಕ್ಕೆ ಕಾಂಗ್ರೆಸ್ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧ ಪ್ರಸ್ತಾಪ ಮಾಡುವ ಮೂಲಕ ಕಾಂಗ್ರೆಸ್ ಹಿಂದು ಭಾವನೆಯನ್ನು ಕೆಣಕಿದೆ. ಇದು ಕಾಂಗ್ರೆಸ್ ನಾಯಕರ ಮಾನಸಿಕತೆಯನ್ನು ತೋರಿಸುತ್ತದೆ. ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿಯನ್ನು ಇದೇ ಡಿ.ಕೆ.ಶಿವಕುಮಾರ್ ಈ ಹಿಂದೆ […]

ಗೆದ್ದಲು ತಿನ್ನುತ್ತಿರುವ 2000 ಮನೆ ನಿವೇಶನದ ಅರ್ಜಿಗಳನ್ನು ಮತ್ತೆ ಓಪನ್ ಮಾಡ್ತಿನಿ: ಸೊರಕೆ

ಉಡುಪಿ: ನಾನು ಶಾಸಕನಾಗಿದ್ದ ಕಾಲದಲ್ಲಿ 94 ಸಿ ಕಾನೂನು ಮತ್ತು ಅಕ್ರಮ‌ ಸಕ್ರಮ ಯೋಜನೆಯಡಿ 2 ಸಾವಿರ ಅರ್ಜಿಯನ್ನು ಈ ಭಾಗದಲ್ಲಿ ಶಿಫಾರಸು ಮಾಡಿದ್ದೇನೆ..‌ನಾನು‌ ಶಿಫಾರಸು ಮಾಡಿದ ಅರ್ಜಿಯನ್ನು ಸಂಪೂರ್ಣ ವಾಗಿ ತಿರಸ್ಕರಿಸಲಾಗಿದೆ ಅಂತಾ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಪೆರ್ಡೂರು ಪೇಟೆಯಲ್ಲಿ‌ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ನಾನು ಶಿಫಾರಸು ಮಾಡಿದ ಎಲ್ಲಾ ಅರ್ಜಿಗಳು ಗೆದ್ದಲು ಹಿಡಿದಿದ್ದು ಅರ್ಜಿಯ ಕಟ್ಟನ್ನು ಮತ್ತೆ ಓಪನ್ ಮಾಡಿ ಅದಕ್ಕೆ ಮರು‌ಜೀವ ಕೊಟ್ಟು ಬಡವರಿಗೆ ಮನೆ ಮಂಜೂರಾತಿ ಮಾಡುವ […]

ʼದಿ ಕೇರಳ ಸ್ಟೋರಿʼಗೆ ʼಎʼ ಸರ್ಟಿಫಿಕೇಟ್:‌10 ದೃಶ್ಯಗಳಿಗೆ ಕತ್ತರಿ ಹಾಕಿದ ಸೆನ್ಸಾರ್‌ ಬೋರ್ಡ್

ಕೊಚ್ಚಿ: ಕಳೆದ ವರ್ಷ ಟೀಸರ್‌ ರಿಲೀಸ್‌ ಆದಾಗಿನಿಂದಲೂ ಭಾರೀ ಸದ್ದು ಮಾಡಿದ ʼದಿ ಕೇರಳ ಸ್ಟೋರಿʼ ಇತ್ತೀಚೆಗೆ ಟ್ರೇಲರ್‌ ಮೂಲಕ ದೇಶದ ಗಮನ ಸೆಳೆದಿದೆ. ಇನ್ನೇನು ಸಿನಿಮಾ ತೆರೆಗೆ ಬರಲು ದಿನಗಣನೆ ಬಾಕಿ ಉಳಿದಿದೆ. ರಿಲೀಸ್‌ ಗೂ ಮುನ್ನ ಚಿತ್ರದ ಬಗ್ಗೆ ಪರ – ವಿರೋಧ ಮಾತುಗಳು ಕೇಳಿ ಬರುತ್ತಿದೆ. ಸುದೀಪ್ತೋ ಸೆನ್‌ ನಿರ್ದೇಶನದ ಸಿನಿಮಾಕ್ಕೆ ಕೇರಳದಲ್ಲೇ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಸಿನಿಮಾ ನಿಷೇಧ ಮಾಡುವಂತೆ ಸಿಪಿಎಂ ನೇತೃತ್ವದ ಎಲ್‌ಡಿಎಫ್, ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ಒತ್ತಾಯಿಸುತ್ತಿವೆ. ಇದರ ಜತೆಗೆ […]

Belthangadi; ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಮಹಾ ಸಂಪರ್ಕ ಅಭಿಯಾನ ಯಶಸ್ವಿ

ಬೆಳ್ತಂಗಡಿ: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಹಮ್ಮಿಕೊಂಡಿದ್ದ ಮಹಾ ಸಂಪರ್ಕ ಅಭಿಯಾನದಡಿ ಬೆಳ್ತಂಗಡಿ ಮಂಡಲದಲ್ಲಿ ಬಿಜೆಪಿ ಅಭ್ಯರ್ಥಿ, ಶಾಸಕ ಹರೀಶ್‌ ಪೂಂಜ ಅವರ ಪರ 20 ಸಾವಿರ ಕಾರ್ಯಕರ್ತರು 50 ಸಾವಿರ ಮನೆಗಳನ್ನು ಸಂಪರ್ಕಿಸುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಿದರು. ಬೆಳ್ತಂಗಡಿ ಮಂಡಲದ 81 ಗ್ರಾಮಗಳ 241 ಬೂತ್‌ಗಳಲ್ಲಿ ಮಹಾಸಂಪರ್ಕ ಅಭಿಯಾನ ಹಮ್ಮಿಕೊಂಡಿದ್ದು ಮತದಾರರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಯಿತು. ಒಂದೇ ದಿನ 20 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಉತ್ಸುಕತೆಯಿಂದ ಪಾಲ್ಗೊಂಡು 50 ಸಾವಿರಕ್ಕೂ ಅಧಿಕ ಮನೆಗಳಿಗೆ ಭೇಟಿ […]

ಮೇ 3 ರಂದು ಸಾರಿಗೆ ಕೆ.ಎಸ್.ಆರ್.ಟಿಸಿ ಬಸ್ ಕಾರ್ಯಾಚರಣೆಯಲ್ಲಿ ವ್ಯತ್ಯಯ

ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಂಗಳೂರು ವಿಭಾಗದ ಬಸ್‌ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಮೇ 3 ರಂದು ಅಂಕೋಲದ ಹಟ್ಟಿಕೇರಿಯಲ್ಲಿ ನಡೆಯುವ ಪ್ರಧಾನಮಂತ್ರಿಗಳ ಕಾರ್ಯಕ್ರಮಕ್ಕೆ ನಿಯೋಜಿಸಲಾಗಿರುವುದರಿಂದ, ಸದ್ರಿ ದಿನದಂದು ಮಂಗಳೂರು ವಿಭಾಗ ವ್ಯಾಪ್ತಿಯ ಉಡುಪಿ, ಕಾರ್ಕಳ, ಕುಂದಾಪುರ, ಸಿದ್ಧಾಪುರ, ಬೈಂದೂರು ಹಾಗೂ ಭಟ್ಕಳ ವಲಯ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಪ್ರಯಾಣಿಕರು ಕ.ರಾ.ರ.ಸಾ.ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.