ಕಾಪು: ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದ ಚಿತ್ರನಟಿ ತಾರ

ಕಾಪು: ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಾಲಯಕ್ಕೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಪಕ್ಷದ ಸ್ಟಾರ್ ಪ್ರಚಾರಕಿ ತಾರ ಭೇಟಿ ನೀಡಿದರು. ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ಪಕ್ಷದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಅಧಿಕಾರಕ್ಕೆ ಬಂದರೆ 94 ಸಿ ಅರ್ಜಿಗಳಿಗೆ ಮರುಜೀವ: ವಿನಯ್ ಕುಮಾರ್ ಸೊರಕೆ

ಉಡುಪಿ: ಶಾಸಕನಾಗಿದ್ದ ಕಾಲದಲ್ಲಿ ಶಿಫಾರಸು ಮಾಡಿದ್ದ 94 ಸಿ ಅರ್ಜಿಗಳು ಗೆದ್ದಲು ಹಿಡಿದಿದ್ದು ಅವುಗಳಿಗೆ ಮರುಜೀವ ಕೊಟ್ಟು ಬಡವರಿಗೆ ಮನೆ ಮಂಜೂರಾತಿ ಮಾಡುವ ಕೆಲಸವನ್ನು ಮಾಡಲಾಗುವುದು. 94 ಸಿ ಕಾನೂನು ಮತ್ತು ಅಕ್ರಮ ಸಕ್ರಮ ಯೋಜನೆಯಡಿ 2 ಸಾವಿರ ಅರ್ಜಿಗಳನ್ನು ಶಿಫಾರಸು ಮಾಡಿದ್ದರೂ ಅವುಗಳನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ ಎಂದು ಕಾಪು ವಿಧನಾಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಹೇಳಿದರು. ಮೇ.1 ರಂದು ಪೆರ್ಡೂರು ಪೇಟೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ರಸ್ತೆ […]
ಗೂಡ್ಸ್ ರಿಕ್ಷಾ ಢಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ..!!

ಉಡುಪಿ: ಗೂಡ್ಸ್ ರಿಕ್ಷಾ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಸಂತೆಕಟ್ಟೆಯ ಮಹೇಶ್ ಕೋತ್ವಾಲ್ ಕೆ.ಅವರು ಮನೆಯಿಂದ ಉಡುಪಿ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿರುವಾಗ ಪುತ್ತೂರು ಗ್ರಾಮದ ಗೋಪಾಲಪುರ ಬಳಿ ಗೂಡ್ಸ್ ರಿಕ್ಷಾ ಚಾಲಕ ಕರುಣಾಕರ ಮೂಲ್ಯ ತನ್ನ ರಿಕ್ಷಾವನ್ನು ಅತೀ ವೇಗದಿಂದ ಚಲಾಯಿಸಿಕೊಂಡು ಬಂದು ಢಿಕ್ಕಿ ಹೊಡೆದಿದ್ದಾರೆ. ಈ ವೇಳೆ ಅವರು ಸ್ಕೂಟರ್ ಸಹಿತ ಕೆಳಕ್ಕೆ ಬಿದ್ದಿದ್ದಾರೆ. ತತ್‌ಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರಾವಳಿ ತೀರದಲ್ಲಿ ಅಂತರ್ಜಲ ನಿಕ್ಷೇಪಗಳ ಪತ್ತೆ, ಮಣಿಪಾಲ ಸಂಶೋಧಕರಿಂದ ಅನ್ವೇಷಣೆ..!!

ಉಡುಪಿ : ಎಂ.ಐ.ಟಿ ಮಣಿಪಾಲದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಡಾ. ಕೆ. ಬಾಲಕೃಷ್ಣ, ಡಾ. ಹೆಚ್. ಎನ್. ಉದಯಶಂಕರ್ ಹಾಗೂ ಸಂಶೋಧನಾ ವಿದ್ಯಾರ್ಥಿ ಶ್ರೀ ಲಿನೋ ಯೋವನ್ ನೇತೃತ್ವದ ಸಂಶೋಧನಾ ತಂಡವು, ಉಡುಪಿ ಜಿಲ್ಲೆಯ ಬೀಜಾಡಿ, ಕಾಪು, ಮಲ್ಪೆ, ಬೈಂದೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಕಡಲ ತೀರದಲ್ಲಿ ದೊಡ್ಡ ಪ್ರಮಾಣದಲ್ಲಿ, ಅಂತರ್ಜಲವು ಒರತೆಯ ರೂಪದಲ್ಲಿ ಅರಬ್ಬಿ ಸಮುದ್ರದೆಡೆಗೆ ಹೊರಸೂಸುವುದನ್ನು ವರದಿ ಮಾಡಿದ್ದಾರೆ. ಅವರ ಸಂಶೋಧನೆಯು ನೆದರ್ಲ್ಯಾಂಡ್ ಮೂಲದ ಎಲೆವಿಯರ್ ಪ್ರಕಟಿತ ವೈಜ್ಞಾನಿಕ ನಿಯತಕಾಲಿಕ “ಜರ್ನಲ್ […]
ಕರಾವಳಿ ಭಾಗದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ: ಕಡಲತೀರದಲ್ಲಿ ಬಿಗಿ ಭದ್ರತೆ…!!

ಉಡುಪಿ: ಕರಾವಳಿಯ ಭಾಗದಲ್ಲಿ ಮೇ 3ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಗಸ್ತು ಕಾರ್ಯಾಚರಣೆ ಹೆಚ್ಚಿಸಲಾಗಿದೆ. ಪ್ರಧಾನಿಯವರು ಮೂಲ್ಕಿ ಸಮೀಪದ ಕೊಳ್ನಾಡು ಹಾಗೂ ಬಳಿಕ ಅಂಕೋಲಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಹೆಚ್ಚುವರಿ ಭದ್ರತೆಗಾಗಿ ಕೋಸ್ಟ್‌ಗಾರ್ಡ್ ಹಾಗೂ ಕರಾವಳಿ ಕಾವಲು ಪಡೆಯ 200 ಸಿಬಂದಿ, 200 ಮಂದಿ ಪೊಲೀಸರು ಹಾಗೂ ಇತರ 50 ಮಂದಿ ಕಡಲತೀರ ಹಾಗೂ ಸಮುದ್ರದಲ್ಲಿ ಗಸ್ತು ನಿರತರಾಗಿದ್ದಾರೆ. ಸೋಮವಾರದಿಂದಲೇ ಸಮುದ್ರದಲ್ಲಿ ಹಲವು ಬಾರಿ ಗಸ್ತು ಕಾರ್ಯಾಚರಣೆ ನಡೆದಿದ್ದು, ಗುರುವಾರದವರೆಗೂ ಮುಂದುವರಿಸಲು […]