ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಸದ್ದು ಮಾಡ್ತಿದ್ದಾರೆ ಬಿಜೆಪಿಯ ಹೊಸ ಮುಖ‌ ಗುರ್ಮೆ ಸುರೇಶ್ ಶೆಟ್ಟಿ

ಚುನಾವಣಾ ಪ್ರಚಾರ ರಂಗೇರುತ್ತಿದ್ದಂತೆ, ಚುನಾವಣೆಯ ಅಖಾಡಕ್ಕಿಳಿದಿರುವ ಅಭ್ಯರ್ಥಿಗಳ ಕುರಿತು ಶೋಧಿಸುವ ಕಾರ್ಯ, ಅವರ ಸಾಧನೆಗಳ ಮೈಲುಗಲ್ಲುಗಳ, ಭರವಸೆಯ ಮಾತುಗಳನ್ನು ಮತದಾರರ ಎದುರು ಬಿಚ್ಚಿಡುವ ಕೆಲಸವೂ ರಂಗು ಪಡೆಯುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಹೊಸಬರಿಗೆ ಟಿಕೆಟ್ ನೀಡುವ ಮೂಲಕ ಹೊಸ ಪರೀಕ್ಷೆಗೆ ಸಜ್ಜಾಗುತ್ತಿದೆ. ಸುರೇಶ್ ಶೆಟ್ಟಿ ಅವರ ಬಗ್ಗೆ: ಸಮಾಜ ಸೇವಕರಾಗಿರುವ ಸುರೇಶ ಶೆಟ್ಟಿ ಗುರ್ಮೆ ಅವರು ಒಬ್ಬ ಮಾದರಿ ರಾಜಕಾರಣಿ ಎಂದೇ ಹೇಳಬಹುದಾಗಿದೆ. ರಾಜಕೀಯ ಮಾತ್ರವಲ್ಲದೇ ಉತ್ತಮ ವಾಕ್ಚಾತುರ್ಯ ಹೊಂದಿರುವ […]

ಸಚಿವ ಸುನಿಲ್ ಕುಮಾರ್ ಮುನಿಯಾಲು, ಬೆಳ್ಮಣ್ ಮತ್ತು ಕೆರ್ವಾಶೆ ಗ್ರಾಮಗಳಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗಿ

ಕಾರ್ಕಳ: ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ.ಸುನಿಲ್ ಕುಮಾರ್ ಕಾರ್ಕಳ ವಿಧಾನಸಭಾ ಕ್ಷೇತ್ರದ ಮುನಿಯಾಲು, ಬೆಳ್ಮಣ್ ಮತ್ತು ಕೆರ್ವಾಶೆ ಗ್ರಾಮಗಳಲ್ಲಿ ಮೇ.2 ರಂದು ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗಿಯಾದರು. ಅವರು ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿದರ ಮೂಲಕ ಕಾರ್ಕಳವನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವಂತೆ ಕೋರಿದರು.

ಕಾಂಗ್ರೆಸ್ ಈ ಬಾರಿ ದೊಡ್ಡಮಟ್ಟದಲ್ಲಿ ಗೆಲ್ಲಲಿದೆ: ಪ್ರಸಾದ್ ರಾಜ್ ಕಾಂಚನ್

ಉಡುಪಿ: ಇಂದು ಕಾಂಗ್ರೆಸ್ ಗೆ ಪೂರಕ ವಾತಾವರಣವಿದೆ. ಕಾಂಗ್ರೆಸ್‌ ಗೆಲುವಿಗೆ ಈ ಬಾರಿ ದೊಡ್ಡಮಟ್ಟದಲ್ಲಿ ಅವಕಾಶವಿದೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಅವರು ಮಂಗಳವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್‌ ನ ಬೂತ್ ಅಧ್ಯಕ್ಷರ ಮತ್ತು ಬಿ ಎಲ್ ಎ 2 ಮತ್ತು ಉಸ್ತುವಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ಲೋಕಸಭಾ ಸದಸ್ಯ ಮತ್ತು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಉಸ್ತುವಾರಿಗಳಾದ ಪ್ರತಾಪನ್, ಕೇರಳ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನೌಷಾದ್, […]

ಬಿಜೆಪಿ-ಕಾಂಗ್ರೆಸ್ ಚುನಾವಣಾ ಕದನ ತಾರಕಕ್ಕೆ: ಬಜರಂಗ ದಳ ನಿಷೇಧ ಪ್ರಸ್ತಾಪಕ್ಕೆ ಎಲ್ಲೆಡೆ ಆಕ್ರೋಶ; ಸಾಮಾಜಿಕ ಜಾಲತಾಣದಲ್ಲಿ ಭಜರಂಗಿ ಕ್ಯಾಂಪೇನ್ ವೈರಲ್!

ಬೆಂಗಳೂರು: ಬಿಜೆಪಿ-ಕಾಂಗ್ರೆಸ್ ಮಧ್ಯೆ ಚುನಾವಣಾ ಕದನ ತಾರಕ್ಕೇರಿದ್ದು, ಮಂಗಳವಾರದಂದು ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತ್ತು. ತನ್ನ ಪ್ರಣಾಳಿಕೆಯಲ್ಲಿ ಪಿ.ಎಫ್.ಐ ಮತ್ತು ಬಜರಂಗದಳವನ್ನು ಸಮೀಕರಿಸಿದ್ದ ಕಾಂಗ್ರೆಸ್ ಈ ಸಂಘಟನೆಗಳಿಗೆ ನಿಷೇಧ ಹೇರುವ ಬಗ್ಗೆ ಘೋಷಣೆ ಮಾಡಿತ್ತು. ಇದರಿಂದ ಆಕ್ರೋಶಗೊಂಡ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದಂತಹ ಹಿಂದೂ ಪರ ಸಂಘಟನೆಗಳು ಕಾಂಗ್ರೆಸ್ ವಿರುದ್ದ ಕಿಡಿಕಾರಿವೆ. ಕಾಂಗ್ರೆಸ್‌ ನ ಬಜರಂಗದಳ ನಿಷೇಧ ಭರವಸೆಗೆ ಇತ್ತ ಬಿಜೆಪಿ ನಾಯಕರು ಕೂಡಾ ಸಿಡಿದೆದ್ದಿದ್ದಾರೆ. ತಮ್ಮ ಪ್ರೊಫೈಲ್ ಫೋಟೋ, ವಾಟ್ಸಪ್, ಫೇಸ್‌ಬುಕ್ ಸ್ಟೇಟಸ್‌ಗಳಲ್ಲಿ […]

ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಶಾಸಕರೊಂದಿಗೆ ಮಣಿಪಾಲ ಶಿಕ್ಷಣ ಸಂಸ್ಥೆ ಹಾಗೂ ಖಾಸಗಿ ಕೈಗಾರಿಕಾ ಸಂಸ್ಥೆಗಳಿಗೆ ಭೇಟಿ..

ಉಡುಪಿ: ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಅವರು ಉಡುಪಿ ಶಾಸಕರೊಂದಿಗೆ ಮಣಿಪಾಲ ಶಿಕ್ಷಣ ಸಂಸ್ಥೆ ಹಾಗೂ ಖಾಸಗಿ ಕೈಗಾರಿಕಾ ಸಂಸ್ಥೆಗಳಿಗೆ ಭೇಟಿ ಮಾಡಿದರು. ಬರುವ ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿದರ ಮೂಲಕ ಉಡುಪಿ ಕ್ಷೇತ್ರವನ್ನು ಅಭಿವೃದ್ಧಿಗೊಳಿಸುವಂತೆ ಕೋರಿದರು.