ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 3 ನೇ ತಂಡದ ತರಬೇತಿ ಮುಕ್ತಾಯ
ಉಡುಪಿ: ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 3 ನೇ ತಂಡದ ತರಬೇತಿಯ ಸಮಾರೋಪ ಸಮಾರಂಭವು ಇತ್ತೀಚೆಗೆ ಮಲ್ಪೆಯ ಸಿಎಸ್‌ಪಿ ಕೇಂದ್ರ ಕಚೇರಿಯಲ್ಲಿ ನಡೆಯಿತು. ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ಲೋಕಾಯುಕ್ತ ಮಂಗಳೂರು ಪೊಲೀಸ್ ಅಧೀಕ್ಷಕ ಸೈಮನ್ ಸಿ.ಎ, ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ಚಂದ್ರಶೇಖರ ಬಿ.ಎಮ್ ಉಪಸ್ಥಿತರಿದ್ದರು. ತರಬೇತಿಯಲ್ಲಿ ಪ್ರಥಮ ಸ್ಥಾನ […]
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ಪ್ರಚಾರಕರು ಕ್ಷೇತ್ರ ತೊರೆಯಲು ಜಿಲ್ಲಾಧಿಕಾರಿ ಸೂಚನೆ
ಉಡುಪಿ: ಜಿಲ್ಲೆಯಲ್ಲಿ ಮೇ 10 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆ, ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಪ್ರಚಾರಕರು, ಕಾರ್ಯಕರ್ತರು, ಮೆರವಣಿಗೆ ಅಯೋಜಕರು ಸೇರಿದಂತೆ ಮತ್ತಿತರರು ಮೇ 8 ರಂದು ಸಂಜೆ 6 ಗಂಟೆಗೆ ಕ್ಷೇತ್ರ ಬಿಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಮತದಾನವು ಮೇ 10 ರಂದು ನಡೆಯಲಿದ್ದು, ಚುನಾವಣೆಯು ಮುಕ್ತ, ನ್ಯಾಯ […]
ಕಾರ್ಕಳದಲ್ಲಿಂದು ಯೋಗಿ ರೋಡ್ ಶೋ..!!
ಕಾರ್ಕಳ: ನಾಥಪಂಥದ ಕ್ಷಾತ್ರ ತೇಜಸ್ಸಿನ ಯೋಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮೇ 6ರಂದು ಕಾರ್ಕಳಕ್ಕೆ ಆಗಮಿಸಿ ಬಿಜೆಪಿ ಅಭ್ಯರ್ಥಿ ವಿ.ಸುನಿಲ್‌ಕುಮಾರ್ ಅವರ ಪರ ರೋಡ್ ಶೋ ನಡೆಸಲಿದ್ದಾರೆ. ಯೋಗಿ ಆದಿತ್ಯನಾಥ್ ಆಗಮನ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸರು ಬಿಗು ಭದ್ರತೆ ಕೈಗೊಂಡಿದ್ದಾರೆ. ರೋಡ್ ಶೋ ವೇಳೆ ಭದ್ರತೆ ಹಿನ್ನೆಲೆಯಲ್ಲಿ ನಗರದಲ್ಲಿ ಅಂಗಡಿ ಮುಂಗಟ್ಟು ಗಳನ್ನು ಮುಚ್ಚುವಂತೆ ಪೊಲೀಸರು ಈಗಾಗಲೇ ಸೂಚನೆ ನೀಡಿದ್ದಾರೆ. ರೋಡ್ ಶೋ ವೇಳೆ ಪೇಟೆಯೊಳಗೆ ವಾಹನ ಸಂಚಾರಕ್ಕೆ ಅವಕಾಶವಿಲ್ಲದ ಕಾರಣ ವಾಹನ ಸಂಚಾರದ […]
ಮೇ 10 ರಂದು ಆದಿ ಉಡುಪಿ ಸಂತೆ ರದ್ದು: ಉಡುಪಿ ನಗರಸಭೆ
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಕ್ಕೆ ಸಂಬಂಧಿಸಿದಂತೆ, ಮೇ 10 ರಂದು ನಡೆಯುವ ಮತದಾನ ಪ್ರಯುಕ್ತ, ಅಂದು ಬೆಳಗ್ಗೆ 6 ಗಂಟೆಯಿಂದ ಚುನಾವಣೆ ಮುಕ್ತಾಯವಾಗುವವರೆಗೆ ಉಡುಪಿ ನಗರಸಭಾ ವ್ಯಾಪ್ತಿಯ ಆದಿ ಉಡುಪಿಯಲ್ಲಿ ನಡೆಯುವ ಸಂತೆಯನ್ನು ಹಾಗೂ ಉಡುಪಿ ನಗರಸಭಾ ವ್ಯಾಪ್ತಿಯ ಇತರೆ ಕಡೆಗಳಲ್ಲಿ ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಉತ್ಸವಗಳನ್ನು ನಡೆಸುವುದನ್ನು ನಿಷೇಧಿಸಲಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
ಸುಧಾರಿತ ಕಂಪ್ಯೂಟಿಂಗ್ ಕ್ಷೇತ್ರದಲ್ಲಿ ಇತ್ತೀಚಿನ ಪ್ರವೃತ್ತಿಯ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನ
ಬೆಂಗಳೂರು: ಐಸಿಆರ್‌ಎಸಿ – 2023 ಸುಧಾರಿತಕಂಪ್ಯೂಟಿಂಗ್ ಕ್ಷೇತ್ರದಲ್ಲಿ ಇತ್ತೀಚಿನ ಪ್ರವೃತ್ತಿಗಳ ಕುರಿತು ಅಂತಾರಾಷ್ಟ್ರೀಯ ಸಮ್ಮೇಳನವನ್ನು ಮೇ 2 ಮತ್ತು 3 ರಂದು ಬೆಂಗಳೂರಿನ ಸೈಂಟ್ ಜೋಸೆಫ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫರ್ಮೇಷನ್ ಸೈನ್ಸ್, ಸೈಂಟ್‌ಜೋಸೆಫ್ ವಿಶ್ವವಿದ್ಯಾಲಯದ ಎಸ್‌ಜೆಯು ಆಡಿಟೋರಿಯಂನಲ್ಲಿ ಆಯೋಜಿಸಿತ್ತು. ಈ ಸಮ್ಮೇಳನವು ಸಂಶೋಧಕರು, ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು ಮತ್ತು ಕೈಗಾರಿಕೋದ್ಯಮಿಗಳಿಗೆ ತಮ್ಮ ಸಂಶೋಧನಾ ಆವಿಷ್ಕಾರವನ್ನು ವಿಶಿಷ್ಟ ರೀತಿಯಲ್ಲಿ ಪ್ರದರ್ಶಿಸಲು ಮತ್ತು ಚರ್ಚಿಸಲು ವೇದಿಕೆಯನ್ನು ಒದಗಿಸಿತ್ತು. ಐಸಿಆರ್‌ಎಸಿ – 2023 ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನವಾಗಿದ್ದು, ಸೈಂಟ್ ಜೋಸೆಫ್ಸ್ […]