ಕಾಂಗ್ರೆಸ್ ನಾಯಕರಿಂದ ಕೀಳು ಅಭಿರುಚಿಯ ಪ್ರದರ್ಶನ: ಕಾರ್ಕಳ ಬಿಜೆಪಿ

ಕಾರ್ಕಳ: ಕಾಂಗ್ರೆಸ್ ಪಕ್ಷದ ನಾಯಕರ ಹಿಂದೂ ವಿರೋಧಿ ಮಾನಸಿಕತೆಗೆ ಇನ್ನೊಂದು ಪುರಾವೆ ನಿನ್ನೆ ಸಿಕ್ಕಿದೆ. ಕಾಂಗ್ರೆಸ್ ಪಕ್ಷದ ನಾಯಕರಾದ ದಿನೇಶ್ ಗುಂಡೂರಾವ್ ಅವರು ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಬೇಕು ಎಂದು ಹೇಳಿ ಕಾಂಗ್ರೆಸ್ ಹಿಂದೂ ದ್ವೇಷದ ಬೆಂಕಿಗೆ ತುಪ್ಪ ಹಾಕಿದ್ದಾರೆ. ಸೋಲಿನ ಭೀತಿಯಲ್ಲಿ ಇರುವ ಕಾಂಗ್ರೆಸ್ ನಾಯಕರು ಇಂತಹ ಕೀಳು ಅಭಿರುಚಿಯ ಮಾತುಗಳನ್ನು ಆಡುತ್ತಿರುವುದನ್ನು ಕರ್ನಾಟಕದ ಪ್ರಜ್ಞಾವಂತ ಮತದಾರರು ತುಂಬಾ ಎಚ್ಚರಿಕೆಯಿಂದ ಗಮನಿಸುತ್ತಿದ್ದಾರೆ. ಯೋಗಿ ಆದಿತ್ಯನಾಥ್ ಅವರು ಭಾರತದ ಸಂತ ಪರಂಪರೆಯ ಒಂದು ಪ್ರಮುಖ […]

ಮೇ 6 ರಂದು ಕಾರ್ಕಳಕ್ಕೆ ಆಗಮಿಸಲಿರುವ ಯೋಗಿ ಆದಿತ್ಯನಾಥ್‌

ಕಾರ್ಕಳ: ಹಿಂದುತ್ವದ ಫಯರ್‌ ಬ್ರಾಂಡ್‌ ಲೀಡರ್‌, ಬಿಜೆಪಿ ಬತ್ತಳಿಕೆಯಲ್ಲಿರುವ ಟ್ರಂಪ್‌ ಕಾರ್ಡ್‌ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕರ್ನಾಟಕದಲ್ಲಿ ಇನ್ನೊಂದು ಸುತ್ತಿನ ಪ್ರಚಾರ ಕೈಗೊಳ್ಳಲಿದ್ದು, ಮೇ. 6ರಂದು ಕಾರ್ಕಳಕ್ಕೆ ಅಗಮಿಸಲಿದ್ದಾರೆ. ಮೇ 6ರಂದು ಇಡೀ ದಿನ ಯೋಗಿ ಆದಿತ್ಯನಾಥ್‌ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ. ಚಿಕ್ಕಮಗಳೂರು, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಮಿಂಚಿನ ಸಂಚಾರ ನಡೆಸಲಿದ್ದಾರೆ.ಮೇ 6 ರಂದು ಬೆಳಗ್ಗೆ ಶೃಂಗೇರಿಯಲ್ಲಿ ಪ್ರಚಾರ ಮುಗಿಸಿ ಪುತ್ತೂರಿಗೆ ಆಗಮಿಸಲಿದ್ದಾರೆ. ಅನಂತರ ಬಂಟ್ವಾಳ, ಕಾರ್ಕಳ, ಹೊನ್ನಾವರಕ್ಕೆ ಭೇಟಿ ನೀಡಲಿದ್ದು, ಮುರುಡೇಶ್ವರದಲ್ಲಿ […]

