ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಜಿಲ್ಲೆಯ ಅಂಜಾರು ಗ್ರಾಮದ ಕಾಜಾರಗುತ್ತು ಶ್ರೀನಿವಾಸ ನಗರ ನಿವಾಸಿ ವೆಂಕಟರಮಣ ನಾಯಕ್ (50) ಎಂಬ ವ್ಯಕ್ತಿಯು ಏಪ್ರಿಲ್ 28 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಬಿಳಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಮಾತಿನ ಚಕಮಕಿ ಪ್ರಕರಣ: ಪಂದ್ಯದ ಶುಲ್ಕದ 100% ದಂಡ ವಿಧಿಸಿದ ಬಿಸಿಸಿಐ

ಸೋಮವಾರ ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ವಿರಾಟ್ ಕೊಹ್ಲಿ, ಗೌತಮ್ ಗಂಭೀರ್ ಮತ್ತು ನವೀನ್-ಉಲ್-ಹಕ್ ವಿರುದ್ಧ ಬಿಸಿಸಿಐ ಕಠಿಣ ಕ್ರಮ ಕೈಗೊಂಡಿದೆ. ಕೊಹ್ಲಿ, ಗಂಭೀರ್ ಅವರು ಲೆವೆಲ್ 2 ಅಪರಾಧದಲ್ಲಿ ತಪ್ಪಿತಸ್ಥರೆಂದು ಕಂಡುಬಂದ ನಂತರ ಅವರ ಪಂದ್ಯದ ಶುಲ್ಕದ 100% ದಂಡವನ್ನು ವಿಧಿಸಲಾಯಿತು. ನವೀನ್-ಉಲ್-ಹಕ್ ಅವರ ಲೆವೆಲ್ 1 ಅಪರಾಧಕ್ಕಾಗಿ ತಮ್ಮ ಪಂದ್ಯದ ಶುಲ್ಕದ 50% ರಷ್ಟನ್ನು ಕಳೆದುಕೊಂಡರು. […]

ಮಂಗಳೂರು ವಿಮಾನ ನಿಲ್ದಾಣದ ಇಂಟಿಗ್ರೇಟೆಡ್ ಕಾರ್ಗೋ ಟರ್ಮಿನಲ್ ಕಾರ್ಯಾರಂಭ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ತನ್ನ ಇಂಟಿಗ್ರೇಟೆಡ್ ಕಾರ್ಗೋ ಟರ್ಮಿನಲ್ (ICT) ಅನ್ನು ಸೋಮವಾರ, ಮೇ 1 ರಂದು ಸಾರ್ವಜನಿಕ ಬಳಕೆಗಾಗಿ ಮುಕ್ತಗೊಳಿಸಿದೆ. 1,891 ಚದರ ಮೀಟರ್ ವಿಸ್ತೀರ್ಣದಲ್ಲಿ 1,200 ಚದರ ಮೀಟರ್ ವಿಸ್ತೀರ್ಣವನ್ನು ಅಂತರರಾಷ್ಟ್ರೀಯ ಸರಕು ಮತ್ತು ಉಳಿದವು ದೇಶೀಯ ಸರಕುಗಳಿಗಾಗಿ ಮೀಸಲಿಡಲಾಗಿದೆ. ಐಸಿಟಿ ವರ್ಷಕ್ಕೆ 9,000 ಟನ್‌ಗಳಷ್ಟು ಅಂತರರಾಷ್ಟ್ರೀಯ ಮತ್ತು ದೇಶೀಯ ಸರಕುಗಳನ್ನು ನಿರ್ವಹಿಸುತ್ತದೆ. ಪ್ರಾರಂಭದ ದಿನದಂದು ದೇಶೀಯ ಒಳಬರುವ ಮತ್ತು ಹೊರಹೋಗುವ ಸರಕುಗಳನ್ನು ನಿರ್ವಹಿಸುವ ಮೂಲಕ ವಿಮಾನನಿಲ್ದಾಣವು ಐಸಿಟಿಯಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. […]

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಸಂಸ್ಥಾಪಕರ ದಿನದ ಆಚರಣೆ ..!!

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಡಾ ಟಿ ಎಂ ಎ ಪೈ ಅವರ 125ನೇ ಜನ್ಮ ದಿನದ ಅಂಗವಾಗಿ ಸಂಸ್ಥಾಪಕರ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೆ ಎಂ ಸಿ ಡೀನ್ ಡಾ ಡಾ ಪದ್ಮರಾಜ್ ಹೆಗ್ಡೆ, ಮಾಹೆ ಮಣಿಪಾಲದ ಭೋದನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ ಆನಂದ್ ವೇಣುಗೋಪಾಲ್, ವೈದ್ಯಕೀಯ ಅಧೀಕ್ಷಕರಾದ ಡಾ ಅವಿನಾಶ ಶೆಟ್ಟಿ , ವೈದ್ಯರುಗಳು, ಆಡಳಿತ ಸಿಬ್ಬಂದಿಗಳು, ದಾದಿಯರು ಸೇರಿದಂತೆ ಅನೇಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಎನ್‌ಸಿಪಿ ಪಕ್ಷದ ಅಧ್ಯಕ್ಷ ಸ್ಥಾನದಿಂದ ನಿವೃತ್ತಿ, ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಶರದ್ ಪವಾರ್ ಘೋಷಣೆ

ಮುಂಬಯಿ: ಅನುಭವಿ ಹಾಗ್ಊ ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ಮಂಗಳವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಎರಡು ದಶಕಗಳ ಹಿಂದೆ ತಾವೇ ಕಟ್ಟಿ ಬೆಳೆಸಿದ ಪಕ್ಷದ ಚುಕ್ಕಾಣಿಯನ್ನು ಈ ಮೂಲಕ ಬಿಟ್ಟುಕೊಟ್ಟರು. ನಾನು ಎನ್‌ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ಪವಾರ್ ತಮ್ಮ ಆತ್ಮಚರಿತ್ರೆಯ ‘ಲೋಕ್ ಮಾಝೆ ಸಂಗತಿ’ಯ ಎರಡನೇ ಆವೃತ್ತಿಯ ಬಿಡುಗಡೆ ಸಮಾರಂಭದಲ್ಲಿ ಹೇಳಿದರು. ಮಹಾರಾಷ್ಟ್ರ ರಾಜಕೀಯದ ಧೀಮಂತ ನಾಯಕ, 82 ವರ್ಷದ ಪವಾರ್ ಅವರು ಇನ್ನು ಮುಂದೆ […]