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪುಟಿದೆದ್ದ ಕಾರ್ಯಕರ್ತರ ಉತ್ಸಾಹ, ಮಾದರಿ ಕ್ಷೇತ್ರ ಮಾಡುವತ್ತ ಹರೀಶ್ ಪೂಂಜ ದಾಪುಗಾಲು

ಬೆಳ್ತಂಗಡಿ : ಇಲ್ಲಿಯ ಹಳೆಕೋಟೆಯ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರು ಹಾಗೂ ಮಂಡಲ ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್ ರವರ ಸಮ್ಮುಖದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೆಳ್ತಂಗಡಿ ನಗರದ ಬಿಜೆಪಿ ಪ್ರಣಾಳಿಕೆ ಬಿಡುಗಡೆಗೊಳಿಸಿದರು. ಈ ವೇಳೆ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ರಜನಿ ಕುಡ್ವ, ತಾಲೂಕು ಪ್ರಮುಖ್ ಜಯಾನಂದ ಗೌಡ, ಮಹಾಬಲ ಗೌಡ, ಮುಗುಳಿ ನಾರಾಯಣ ರಾವ್, ರಾಜೇಶ್ ಪ್ರಭು ಪಟ್ಟಣ ಪಂಚಾಯತ್ ಸದಸ್ಯರಾದ, ಶರತ್ ಕುಮಾರ್, ಲೋಕೇಶ್, […]

ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ ಅಜೆಕಾರಿನ ಪಾದಯಾತ್ರೆಯಲ್ಲಿ ಭಾಗಿ..

ಅಜೆಕಾರು: ಕಾರ್ಕಳ ಕಾಂಗ್ರೆಸ್ ಅಭ್ಯರ್ಥಿ ಮುನಿಯಲ್ ಉದಯಕುಮಾರ್ ಶೆಟ್ಟಿ ಅವರು ವಿಧಾನಸಭಾ ಚುನಾವಣಾ ಪ್ರಯುಕ್ತ ಕ್ಷೇತ್ರದ ಅಜೆಕಾರು ಪೇಟೆಯಲ್ಲಿ ಪಾದಯಾತ್ರೆ ಮೂಲಕ ಮತದಾರರನ್ನು ಭೇಟಿಯಾದರು. ಆ ಪ್ರಯುಕ್ತ ಅವರು ಮತದಾರರಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಬಜರಂಗದಳವನ್ನು ನಿಷೇಧಿಸುವ ಪ್ರಸ್ತಾವ ಕಾಂಗ್ರೆಸ್ ಮುಂದಿಲ್ಲ: ಪ್ರಸಾದ್ ರಾಜ್ ಕಾಂಚನ್

ಉಡುಪಿ: ಹನುಮಂತ ದೇವರು ಯಾವ ಸಂಘಟನೆಯ ವೈಯುಕ್ತಿಕ ಸೊತ್ತಲ್ಲಾ, ಬಜರಂಗದಳವನ್ನು ಸಮೀಕರಿಸುವ ಮೂಲಕ ಪಕ್ಷವೊಂದು ಭಕ್ತರ ಭಾವನೆಗೆ ಧಕ್ಕೆ ತರುವುದು ಸರಿಯಾದ ನಡೆಯಲ್ಲ. ಹನುಮಂತ ದೇಶ ವಿದೇಶ ಸೇರಿದಂತೆ ಪ್ರತಿ ಭಾರತೀಯನ ಹೃದಯದಲ್ಲಿ ಪೂಜನೀಯ ದೇವರು ಎಂದು ಉಡುಪಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಜರಂಗದಳವನ್ನು ನಿಷೇಧಿಸುವ ಪ್ರಸ್ತಾವ ಕಾಂಗ್ರೆಸ್ ಮುಂದಿಲ್ಲ. ಬಿಜೆಪಿ ಓಟಿಗಾಗಿ ವಾಸ್ತವ ವಿಷಯವನ್ನು ತಿರುಚಿ ಸುಳ್ಳು ಸುದ್ದಿ ಹರಡುತ್ತಿದೆ. ಪ್ರಜ್ಞಾವಂತ […]